
ಪೇಜಾವರ ಶ್ರೀಗಳು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಆಶೀರ್ವಚನ ನೀಡಿದ ಪೇಜಾವರ ಶ್ರೀಗಳು, ಡಾ. ರಾಜೇಂದ್ರ ಕುಮಾರ್ ಅವರು ಜಾತಿ, ಸಮುದಾಯದ ಭೇದವಿಲ್ಲದೆ ಎಲ್ಲರೊಂದಿಗೆ ಸಮಾನತೆ ಮತ್ತು ಸಹಕಾರದ ಮನೋಭಾವದಿಂದ ಸೇವೆ ಸಲ್ಲಿಸುತ್ತಿದ್ದು, ಸಮಾಜಕ್ಕೆ ಮಾದರಿಯಾಗಿದ್ದಾರೆ. ಅವರ ಆರೋಗ್ಯ, ಆಯಸ್ಸು ಮತ್ತು ಉತ್ತಮ ಭವಿಷ್ಯಕ್ಕಾಗಿ ಎಲ್ಲರೂ ದೇವರಲ್ಲಿ ಪ್ರಾರ್ಥಿಸಬೇಕು ಎಂದು ಹೇಳಿದರು.
ಡಾ. ಎಂ.ಎನ್. ರಾಜೇಂದ್ರ ಕುಮಾರ್ ಮಾತನಾಡಿ, ದೇವರ ಆಶೀರ್ವಾದ ಹಾಗೂ ಜನರ ಪ್ರೀತಿ, ವಿಶ್ವಾಸದಿಂದ ಗುಣಮುಖನಾಗಿ ಮರಳಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಧಾರ್ಮಿಕ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದಾಗಿ ತಿಳಿಸಿದರು.
ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಮಾತನಾಡಿ, ದೇವಸ್ಥಾನಗಳಲ್ಲಿ ಭಕ್ತರು ಸಮರ್ಪಿಸುವ ಹೂವುಗಳನ್ನು ಸಂಗ್ರಹಿಸಿ ಅಗರಬತ್ತಿ, ಧೂಪ ಹಾಗೂ ಸುಗಂಧ ದ್ರವ್ಯಗಳಂತಹ ಉತ್ಪನ್ನಗಳನ್ನು ತಯಾರಿಸುವ ಯೋಜನೆಗೆ ಬ್ಯಾಂಕ್ ನೀಡಿರುವ ವಾಹನವನ್ನು ಬಳಸಿಕೊಳ್ಳಲಾಗುವುದು ಎಂದರು.
ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರು ರಾಜೇಂದ್ರ ಕುಮಾರ್ ಅವರ ಸಾಮಾಜಿಕ ಸೇವೆಯನ್ನು ಶ್ಲಾಘಿಸಿ, ಅವರು ಉತ್ತಮ ಆರೋಗ್ಯದೊಂದಿಗೆ ದೀರ್ಘಕಾಲ ಸಮಾಜಕ್ಕೆ ಮಾರ್ಗದರ್ಶನ ನೀಡಲಿ ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಪ್ರಮುಖರಾದ ಬೆಳ್ಳಿ ಪ್ರಕಾಶ್, ಜಯಕರ ಶೆಟ್ಟಿ ಇಂದ್ರಾಳಿ, ರವಿರಾಜ್ ಹೆಗ್ಡೆ, ವಿನಯ್ ಕುಮಾರ್ ಸೂರಿಂಜೆ, ಬ್ಯಾಂಕಿನ ಸಿ. ಇ. ಓ ಗೋಪಾಲ ಕೃಷ್ಣ ಭಟ್ ಸೇರಿದಂತೆ ಬ್ಯಾಂಕ್ನ ಪದಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
_Sathish Kapikad