ಮಂಗಳೂರು, ಅ.1: ಎಂ ಆರ್ ಪಿ ಎಲ್ ಘಟಕದಲ್ಲಿ ಬುಧವಾರ ಸಂಭವಿಸಿದ ಭೀಕರ ಸ್ಫೋಟದಲ್ಲಿ ಗುತ್ತಿಗೆ ಕಾರ್ಮಿಕ ಮನೀಶ್ ಕರ್ಕಡ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿ, ಎಂ ಆರ್ ಪಿ ಎಲ್ ಗೇಟ್‌ ಮುಂಭಾಗ ಭಾರೀ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಮೃತರ ಕುಟುಂಬಕ್ಕೆ ನ್ಯಾಯ, ಸೂಕ್ತ ಪರಿಹಾರ ಹಾಗೂ ಕಾರ್ಮಿಕರ ಸುರಕ್ಷತೆ ಖಚಿತಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸುತ್ತಿದ್ದಾರೆ.

ಎಂ ಆರ್ ಪಿ ಎಲ್ ಸ್ಫೋಟದಲ್ಲಿ ಒಬ್ಬ ಕಾರ್ಮಿಕ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಹಿನ್ನೆಲೆಯಲ್ಲಿ ಎಂ ಆರ್ ಪಿ ಎಲ್ ಉದ್ಯೋಗಿಗಳು ಹಾಗೂ ಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗವಹಿಸಿರುವ ಮಾಹಿತಿ ಲಭ್ಯವಾಗಿದೆ.

ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ, ಸ್ಫೋಟಕ್ಕೆ ಕಾರಣವೇನು ಮತ್ತು ಸುರಕ್ಷತಾ ಕ್ರಮಗಳಲ್ಲಿ ಯಾವುದೇ ಲೋಪವಾಗಿದೆಯೇ ಎಂಬುದನ್ನು ಸ್ಪಷ್ಟಪಡಿಸಬೇಕು ಎಂಬ ಬೇಡಿಕೆಯೂ ಕೇಳಿಬರುತ್ತಿದೆ.

ಸೆಪ್ಟೆಂಬರ್‌ 30ರಂದು ಮಧ್ಯಾಹ್ನ Coker Hydrotreater Unitನಲ್ಲಿ ಸ್ಫೋಟ ಸಂಭವಿಸಿತ್ತು. ಸ್ಫೋಟದ ಬಳಿಕ ಮನೀಶ್ ಕರ್ಕಡ ನಾಪತ್ತೆಯಾಗಿದ್ದರು. ನಂತರ ಘಟನಾ ಸ್ಥಳದ ಪರಿಶೀಲನೆ ವೇಳೆ ಅವರು ಮೃತಪಟ್ಟಿರುವುದು ಪತ್ತೆಯಾಗಿತ್ತು.

ಮನೀಶ್

ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ಕುರಿತು ತನಿಖೆ ಮುಂದುವರಿದಿದೆ.

ಇದೀಗ ಎಂ ಆರ್ ಪಿ ಎಲ್ ಗೇಟ್‌ ಬಳಿ ಪ್ರತಿಭಟನೆ ತೀವ್ರಗೊಂಡಿದ್ದು, ಸ್ಥಳದಲ್ಲಿ ಪೊಲೀಸ್ ಭದ್ರತೆಯನ್ನೂ ನಿಯೋಜಿಸಲಾಗಿದೆ.

_Sathish Kapikad

Share.
Leave A Reply

Exit mobile version