
ಸುರತ್ಕಲ್ : ಯಕ್ಷಮಿತ್ರರು ಸುರತ್ಕಲ್ ಇದರ 21 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಯಕ್ಷಗಾನ ತಾಳಮದ್ದಳೆ “ಭೃಗು ಶಾಪ” ಅಕ್ಟೋಬರ್ 25 ಭಾನುವಾರ ಮಧ್ಯಾಹ್ನ 2 ಗಂಟೆಗೆ ಸುರತ್ಕಲ್ ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಿದ್ದಕಟ್ಟೆ ಚೆನ್ನಪ್ಪ ಶೆಟ್ಟಿ ವೇದಿಕೆಯಲ್ಲಿ ನಡೆಯಲಿದೆ.
ಹಿಮ್ಮೇಳದಲ್ಲಿ ದೇವಿಪ್ರಸಾದ್ ಆಳ್ವ, ದಯಾನಂದ ಶೆಟ್ಟಿಗಾರ್ ಮಿಜಾರು, ಸೂರಜ್ ಆಚಾರ್ಯ ಮುಲ್ಕಿ, ಸುರೇಶ್ ಕಾಮತ್ ಭಾಗವಹಿಸಲಿದ್ದಾರೆ
ಮುಮ್ಮೇಳದಲ್ಲಿ ಸುಣ್ಣಂಬಳ ವಿಶ್ವೇಶ್ವರ ಭಟ್, ಜಬ್ಬಾರ್ ಸಮೋ ಸಂಪಾಜೆ, ವಾಸುದೇವರಂಗ ಭಟ್, ಸದಾಶಿವ ಆಳ್ವ ತಲಪಾಡಿ, ಪ್ರಸಾದ್ ಭಟ್ಕಳ ಭಾಗವಹಿಸಲಿದ್ದಾರೆ. ವಾಸುದೇವ ಆಚಾರ್ಯ ಕುಳಾಯಿ ಕಾರ್ಯಕ್ರಮ ಸಂಯೋಜಿಸಿದ್ದಾರೆ.

ಸಭಾ ಕಾರ್ಯಕ್ರಮದಲ್ಲಿ ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ವೇದಮೂರ್ತಿ ಐ ರಮಾನಂದ ಭಟ್ ಆಶೀರ್ವಚನ ನೀಡಲಿದ್ದಾರೆ.
ಯಕ್ಷಮಿತ್ರರು ಸಂಘಟನೆಯ ಗೌರವಾಧ್ಯಕ್ಷರಾದ ಮಹಾಬಲ ಪೂಜಾರಿ ಕಡಂಬೋಡಿ ಅಧ್ಯಕ್ಷತೆ ವಹಿಸಲಿದ್ದಾರೆ.
ಅತಿಥಿಗಳಾಗಿ ವಿನೋದ್ ಆಚಾರ್ಯ ಹೊಸಬೆಟ್ಟು, ಅಗರಿ ಎಂಟರ ಪ್ರೈಸಸ್ ನ ಮಾಲಕರಾದ ಅಗರಿ ರಾಘವೇಂದ್ರ ರಾವ್, ಸುರತ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಅಶೋಕ್ ಶೆಟ್ಟಿ ತಡಂಬೈಲ್, ಯಕ್ಷಧ್ರುವ ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ಅಧ್ಯಕ್ಷ ಲೀಲಾಧರ ಕಟ್ಲ, ಕಲಾ ಪೋಷಕ ಪ್ರೇಮ್ ಶೆಟ್ಟಿ ಸುರತ್ಕಲ್ ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ಹಿರಿಯ ಯಕ್ಷಗಾನ ಕಲಾವಿದ ವೆಂಕಟೇಶ್ ಕಲ್ಲುಗುಂಡಿ ಅವರನ್ನು ಸನ್ಮಾನಿಸಲಾಗುವುದು. ಯಕ್ಷಗಾನ ಕಲಾವಿದ ಸದಾಶಿವ ಆಳ್ವ ತಲಪಾಡಿ ಅಭಿನಂದನಾ ಭಾಷಣ ಮಾಡಲಿದ್ದಾರೆ.
ಯಕ್ಷಮಿತ್ರರು ಸುರತ್ಕಲ್ ಸಂಘಟನೆಯ ಅಧ್ಯಕ್ಷ ರಾಜೇಶ್ ಕುಮಾರ್, ಕಾರ್ಯದರ್ಶಿ ನಾಗರಾಜ್ ಕಡಂಬೋಡಿ, ಕೋಶಾಧಿಕಾರಿ ಜಗದೀಪ್ ಶೆಟ್ಟಿ ಉಪಸ್ಥಿತರಿರುವರು.
_Sathish Kapikad


