Close Menu
SK Media NewsSK Media News
    What's Hot

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026

    ಮಂಗಳ ಕ್ರೀಡಾಂಗಣಕ್ಕೆ 20 ಕೋಟಿ ಅನುದಾನ : ಅಭಿವೃದ್ಧಿ ಯೋಜನೆ ಅನುಷ್ಠಾನದ ಬಗ್ಗೆ ಮೂಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ 

    October 25, 2026

    ಪೋಲಿಯೋ ಮುಕ್ತ ಸಮಾಜ ನಿರ್ಮಾಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯ: ರೋಟರಿ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್

    October 25, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಬಂಟ್ಸ್ ಹಾಸ್ಟೆಲ್ : 20ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಯಶಸ್ಸಿಗೆ ಶ್ರಮಿಸಿದವರಿಗೆ ಧನ್ಯೋತ್ಸವ
    ಕರಾವಳಿ

    ಬಂಟ್ಸ್ ಹಾಸ್ಟೆಲ್ : 20ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಯಶಸ್ಸಿಗೆ ಶ್ರಮಿಸಿದವರಿಗೆ ಧನ್ಯೋತ್ಸವ

    October 9, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್‌ನಲ್ಲಿ ನಡೆದ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಯಶಸ್ಸಿಗೆ ಶ್ರಮಿಸಿದ ಕಾರ್ಯಕರ್ತರಿಗೆ ಧನ್ಯೋತ್ಸವ ಕಾರ್ಯಕ್ರಮ ಬಂಟ್ಸ್ ಹಾಸ್ಟೇಲ್ ಬಳಿ ಇರುವ ಶ್ರೀಮತಿ ಗೀತಾ ಎಸ್.ಎಂ. ಶೆಟ್ಟಿ ಸಭಾಂಗಣದಲ್ಲಿ ಆಯೋಜಿಸಲಾಯಿತು.

    ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಜಯಶೀಲ ಅಡ್ಯoತಾಯ ಅಡ್ಯಾರ್ ಗುತ್ತು ಅವರು ಪ್ರಸ್ತಾವನೆಗೈದು ಮಾತನಾಡಿ, 3 ದಿನಗಳ ಕಾಲ ಆಯೋಜಿಸಲಾದ ಗಣೇಶೋತ್ಸವ ಅತ್ಯಂತ ಶ್ರದ್ಧಾ ಭಕ್ತಿಯಿಂದ ನಡೆದಿದ್ದು, ಈ ನಿಟ್ಟಿನಲ್ಲಿ ಫಲಾಪೇಕ್ಷೆ ಇಲ್ಲದೆ ದುಡಿದ ಕಾರ್ಯಕರ್ತ ಬಂಧುಗಳು ಅಭಿನಂದನಾರ್ಹರಾಗಿದ್ದಾರೆ ಎಂದರು.

    ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ, ಸಿದ್ದಿ ವಿನಾಯಕ ಪ್ರತಿಷ್ಠಾನದ ಮ್ಯಾನೆಜಿಂಗ್ ಟ್ರಸ್ಟಿ ಅಜಿತ್ ಕುಮಾರ್ ರೈ ಮಾಲಾಡಿ ಅವರು ಮಾತನಾಡಿ, ಸಮಿತಿಯ ನೂರಾರು ಮಂದಿ ಮನಪೂರ್ವಕವಾಗಿ ದುಡಿದ ಪರಿಣಾಮವಾಗಿ ಗಣೇಶೋತ್ಸವದ ಎಲ್ಲ ಕಾರ್ಯಕ್ರಮಗಳು ಅತ್ಯಂತ ಯಶಸ್ವಿಯಾಗಲು ಸಾಧ್ಯವಾಯಿತು ಎಂದರು.

    ಸಿದ್ಧಿವಿನಾಯಕ ಪ್ರತಿಷ್ಟಾನದ ಟ್ರಸ್ಟಿ ಡಾ.ಆಶಾಜ್ಯೋತಿ ರೈ ಅವರು ಬಂಟ ಕಲಾ ಸಂಗಮದ ಬಗ್ಗೆ ಹಾಗೂ ಸಂಚಾಲಕ ಕಿರಣ್ ಪಕ್ಕಳ ಅವರು ಬಂಟ ಕ್ರೀಡಾಕೂಟದ ಯಶಸ್ಸಿನ ಬಗ್ಗೆ ಮಾತನಾಡಿದರು. ಸಮಿತಿಯ ಸಂಚಾಲಕ ದಿವಾಕರ ಸಾಮಾನಿ ಚೇಳಾರ್ ಗುತ್ತು ಅವರು ವಿವಿಧ ಉಪಸಮಿತಿಗಳ ಕೆಲಸ ಕಾರ್ಯಗಳನ್ನು ಶ್ಲಾಘಿಸಿದರು. ಕೋಶಾಧಿಕಾರಿ ಪ್ರತಿಮಾ ಶೆಟ್ಟಿ ಲೆಕ್ಕಪತ್ರದ ವಿವರ ನೀಡಿದರು.

    ಬಂಟರ ಮಾತೃ ಸಂಘದ ಕಾರ್ಯದರ್ಶಿ ಕರುಣಾಕರ ಶೆಟ್ಟಿ, ಜೊತೆ ಕಾರ್ಯದರ್ಶಿ ಪದ್ಮನಾಭ ಶೆಟ್ಟಿ, ಕೋಶಾಧಿಕಾರಿ ಸಿಎ ರಾಮಮೋಹನ ರೈ, ಸಿದ್ಧಿವಿನಾಯಕ ಪ್ರತಿಷ್ಟಾನದ ಟ್ರಸ್ಟಿಗಳಾದ ಶೆಡ್ಡೆ ಮಂಜುನಾಥ ಭಂಡಾರಿ, ಕೃಷ್ಣಪ್ರಸಾದ್ ರೈ, ರವಿರಾಜ ಶೆಟ್ಟಿ ನಿಟ್ಟೆಗುತ್ತು ಮತ್ತಿತರರು ಉಪಸ್ಥಿತರಿದ್ದರು.

    ಗಣೇಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಸದಾಶಿವ ಶೆಟ್ಟಿ ಬಿಜೈ ಸ್ವಾಗತಿಸಿದರು. ಸಮಿತಿಯ ಸಮನ್ವಯಕಾರ ಸತೀಶ್ ಶೆಟ್ಟಿ ಕೊಡಿಯಾಲಬೈಲ್ ಕಾರ್ಯಕ್ರಮ ನಿರೂಪಿಸಿದರು.

    _ Sathish Kapikad

    Share. Facebook Twitter Pinterest LinkedIn Email WhatsApp
    Previous Articleಮೈತ್ರಿ ಮಲ್ಲಿ ವಿಕಾಸ್ : “ಮಂಗಳೂರಿನಿಂದ ಪ್ಯಾರಿಸ್ ರನ್‌ವೇವರೆಗೆ”— ಸೌಂದರ್ಯ, ಆತ್ಮವಿಶ್ವಾಸ ಮತ್ತು ಹೆಮ್ಮೆಯ ಪಯಣ
    Next Article ಅಕ್ಟೋಬರ್ 11ರಂದು ಉರ್ವಸ್ಟೋರ್ ಶ್ರೀ ಮಹಾಗಪತಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ “ಮಹಾ ಚಂಡಿಕಾ ಯಾಗ” : ಕ್ಷೇತ್ರ ದರ್ಶನದ 10 ಕೆ.ಎಸ್.ಆರ್.ಟಿ. ಸಿ ಬಸ್ ಗಳಿಗೆ ಚಾಲನೆ

    Related Posts

    ಕರಾವಳಿ

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026
    ಕರಾವಳಿ

    ಮಂಗಳ ಕ್ರೀಡಾಂಗಣಕ್ಕೆ 20 ಕೋಟಿ ಅನುದಾನ : ಅಭಿವೃದ್ಧಿ ಯೋಜನೆ ಅನುಷ್ಠಾನದ ಬಗ್ಗೆ ಮೂಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ 

    October 25, 2026
    ಕರಾವಳಿ

    ಪೋಲಿಯೋ ಮುಕ್ತ ಸಮಾಜ ನಿರ್ಮಾಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯ: ರೋಟರಿ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್

    October 25, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.