ಮಂಗಳೂರು: ಕರಾವಳಿ ಕರ್ನಾಟಕದ ಮಹಾ ಉತ್ಸವವಾಗಿ ರೂಪುಗೊಂಡಿರುವ ಮಂಗಳೂರು ದಸರಾ ಮಹೋತ್ಸವ ಹಿನ್ನಲೆಯಲ್ಲಿ ಕೆ.ಪಿ.ಸಿ.ಸಿ. ಅಧ್ಯಕ್ಷರು, ವಿಧಾನ ಪರಿಷತ್ ಶಾಸಕರಾದ ಬಿ.ಕೆ. ಹರಿಪ್ರಸಾದ್ ಅವರು ಅ.20 ಮಂಗಳೂರಿಗೆ ಆಗಮಿಸಲಿದ್ದಾರೆ.

ಸಂಜೆ 3.30ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನಕ್ಕೆ ಆಗಮಿಸುವ ಬಿ.ಕೆ. ಹರಿಪ್ರಸಾದ್ ಅವರು 4.00ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾ ಮಹೋತ್ಸವಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಲಿದ್ದಾರೆ.

ಇದಾದ ಬಳಿಕ 5.00 ಗಂಟೆಗೆ ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ಆವರಣದ ಆಚಾರ್ಯ ಮಠದಲ್ಲಿ ನಡೆಯುವ ಮಂಗಳೂರು ಶಾರದಾ ಮಹೋತ್ಸವಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿರುವರು.

ಸಂಜೆ 8.00ಕ್ಕೆ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ ಎಂದು ಕೆಪಿಸಿಸಿ ಕಚೇರಿ ಮೂಲಗಳು ತಿಳಿಸಿವೆ.

_Sathish Kapikad 

Share.
Leave A Reply

Exit mobile version