Close Menu
SK Media NewsSK Media News
    What's Hot

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026

    ಮಂಗಳ ಕ್ರೀಡಾಂಗಣಕ್ಕೆ 20 ಕೋಟಿ ಅನುದಾನ : ಅಭಿವೃದ್ಧಿ ಯೋಜನೆ ಅನುಷ್ಠಾನದ ಬಗ್ಗೆ ಮೂಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ 

    October 25, 2026

    ಪೋಲಿಯೋ ಮುಕ್ತ ಸಮಾಜ ನಿರ್ಮಾಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯ: ರೋಟರಿ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್

    October 25, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ನೂತನ 250 ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ
    ಕರಾವಳಿ

    ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ನೂತನ 250 ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    October 8, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ​ಮಂಗಳೂರು: ಗುಣಮಟ್ಟದ ವೈದ್ಯಕೀಯ ಶಿಕ್ಷಣ ನೀಡುವುದು ಹಾಗೂ ಸಮಾಜಸೇವೆ ಸಲ್ಲಿಸುವುದು ನಮ್ಮ ಸಂಸ್ಥೆಯ ಮೂಲ ಧ್ಯೇಯ, ಉದ್ದೇಶವಾಗಿದೆ. ವಿದ್ಯಾರ್ಥಿಗಳು ತಮ್ಮ ವೈದ್ಯಕೀಯ ವೃತ್ತಿ ಜೀವನವನ್ನು ಪ್ರಾಮಾಣಿಕತೆ ಮತ್ತು ಸೇವಾ ಮನೋಭಾವದಿಂದ ರೂಪಿಸಿಕೊಳ್ಳಬೇಕು ಎಂದು ಕಣಚೂರು ಇಸ್ಲಾಮಿಕ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ಡಾ. ಹಾಜಿ ಯು.ಕೆ. ಮೋನು ಕರೆ ನೀಡಿದ್ದಾರೆ.

    ದಿ.7.10.2026ರಂದು ಕಣಚೂರು ವೈದ್ಯಕೀಯ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಜರುಗಿದ 2026ರ ಪ್ರಥಮ ಸಾಲಿನ 250 ಎಂ.ಬಿ.ಬಿ.ಎಸ್. ವಿದ್ಯಾರ್ಥಿಗಳಿಗಾಗಿ ಸಾಂಪ್ರದಾಯಿಕ ಓರಿಯೆಂಟೇಶನ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ವಿದ್ಯಾರ್ಥಿಗಳ ವೈಯಕ್ತಿಕ ಭದ್ರತೆ ಹಾಗೂ ಸರ್ವತೋಮುಖ ಬೆಳವಣಿಗೆಗೆ ಸಂಸ್ಥೆ ಸಂಪೂರ್ಣ ಬದ್ಧವಾಗಿದೆ ಎಂದು ಪೋಷಕರಿಗೆ ಧೈರ್ಯ ತುಂಬಿದರು.
    ನೂತನವಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣದ ಶೈಕ್ಷಣಿಕ ಪಯಣ, ಕಾಲೇಜಿನ ವಾತಾವರಣ, ನಿಯಮಾವಳಿಗಳು ಹಾಗೂ ಮೂಲಸೌಕರ್ಯಗಳ ಕುರಿತು ಸಮಗ್ರ ಮಾರ್ಗದರ್ಶನ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

    ಸಂಸ್ಥೆಯ ನಿರ್ದೇಶಕ ಅಬ್ದುಲ್ ರಹಿಮಾನ್ ಮಾತನಾಡಿ, ಕಾಲೇಜಿನ ಮೂಲಸೌಕರ್ಯ, ಶಿಸ್ತು, ಹಾಸ್ಟೆಲ್ ಸೌಲಭ್ಯಗಳು ಮತ್ತು ಭದ್ರತಾ ವ್ಯವಸ್ಥೆಗಳ ಕುರಿತು ಸಮಗ್ರ ಮಾಹಿತಿ ನೀಡಿ, ಪೋಷಕರು ತಮ್ಮ ಮಕ್ಕಳ ಶೈಕ್ಷಣಿಕ ಪ್ರಗತಿಯ ಬಗ್ಗೆ ಆಡಳಿತ ಮಂಡಳಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು ಎಂದು ಸಲಹೆ ನೀಡಿದರು.

    ಸಂಸ್ಥೆಯ ಡೀನ್ ಡಾ. ಶಹನವಾಜ್ ಮಣಿಪಾಡಿ ಸ್ವಾಗತಿಸಿ, ಕಾಲೇಜು ಆವರಣದಲ್ಲಿ ರ್‍ಯಾಗಿಂಗ್, ಗುಂಪು ಹೊಡೆದಾಟ, ಮಾದಕ ವಸ್ತುಗಳ ಸೇವನೆ ಹಾಗೂ ಅಶಿಸ್ತಿನ ವರ್ತನೆಗೆ ಸಂಪೂರ್ಣ ನಿಷೇಧವಿದ್ದು, ಶೂನ್ಯ ಸಹಿಷ್ಣುತೆ ನೀತಿಯನ್ನು ಅನುಸರಿಸಲಾಗುತ್ತಿದೆ ಎಂದು ಸೂಚಿಸಿದರು.

    ಕಣಚೂರು ಆರೋಗ್ಯ ವಿಜ್ಞಾನ ಸಲಹಾ ಸಮಿತಿ ಅಧ್ಯಕ್ಷ ಡಾ. ಮೊಹಮ್ಮದ್ ಇಸ್ಮಾಯಿಲ್ ಪ್ರೇರಣಾದಾಯಕ ಭಾಷಣ ಮಾಡಿದರು.

    ವೇದಿಕೆಯಲ್ಲಿ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಡಾ. ರೋಹನ್ ಎಸ್. ಮೋನಿಸ್, ಕಣಚೂರು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅಂಜನ್ ಕುಮಾರ್ ಉಪಸ್ಥಿತರಿದ್ದರು.

    ವಿದ್ಯಾರ್ಥಿಗಳಾದ ಸಕೀನಾ ಹಾಗೂ ಇರ್ಫಾನ್ ನಿರೂಪಿಸಿದರು. ಅಂಗ ವಿಚ್ಛೇದನ ತಂತ್ರಶಾಸ್ತ ವಿಭಾಗದ ಮುಖ್ಯಸ್ಥ ಡಾ. ರೋಷನ್ ವಂದಿಸಿದರು.

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleಖಡಕ್ ಡೈಲಾಗ್ ಡೆಲಿವರಿ ಹಾಗೂ ಅದ್ಭುತ ಅಭಿನಯದ ಮೂಲಕ ಚಿತ್ರರಂಗದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದ ಭಾರತೀಯ ಚಿತ್ರರಂಗದ ಖ್ಯಾತ ಹಿರಿಯ ನಟ ನಾನಾ ಪಾಟೇಕರ್ ವಿಧಿವಶ
    Next Article ಪತ್ರಕರ್ತರಿಂದ ವಿಶಿಷ್ಟ ಸೇವಾಕಾರ್ಯ: ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಎದುರಲ್ಲಿ ಡಂಪಿಂಗ್ ಯಾರ್ಡ್ ನಂತಿದ್ದ ಬಸ್ ನಿಲ್ದಾಣಕ್ಕೆ ಮುಕ್ತಿ ನೀಡಿ ಸಮಾಜಕ್ಕೆ ಮಾದರಿಯಾದ ” ಮೀಡಿಯಾ ಮನಸುಗಳು”

    Related Posts

    ಕರಾವಳಿ

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026
    ಕರಾವಳಿ

    ಮಂಗಳ ಕ್ರೀಡಾಂಗಣಕ್ಕೆ 20 ಕೋಟಿ ಅನುದಾನ : ಅಭಿವೃದ್ಧಿ ಯೋಜನೆ ಅನುಷ್ಠಾನದ ಬಗ್ಗೆ ಮೂಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ 

    October 25, 2026
    ಕರಾವಳಿ

    ಪೋಲಿಯೋ ಮುಕ್ತ ಸಮಾಜ ನಿರ್ಮಾಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯ: ರೋಟರಿ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್

    October 25, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.