Close Menu
SK Media NewsSK Media News
    What's Hot

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026

    ಮಂಗಳ ಕ್ರೀಡಾಂಗಣಕ್ಕೆ 20 ಕೋಟಿ ಅನುದಾನ : ಅಭಿವೃದ್ಧಿ ಯೋಜನೆ ಅನುಷ್ಠಾನದ ಬಗ್ಗೆ ಮೂಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ 

    October 25, 2026

    ಪೋಲಿಯೋ ಮುಕ್ತ ಸಮಾಜ ನಿರ್ಮಾಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯ: ರೋಟರಿ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್

    October 25, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಮಂಗಳೂರು ನಗರದ ಅಭಿವೃದ್ಧಿಯಲ್ಲಿ ಮಾಧ್ಯಮದ ಕೊಡುಗೆ ಅಪಾರ : ಪ್ರೆಸ್ ಕ್ಲಬ್ ನಲ್ಲಿ ಅಕ್ಷರ ಸಭಾಂಗಣ ಉದ್ಘಾಟಿಸಿ ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ 
    ಕರಾವಳಿ

    ಮಂಗಳೂರು ನಗರದ ಅಭಿವೃದ್ಧಿಯಲ್ಲಿ ಮಾಧ್ಯಮದ ಕೊಡುಗೆ ಅಪಾರ : ಪ್ರೆಸ್ ಕ್ಲಬ್ ನಲ್ಲಿ ಅಕ್ಷರ ಸಭಾಂಗಣ ಉದ್ಘಾಟಿಸಿ ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ 

    October 14, 20262 Mins Read
    Share Facebook Twitter Pinterest LinkedIn Email WhatsApp
    {"AIGC":{"ContentPropagator":"001191441900557262083U10400","Label":"1","ReservedCode1":"","ProduceID":"f507bb57-5e91-46e5-a2d1-cb31155f7998","ReservedCode2":"","PropagateID":"f507bb57-5e91-46e5-a2d1-cb31155f7998","ContentProducer":"001191441900557262083U10400"}};
    Share
    Facebook Twitter LinkedIn Pinterest Email WhatsApp

    ಮಾಧ್ಯಮದ ಮೌಲ್ಯ ಕಾಪಾಡುವುದು ಪತ್ರಕರ್ತರ ಕರ್ತವ್ಯ -ಡಾ. ಎಂ.ಮೋಹನ್ ಆಳ್ವ

    ಮಂಗಳೂರು : ರಾಜಕೀಯ, ಶಿಕ್ಷಣ, ಆರೋಗ್ಯ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಹಿಂದೆ ಇದ್ದ ಮೌಲ್ಯಗಳು ಮತ್ತು ಪಾವಿತ್ರ‍್ಯತೆ ಕುಸಿಯುತ್ತಿರುವುದು ಕಳವಳಕಾರಿ ಬೆಳವಣಿಗೆ. ಇಂತಹ ಸಂದರ್ಭದಲ್ಲಿ ಪತ್ರಿಕಾ ಮಾಧ್ಯಮ ತನ್ನ ನೈತಿಕ ಜವಾಬ್ದಾರಿಯನ್ನು ಮರೆಯಬಾರದು. ಮಾಧ್ಯಮದ ಮೌಲ್ಯಗಳನ್ನು ಕಾಪಾಡುವುದು ಪತ್ರಕರ್ತರ ಕರ್ತವ್ಯ ಎಂದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ್ ಆಳ್ವ ಹೇಳಿದರು.

    ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಮಂಗಳೂರು ಪ್ರೆಸ್ ಕ್ಲಬ್‌ನ ನವೀಕೃತ ‘ಅಕ್ಷರ ಸಭಾಂಗಣ’ ಉದ್ಘಾಟನಾ ಸಮಾರಂಭದಲ್ಲಿ ದೀಪ ಪ್ರಜ್ವಲನೆಗೊಳಿಸಿ ಅವರು ಮಾತನಾಡಿದರು.

    ಪತ್ರಿಕಾ ಮಾಧ್ಯಮ ಸಮಾಜದ ತಪ್ಪುಗಳನ್ನು ಎತ್ತಿತೋರಿಸುವುದರ ಜತೆಗೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಕಾರ್ಯವೈಖರಿಯನ್ನು ತಿದ್ದುವ ಮಹತ್ವದ ಜವಾಬ್ದಾರಿ ಹೊಂದಿದೆ. ಪತ್ರಿಕಾ ಧರ್ಮದ ಪಾಲನೆಯಿಂದ ಮಾತ್ರ ಸಮಾಜದ ಸುಧಾರಣೆ ಸಾಧ್ಯ ಎಂದು ಅವರು ಹೇಳಿದರು.

    ಅಕ್ಷರ ಸಭಾಂಗಣ ಉದ್ಘಾಟಿಸಿದ ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಮಾತನಾಡಿ “ಮಂಗಳೂರು ನಗರದ ಅಭಿವೃದ್ಧಿಯಲ್ಲಿ ಮಾಧ್ಯಮದ ಕೊಡುಗೆ ಮಹತ್ವದ್ದಾಗಿದೆ. ರಸ್ತೆಗಳ ದುಸ್ಥಿತಿ, ಸಾರ್ವಜನಿಕ ಸಮಸ್ಯೆಗಳನ್ನು ತೆರೆದಿಡುವ ಜನಪರ ವರದಿಗಾರಿಕೆಯಿಂದ ನಗರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳಿಗೆ ವೇಗ ದೊರೆತಿದೆ. ನಾಡಿನ ಅಭಿವೃದ್ಧಿಯಲ್ಲಿ ಪತ್ರಕರ್ತರು ಸಕ್ರಿಯ ಪಾತ್ರವಹಿಸಬೇಕು ಎಂದರು.

    ಮಂಗಳೂರು ಪ್ರೆಸ್‌ಕ್ಲಬ್‌ನ ಸ್ಥಾಪಕ ಅಧ್ಯಕ್ಷ ಕೆ.ಆನಂದ ಶೆಟ್ಟಿ ನಾಮಫಲಕ ಅನಾವರಣಗೊಳಿಸಿದರು. ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು.

    ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ಸಂಘದ ರಾಜ್ಯ ಸಮಿತಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾದ ಬಿ.ರವೀಂದ್ರ ಶೆಟ್ಟಿ, ಜಗನ್ನಾಥ ಶೆಟ್ಟಿ ಬಾಳ ಉಪಸ್ಥಿತರಿದ್ದರು.

    ಪ್ರೆಸ್‌ಕ್ಲಬ್‌ನ ಉಪಾಧ್ಯಕ್ಷ ಮುಹಮ್ಮದ್ ಅರಿಫ್ ಪಡುಬಿದ್ರಿ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಸತೀಶ್ ಇರಾ ಪ್ರಾರ್ಥಿಸಿದರು. ಲೋಕೇಶ್ ರೈ ಕಾರ್ಯಕ್ರಮ ನಿರೂಪಿಸಿದರು.

    ನಿಯಮಗಳ ಬಗ್ಗೆ ಎಚ್ಚರಿಕೆ ಅಗತ್ಯ : ಕೃಷ್ಣ-ಜೆ.ಪಾಲೆಮಾರ್, ಮಾಜಿ ಸಚಿವರು. 

    ನಗರದಲ್ಲಿ ಕಟ್ಟಡ ನಿರ್ಮಾಣ ನಿಯಮಗಳು, ಸೆಟ್‌ಬ್ಯಾಕ್ ಮತ್ತು ರಸ್ತೆ ಅಗಲೀಕರಣದಂತಹ ವಿಚಾರಗಳ ಬಗ್ಗೆ ಸಮರ್ಪಕ ಅರಿವಿಲ್ಲದೆ ಆಡಳಿತ ವ್ಯವಸ್ಥೆ ನಿರ್ಧಾರ

    ಕೈಗೊಂಡರೆ ಮುಂದಿನ ದಿನಗಳಲ್ಲಿ ಗಂಭೀರ ಸಮಸ್ಯೆಗಳು ಎದುರಾಗಬಹುದು. ನಗರ ಯೋಜನೆ ಮತ್ತು ಸಾರ್ವಜನಿಕ ಸುರಕ್ಷತೆಗೆ ಸಂಬಂಧಿಸಿದ ವಿಷಯಗಳಲ್ಲಿ ಮಾಧ್ಯಮಗಳು ನಿರಂತರ ಗಮನ ಹರಿಸಿ ಜನತೆಯನ್ನು ಎಚ್ಚರಿಸುವ ಕೆಲಸ ಮಾಡಬೇಕು.

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleನಾಳೆ ಡಾ.ಎಂ.ಎನ್.ಆರ್ ಆರೋಗ್ಯದ ಶುಭ ಹಾರೈಕೆಯೊಂದಿಗೆ ಸಮಾಜಮುಖಿ ಸೇವಾ ಕಾರ್ಯಗಳ ಉದ್ಘಾಟನೆ :ಅಶಕ್ತರಿಗೆ ನೆರವು, ಉಡುಪಿ ಜಿಲ್ಲಾಡಳಿತಕ್ಕೆ ವಾಹನ ಹಸ್ತಾಂತರ
    Next Article ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಆರೋಗ್ಯದ ಹಾರೈಕೆಯೊಂದಿಗೆ ಸಮಾಜಮುಖಿ ಸೇವಾ ಕಾರ್ಯಗಳ ಉದ್ಘಾಟನೆ : ಅಶಕ್ತರಿಗೆ ನೆರವು ವಿತರಣೆ ಹಾಗೂ ಉಡುಪಿ ಜಿಲ್ಲಾಡಳಿತಕ್ಕೆ ವಾಹನ ಹಸ್ತಾಂತರ 

    Related Posts

    ಕರಾವಳಿ

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026
    ಕರಾವಳಿ

    ಮಂಗಳ ಕ್ರೀಡಾಂಗಣಕ್ಕೆ 20 ಕೋಟಿ ಅನುದಾನ : ಅಭಿವೃದ್ಧಿ ಯೋಜನೆ ಅನುಷ್ಠಾನದ ಬಗ್ಗೆ ಮೂಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ 

    October 25, 2026
    ಕರಾವಳಿ

    ಪೋಲಿಯೋ ಮುಕ್ತ ಸಮಾಜ ನಿರ್ಮಾಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯ: ರೋಟರಿ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್

    October 25, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.