
ಮಂಗಳೂರು: ಪ್ರಧಾನಿ ಶ್ರೀ ನರೇಂದ್ರ ಮೋದಿಯವರ 25 ವರ್ಷಗಳ ನಿರಂತರ ಜನಸೇವೆಯ ಪ್ರಯುಕ್ತ ಸೇವಾ ಸಂಕಲ್ಪ ಅಭಿಯಾನದ ಭಾಗವಾಗಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಅಂಗನವಾಡಿ ಕಾರ್ಯಕರ್ತರಿಗೆ, ಆಶಾ ಕಾರ್ಯಕರ್ತೆಯರಿಗೆ, ಸಹಾಯಕಿಯರಿಗೆ ಗೌರವ ಸಮರ್ಪಣೆಯ ಅಂಗಳದ ಉತ್ಸವ ಕಾರ್ಯಕ್ರಮವು ನಡೆಯಿತು.

ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಮಾನ್ಯ ಪ್ರಧಾನಿಗಳು ತಮ್ಮ ಇಡೀ ಜೀವನವನ್ನು ದೇಶಕ್ಕಾಗಿ ಸಮರ್ಪಿಸಿದ್ದಾರೆ. ಅವರ ಬದುಕು ನಮ್ಮಂತಹ ಪ್ರತಿಯೊಬ್ಬ ಕಾರ್ಯಕರ್ತರಿಗೂ ಆದರ್ಶ. ಮೋದಿಜೀ ಹೆಸರಿನಲ್ಲಿ ನಡೆಯುತ್ತಿರುವ ಇಂತಹ ಸೇವಾ ಕಾರ್ಯಗಳು ಅವರಿಗೆ ಜನಸೇವೆಗೆ ಇನ್ನಷ್ಟು ಹೆಚ್ಚಿನ ಶಕ್ತಿ ನೀಡಲಿ ಎಂದರು.
ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ಲಲ್ಲೇಶ್ ಕುಮಾರ್,ಜಿಲ್ಲಾ ಕಾರ್ಯದರ್ಶಿ ಪೂರ್ಣಿಮಾ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಂಜುಳಾ ರಾವ್, ಮಂಡಲ ಮಹಿಳಾ ಮೋರ್ಚಾದ ಅಧ್ಯಕ್ಷೆ ಪೂರ್ಣಿಮಾ ರಾವ್,ಮಂಡಲದ ಯುವ ಮೋರ್ಚಾ ಅಧ್ಯಕ್ಷರು ಅಶ್ವಿತ್ ಕೊಟ್ಟಾರಿ , ದಕ್ಷಿಣ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಪ್ರವೀಣ್ ನಿಡ್ಡೆಲ್, ಮಂಡಲದ ಉಪಾಧ್ಯಕ್ಷರಾದ ಕಿರಣ್ ರೈ,ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಸುಕೇಶ್,ಶಕ್ತಿ ಕೇಂದ್ರ ಅಧ್ಯಕ್ಷರಾದ ಸುರೇಶ್ ಆಚಾರ್, ಮಹಿಳಾ ಮೋರ್ಚಾದ ಪದಾಧಿಕಾರಿಗಳಾದ ಶಬರಿ ಶೆಟ್ಟಿ, ಮಾನಸ ರೈ, ಮಂಡಲ ಕಾರ್ಯದರ್ಶಿ ಸುಮತಿ ಚಂದ್ರ ಶೇಖರ್, ಮತ್ತುಕ್ಲಬ್ ಅಧ್ಯಕ್ಷರಾದ ಜಿತೇಶ್, ಮತ್ತು ವಾರ್ಡಿನ ಪ್ರಮುಖರು ಉಪಸ್ಥಿತರಿದ್ದರು.
_Sathish Kapikad


