ಮಂಗಳೂರು. ಅಕ್ಟೋಬರ್ .14: ಸಹಕಾರ ರಂಗದ ಧೀಮಂತ ನಾಯಕ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಆರೋಗ್ಯದ ಶುಭ ಹಾರೈಕೆಯೊಂದಿಗೆ ಸಮಾಜಮುಖಿ ಸೇವಾ ಕಾರ್ಯಗಳ ಉದ್ಘಾಟನೆ , ಅಶಕ್ತರಿಗೆ ನೆರವು ಹಾಗೂ ಉಡುಪಿ ಜಿಲ್ಲಾಡಳಿತಕ್ಕೆ ವಾಹನ ಹಸ್ತಾಂತರಿಸುವ ಕಾರ್ಯಕ್ರಮವು ಅಕ್ಟೋಬರ್- 15 ಗುರುವಾರ ಮಧ್ಯಾಹ್ನ 12.00 ಗಂಟೆಗೆ ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ ಸಿಡಿಸಿಸಿ ಬ್ಯಾಂಕ್) ಸಭಾಂಗಣದಲ್ಲಿ ನಡೆಯಲಿದೆ.

ಈ  ಕಾರ್ಯಕ್ರಮದಲ್ಲಿ ಉಡುಪಿ ಜಗದ್ಗುರು ಶ್ರೀಮಧ್ವಾಚಾರ್ಯ ಮಹಾ ಸಂಸ್ಥಾನ ಶ್ರೀ ಪೇಜಾವರ ಅಧೋಕ್ಷಜ ಮಠದ ಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರು ಭಾಗವಹಿಸಿ, ಆಶೀರ್ವಚನ ನೀಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾದ ಡಾ. ಎಂ. ಮೋಹನ್ ಆಳ್ವ ಹಾಗೂ ಉಡುಪಿ ಜಿಲ್ಲಾಧಿಕಾರಿ ಶ್ರೀಮತಿ ಸ್ವರೂಪ ಟಿ.ಕೆ.  ಭಾಗವಹಿಸಲಿದ್ದಾರೆ ಎಂದು ಬ್ಯಾಂಕ್ ನ ಪ್ರಕಟಣೆ ತಿಳಿಸಿದೆ.

_Sathish Kapikad 

Share.
Leave A Reply

Exit mobile version