Close Menu
SK Media NewsSK Media News
    What's Hot

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026

    ಮಂಗಳ ಕ್ರೀಡಾಂಗಣಕ್ಕೆ 20 ಕೋಟಿ ಅನುದಾನ : ಅಭಿವೃದ್ಧಿ ಯೋಜನೆ ಅನುಷ್ಠಾನದ ಬಗ್ಗೆ ಮೂಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ 

    October 25, 2026

    ಪೋಲಿಯೋ ಮುಕ್ತ ಸಮಾಜ ನಿರ್ಮಾಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯ: ರೋಟರಿ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್

    October 25, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಮಂಗಳೂರು ದಸರಾ ಉದ್ಘಾಟನೆಗೆ ನಿಗದಿಯಾಗಿದ್ದ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಪ್ರವಾಸ ದಿಢೀರ್ ರದ್ದು : ಜೆಡಿಎಸ್ ಜಿಲ್ಲಾ ಅಧ್ಯಕ್ಷ ಅಕ್ಷಿತ್ ಸುವರ್ಣ ತೀವ್ರ ಆಕ್ರೋಶ
    ಕರಾವಳಿ

    ಮಂಗಳೂರು ದಸರಾ ಉದ್ಘಾಟನೆಗೆ ನಿಗದಿಯಾಗಿದ್ದ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಪ್ರವಾಸ ದಿಢೀರ್ ರದ್ದು : ಜೆಡಿಎಸ್ ಜಿಲ್ಲಾ ಅಧ್ಯಕ್ಷ ಅಕ್ಷಿತ್ ಸುವರ್ಣ ತೀವ್ರ ಆಕ್ರೋಶ

    October 12, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: ಕರಾವಳಿಯ ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವವನ್ನು ಉದ್ಘಾಟಿಸಬೇಕಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಮಂಗಳೂರು ಪ್ರವಾಸವನ್ನು ರದ್ದುಗೊಳಿಸಿರುವುದು ಕರಾವಳಿಯ ಜನರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯದ ಪ್ರಮುಖ ಧಾರ್ಮಿಕ ಮತ್ತು ಸಾಂಸ್ಕೃತಿಕ ಉತ್ಸವಗಳಲ್ಲಿ ಒಂದಾದ ಮಂಗಳೂರು ದಸರಾಕ್ಕೆ ಮುಖ್ಯಮಂತ್ರಿ ನೀಡಬೇಕಿದ್ದ ಆದ್ಯತೆಯ ಕುರಿತು ಇದೀಗ ಪ್ರಶ್ನೆಗಳು ಎದ್ದಿವೆ ಎಂದು ಯುವ ಜನತಾದಳ (ಜಾತ್ಯತೀತ) ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಅಕ್ಷಿತ್ ಸುವರ್ಣ ಹೇಳಿದ್ದಾರೆ.

    ಮಂಗಳೂರು ದಸರಾ ಕೇವಲ ಒಂದು ಉತ್ಸವವಲ್ಲ; ಅದು ತುಳುನಾಡಿನ ಧಾರ್ಮಿಕ ನಂಬಿಕೆ, ಸಾಂಸ್ಕೃತಿಕ ಪರಂಪರೆ ಹಾಗೂ ಜನರ ಭಾವನೆಗಳ ಪ್ರತೀಕವಾಗಿದೆ. ಇಂತಹ ಮಹತ್ವದ ಉತ್ಸವವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ ಎಂಬ ನಿರೀಕ್ಷೆಯಲ್ಲಿ ಸಾರ್ವಜನಿಕರು ಹಾಗೂ ಆಯೋಜಕರು ಸಿದ್ಧತೆಗಳನ್ನು ಮಾಡಿಕೊಂಡಿದ್ದರು. ಆದರೆ, ಕೊನೆಯ ಕ್ಷಣದಲ್ಲಿ ಪ್ರವಾಸ ರದ್ದಾಗಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

    ಮುಖ್ಯಮಂತ್ರಿಗಳ ಪ್ರವಾಸ ರದ್ದತಿಗೆ ಅನಿವಾರ್ಯ ಕಾರಣಗಳಿರಬಹುದು. ಆದರೆ, ಮಂಗಳೂರು ದಸರಾ ಮಹೋತ್ಸವದಂತಹ ಐತಿಹಾಸಿಕ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕಾದ ಜವಾಬ್ದಾರಿಯನ್ನು ಹೊಂದಿದೆ. ಮುಖ್ಯಮಂತ್ರಿಗಳ ಗೈರುಹಾಜರಿಯ ಕುರಿತು ಸಾರ್ವಜನಿಕರಲ್ಲಿ ಮೂಡಿರುವ ಪ್ರಶ್ನೆಗಳಿಗೆ ಸರ್ಕಾರ ಉತ್ತರ ನೀಡಬೇಕು.

    ಮಂಗಳೂರು ದಸರಾ ವಿಶ್ವದ ಗಮನ ಸೆಳೆಯುವಂತಹ ಉತ್ಸವವಾಗಿ ಬೆಳೆದಿದ್ದು, ಅದರ ಗೌರವ ಮತ್ತು ಘನತೆಯನ್ನು ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ.

    ರಾಜಕೀಯ ಭಿನ್ನಾಭಿಪ್ರಾಯಗಳು ಏನೇ ಇರಲಿ, ಕರಾವಳಿಯ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಗೆ ಸಲ್ಲಬೇಕಾದ ಗೌರವದಲ್ಲಿ ಯಾವುದೇ ಕೊರತೆಯಾಗಬಾರದು ಎಂದು ಅಕ್ಷಿತ್ ಸುವರ್ಣ ಆಗ್ರಹಿಸಿದ್ದಾರೆ.

    _Sathish Kapikad

    Share. Facebook Twitter Pinterest LinkedIn Email WhatsApp
    Previous Articleಮಂಗಳೂರು ಪತ್ರಿಕಾ ಭವನದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ “ಅಕ್ಷರ ಸಭಾಂಗಣ” ಅ.14ರಂದು ಉದ್ಘಾಟನೆ
    Next Article ಭರದಿಂದ ಸಾಗುತ್ತಿರುವ ಕಾವೂರು ಬಂಟರ ಭವನದ ಕಾಮಗಾರಿ: ಉದ್ಘಾಟನೆ ಕಾರ್ಯಕ್ರಮದ ರೂಪುರೇಷೆಯ ಬಗ್ಗೆ ವಿಶೇಷ ಸಭೆ

    Related Posts

    ಕರಾವಳಿ

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026
    ಕರಾವಳಿ

    ಮಂಗಳ ಕ್ರೀಡಾಂಗಣಕ್ಕೆ 20 ಕೋಟಿ ಅನುದಾನ : ಅಭಿವೃದ್ಧಿ ಯೋಜನೆ ಅನುಷ್ಠಾನದ ಬಗ್ಗೆ ಮೂಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ 

    October 25, 2026
    ಕರಾವಳಿ

    ಪೋಲಿಯೋ ಮುಕ್ತ ಸಮಾಜ ನಿರ್ಮಾಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯ: ರೋಟರಿ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್

    October 25, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.