Close Menu
SK Media NewsSK Media News
    What's Hot

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026

    ಮಂಗಳ ಕ್ರೀಡಾಂಗಣಕ್ಕೆ 20 ಕೋಟಿ ಅನುದಾನ : ಅಭಿವೃದ್ಧಿ ಯೋಜನೆ ಅನುಷ್ಠಾನದ ಬಗ್ಗೆ ಮೂಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ 

    October 25, 2026

    ಪೋಲಿಯೋ ಮುಕ್ತ ಸಮಾಜ ನಿರ್ಮಾಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯ: ರೋಟರಿ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್

    October 25, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಮೂಡುಬಿದಿರೆ: 31ನೇ ಆಳ್ವಾಸ್ ವಿರಾಸತ್ ಹಾಗೂ 17ನೇ ಆಳ್ವಾಸ್ ನುಡಿಸಿರಿಯನ್ನು ಒಗ್ಗೂಡಿಸಿ ಐದು ದಿನಗಳ “ಆಳ್ವಾಸ್ ನುಡಿಸಿರಿ-ವಿರಾಸತ್” ಕಾರ್ಯಕ್ರಮಕ್ಕೆ ಜ.6ರಿಂದ ಚಾಲನೆ
    ಕರಾವಳಿ

    ಮೂಡುಬಿದಿರೆ: 31ನೇ ಆಳ್ವಾಸ್ ವಿರಾಸತ್ ಹಾಗೂ 17ನೇ ಆಳ್ವಾಸ್ ನುಡಿಸಿರಿಯನ್ನು ಒಗ್ಗೂಡಿಸಿ ಐದು ದಿನಗಳ “ಆಳ್ವಾಸ್ ನುಡಿಸಿರಿ-ವಿರಾಸತ್” ಕಾರ್ಯಕ್ರಮಕ್ಕೆ ಜ.6ರಿಂದ ಚಾಲನೆ

    October 8, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ 31ನೇ ಆಳ್ವಾಸ್ ವಿರಾಸತ್ ಹಾಗೂ 17ನೇ ಆಳ್ವಾಸ್ ನುಡಿಸಿರಿಯನ್ನು ಒಗ್ಗೂಡಿಸಿ ‘ಆಳ್ವಾಸ್ ನುಡಿಸಿರಿ-ವಿರಾಸತ್’ ಕಾರ್ಯಕ್ರಮವು ಜ.6ರಿಂದ 10ರವರೆಗೆ ಐದು ದಿನಗಳ ಕಾಲ ಮೂಡುಬಿದಿರೆಯ ವಿದ್ಯಾಗಿರಿಯಲ್ಲಿ ಆಯೋಜಿಸಲಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ

    ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಆಳ್ವಾಸ್ ನುಡಿಸಿರಿಯ ಪರಿಕಲ್ಪನೆ ‘ಕನ್ನಡದ ಮನಸ್ಸು, ಭವಿಷ್ಯದ ಕನಸು’ ಆಗಿದ್ದು, ಯುವಜನತೆಯನ್ನು ಕೇಂದ್ರವಾಗಿಟ್ಟುಕೊಂಡು ಕನ್ನಡ ನಾಡು-ನುಡಿ, ಸಂಸ್ಕೃತಿ ಹಾಗೂ ಅಸ್ಮಿತೆಯನ್ನು ಉಳಿಸಿಕೊಂಡು ಭವಿಷ್ಯ ನಿರ್ಮಿಸುವ ಆಶಯ ಹೊಂದಿದೆ ಎಂದರು.

    ಆಳ್ವಾಸ್ ನುಡಿಸಿರಿ-2026ರ ಸರ್ವಾಧ್ಯಕ್ಷರಾಗಿ ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ ಹಾಗೂ ಉದ್ಘಾಟಕರಾಗಿ ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ಭಾಗವಹಿಸಲಿದ್ದಾರೆ. ಆಳ್ವಾಸ್ ವಿರಾಸತ್ ಉದ್ಘಾಟನಾ ಸಮಾರಂಭದಲ್ಲಿ ಶಾಸ್ತ್ರೀಯ ಹಾಗೂ ಜಾನಪದ ಕ್ಷೇತ್ರದ ಸಾಧಕರಿಗೆ ವಿರಾಸತ್ ಪ್ರಶಸ್ತಿ ಪ್ರದಾನ ಮಾಡಲಾಗುವುದು.

    ಕಾರ್ಯಕ್ರಮದ ಅಂಗವಾಗಿ ‘ಹಸಿರು ಸಂವಾದ’, ವಿದ್ಯಾರ್ಥಿ ಸಿರಿ, ಯುವಸಿರಿ ಹಾಗೂ 800ಕ್ಕೂ ಅಧಿಕ ಯುವ ಕಲಾವಿದರಿಗೆ ಪ್ರದರ್ಶನದ ಅವಕಾಶ ಕಲ್ಪಿಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ 5 ಸಾವಿರಕ್ಕೂ ಅಧಿಕ ಸ್ಕೌಟ್ಸ್, ಗೈಡ್ಸ್ ಹಾಗೂ ರೋವರ್ಸ್ ಭಾಗವಹಿಸಲಿದ್ದಾರೆ.

    ಇದರೊಂದಿಗೆ ಕೃಷಿ, ವಿಜ್ಞಾನ, ಆಹಾರ, ಪುಸ್ತಕ ಹಾಗೂ ಕಲಾ ಮೇಳಗಳು ನಡೆಯಲಿವೆ. ಐದು ದಿನಗಳ ಪ್ರತಿನಿಧಿ ಶುಲ್ಕವನ್ನು ₹500 ನಿಗದಿ ಪಡಿಸಲಾಗಿದೆ. ಸಾಹಿತ್ಯಾಸಕ್ತರು, ಕಲಾಭಿಮಾನಿಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದರು.

    ಪತ್ರಿಕಾಗೋಷ್ಠಿಯಲ್ಲಿ ನುಡಿಸಿರಿ-ವಿರಾಸತ್‌ನ ಕಾರ್ಯದರ್ಶಿ ವೇಣುಗೋಪಾಲ ಶೆಟ್ಟಿ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯ ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.

    _Sathish Kapikad

    Share. Facebook Twitter Pinterest LinkedIn Email WhatsApp
    Previous Articleಪತ್ರಕರ್ತರಿಂದ ವಿಶಿಷ್ಟ ಸೇವಾಕಾರ್ಯ: ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಎದುರಲ್ಲಿ ಡಂಪಿಂಗ್ ಯಾರ್ಡ್ ನಂತಿದ್ದ ಬಸ್ ನಿಲ್ದಾಣಕ್ಕೆ ಮುಕ್ತಿ ನೀಡಿ ಸಮಾಜಕ್ಕೆ ಮಾದರಿಯಾದ ” ಮೀಡಿಯಾ ಮನಸುಗಳು”
    Next Article ಎನ್‌ಐಟಿಕೆ ಸುರತ್ಕಲ್‌ನಲ್ಲಿ 3 ಕೋಟಿ ಲೀಟರ್ ಸಾಮರ್ಥ್ಯದ ಮಳೆನೀರು ಸಂಗ್ರಹ ವ್ಯವಸ್ಥೆ ಕಾರ್ಯಾರಂಭ : ಸಂಗ್ರಹಿತ ಮಳೆನೀರು ಶುದ್ಧೀಕರಣ ಘಟಕಕ್ಕೆ, ಅಲ್ಲಿಂದ ಕ್ಯಾಂಪಸ್ ಜಲಜಾಲಕ್ಕೆ ಸಂಪರ್ಕ

    Related Posts

    ಕರಾವಳಿ

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026
    ಕರಾವಳಿ

    ಮಂಗಳ ಕ್ರೀಡಾಂಗಣಕ್ಕೆ 20 ಕೋಟಿ ಅನುದಾನ : ಅಭಿವೃದ್ಧಿ ಯೋಜನೆ ಅನುಷ್ಠಾನದ ಬಗ್ಗೆ ಮೂಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ 

    October 25, 2026
    ಕರಾವಳಿ

    ಪೋಲಿಯೋ ಮುಕ್ತ ಸಮಾಜ ನಿರ್ಮಾಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯ: ರೋಟರಿ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್

    October 25, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.