Close Menu
SK Media NewsSK Media News
    What's Hot

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026

    ಮಂಗಳ ಕ್ರೀಡಾಂಗಣಕ್ಕೆ 20 ಕೋಟಿ ಅನುದಾನ : ಅಭಿವೃದ್ಧಿ ಯೋಜನೆ ಅನುಷ್ಠಾನದ ಬಗ್ಗೆ ಮೂಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ 

    October 25, 2026

    ಪೋಲಿಯೋ ಮುಕ್ತ ಸಮಾಜ ನಿರ್ಮಾಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯ: ರೋಟರಿ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್

    October 25, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಆರ್ಥಿಕವಾಗಿ ಹಿಂದುಳಿದವರಿಗೆ ಉನ್ನತ ಮಟ್ಟದ ಸೌಲಭ್ಯಗಳನ್ನು ಒದಗಿಸಿ ವೈದ್ಯಕೀಯ ಸೇವೆ ಸಲ್ಲಿಸುವುದು ನಮ್ಮ ವೈದ್ಯಕೀಯ ಸಂಸ್ಥೆಯ ಧ್ಯೇಯ : ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ, ಎಸ್. ಗಣೇಶ್ ರಾವ್
    ಕರಾವಳಿ

    ಆರ್ಥಿಕವಾಗಿ ಹಿಂದುಳಿದವರಿಗೆ ಉನ್ನತ ಮಟ್ಟದ ಸೌಲಭ್ಯಗಳನ್ನು ಒದಗಿಸಿ ವೈದ್ಯಕೀಯ ಸೇವೆ ಸಲ್ಲಿಸುವುದು ನಮ್ಮ ವೈದ್ಯಕೀಯ ಸಂಸ್ಥೆಯ ಧ್ಯೇಯ : ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ, ಎಸ್. ಗಣೇಶ್ ರಾವ್

    October 24, 2026Updated:October 24, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು, ಅಕ್ಟೋಬರ್ 24, ‘ಆರ್ಥಿಕವಾಗಿ ಹಿಂದುಳಿದ ಜನಸಾಮಾನ್ಯರಿಗೆ ಆಧುನಿಕ ತಂತ್ರಜ್ಞಾನವನ್ನು ಬಳಸಿ ಮತ್ತು ಉನ್ನತ ಮಟ್ಟದ ಸೌಲಭ್ಯಗಳನ್ನು ಒದಗಿಸಿ ವೈದ್ಯಕೀಯ ಸೇವೆ ಸಲ್ಲಿಸುವುದು ನಮ್ಮ ವೈದ್ಯಕೀಯ ಸಂಸ್ಥೆಯ ಧ್ಯೇಯ ಮತ್ತು ಉದ್ದೇಶ’ ಎಂದು ಜಿ.ಆರ್. ಮೆಡಿಕಲ್ ಕಾಲೇಜು, ಆಸ್ಪತ್ರೆಯ ಅಧ್ಯಕ್ಷರಾದ ಗಣೇಶ್ ರಾವ್ ಅವರು ಘೋಷಿಸಿದ್ದಾರೆ.

    ಅವರು ಜಿ.ಆರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮತ್ತು ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಸಂಸ್ಥೆಯ ಜಂಟಿ ಆಶ್ರಯದಲ್ಲಿ 24-10-2026ರಂದು ಆಸ್ಪತ್ರೆಯ ಆವರಣದಲ್ಲಿ ಆಯೋಜಿಸಿದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

    ಮಾತ್ರವಲ್ಲದೆ ಬಡ ಅಸ್ವಸ್ಥರಿಗೆ ಉಚಿತ ಅಂಬುಲೆನ್ಸ್ ಸಾರಿಗೆ ವ್ಯವಸ್ಥೆಯನ್ನು ಕೂಡ ಒದಗಿಸಲಾಗುವುದು ಹಾಗೂ ಈ ಉಚಿತ ವೈದ್ಯಕೀಯ ಶಿಬಿರವನ್ನು ಪ್ರತಿ ತಿಂಗಳಲ್ಲಿ ನಗರದ ವಿವಿಧ ಪ್ರದೇಶಗಳಲ್ಲಿ ಆಯೋಜಿಸಲಾಗುವುದು ಎಂದು ಮಾಹಿತಿ ನೀಡಿದರು.

    ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಶೆಟ್ಟಿ ಅವರು ತಮ್ಮ ಆಸ್ಪತ್ರೆಯಲ್ಲಿ ಉನ್ನತ ಮಟ್ಟದ ಮತ್ತು ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿ ಚಿಕಿತ್ಸೆ ನೀಡಲಾಗುವುದು ಎಂದು ಮಾಹಿತಿ ನೀಡಿದರು. ಜನಸಾಮಾನ್ಯರ ಆರೋಗ್ಯ ರಕ್ಷಣೆ ನಮ್ಮ ಗುರಿ. ಆಸ್ಪತ್ರೆಯಲ್ಲಿ 720 ಹಾಸಿಗೆಗಳಿದ್ದು 190 ವೈದ್ಯಕೀಯ ತಜ್ಞರು ಹಗಲಿರುಳು 24 ಗಂಟೆಗಳ ತುರ್ತು ವೈದ್ಯಕೀಯ ಸೇವೆ ನೀಡಲಿರುವರು ಎಂದು ಮಾಹಿತಿ ನೀಡಿದರು.

    ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಸಂಸ್ಥೆಯ ಅಧ್ಯಕ್ಷರಾದ ರವೀಂದ್ರ ಅವರು ಶಿಬಿರಕ್ಕೆ ನಮ್ಮ ಸಂಸ್ಥೆಯ ಸಂಪೂರ್ಣ ಸಹಕಾರವಿದೆ ಎಂದು ನುಡಿದು, ಶಿಬಿರಕ್ಕೆ ಯಶಸ್ಸು ಕೋರಿದರು.

    ಖ್ಯಾತ ಮತ್ತು ನುರಿತ ವೈದ್ಯರುಗಳಾದ ಡಾ.ಈರಪ್ಪ, ವೈದ್ಯಕೀಯ ಶಾಸ್ತ್ರತಜ್ಞರು, ಡಾ. ಕಿಶೋರಿ, ಪ್ರಸೂತಿ ಮತ್ತು ಸ್ತ್ರೀ ಆರೋಗ್ಯ ತಜ್ಞರು, ಕೀಲು ಮತ್ತು ಮೂಳೆಶಾಸ್ತ್ರ ತಜ್ಞರಾದ ಡಾ. ವಿಶಾಲ್, ನರರೋಗ ಶಾಸ್ತ್ರ ತಜ್ಞರಾದ ಡಾ.ರವಿತೇಜ, ಪ್ರಯೋಗಾಲಯ ಮುಖ್ಯಸ್ಥೆ ಡಾ. ಸುಚೇತಾ ಶೆಟ್ಟಿ, ಕಿವಿ, ಮೂಗು, ಗಂಟಲು ತಜ್ಞರಾದ ಡಾ.ಜೆಶ್ವಿನ್ ಸಕ್ರಿಯವಾಗಿ ಭಾಗವಹಿಸಿ ಅಧಿಕ ರಕ್ತದೊತ್ತಡ, ಸಕ್ಕರೆ ಅಂಶ ಮೌಲ್ಯಮಾಪನವನ್ನು ನಡೆಸಿಕೊಟ್ಟರು ಮತ್ತು ಕಿವಿ, ಮೂಗು, ಗಂಟಲು ಪರೀಕ್ಷೆ, ಮಧುಮೇಹ ಪರೀಕ್ಷೆ, ನರರೋಗ ದೌರ್ಬಲ್ಯ, ನಿದ್ರಾಹೀನತೆ ಸಮಸ್ಯೆಗಳಿಗೆ ಸಲಹೆ ಮತ್ತು ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ಸೇವನೆಯ ಬಗ್ಗೆ ಸಲಹೆ ನೀಡಿದರು.

    ವೇದಿಕೆಯಲ್ಲಿ ಕೀಲು ಮತ್ತು ಮೂಳೆ ವಿಭಾಗದ ಮುಖ್ಯಸ್ಥರಾದ ಡಾ. ಸುಧಾಕರ್, ರೋಟರಿ ಸಂಸ್ಥೆಯ ವಲಯಾಧಿಕಾರಿಯಾದ ರಾಜೇಶ್ ಶೆಟ್ಟಿ ಉಪಸ್ಥಿತರಿದ್ದರು.

    ಶಿಬಿರದ ಸಂಘಟಕರಾದ ಡಾ. ದೇವದಾಸ್ ರೈ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಡಾ. ಜೂಲಿಯನ್ ಸಲ್ಡಾನ್ಹಾ ವಂದಿಸಿದರು. ಈ ಶಿಬಿರದಲ್ಲಿ ಸುಮಾರು 250 ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು.

    _Sathish Kapikad

    Share. Facebook Twitter Pinterest LinkedIn Email WhatsApp
    Previous Articleಅ.25ರಂದು ಪಿಲಿಕುಳ ಲೇಕ್ ಗಾರ್ಡನ್‍ನಲ್ಲಿ “ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ”
    Next Article ಹೊರನಾಡ ಕನ್ನಡಿಗರಿಗೆ ಶಿಕ್ಷಣ ಹಾಗೂ ಸಾಂಸ್ಕೃತಿಕ ಯೋಜನೆಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸಲು ಡಾ. ಬರಗೂರು ರಾಮಚಂದ್ರಪ್ಪ ಒತ್ತಾಯ

    Related Posts

    ಕರಾವಳಿ

    ಪಿಲಿಕುಳದ ಕೆರೆಯಲ್ಲಿ ಬೆಳಸಿದ ಬಲಿಷ್ಠ ಮೀನುಗಳ ಪ್ರದರ್ಶನ ಹಾಗೂ ಮಾರಾಟ: ಪಿಲಿಕುಳ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಯಶಸ್ವಿ 

    October 26, 2026
    ಕರಾವಳಿ

    ಮಂಗಳ ಕ್ರೀಡಾಂಗಣಕ್ಕೆ 20 ಕೋಟಿ ಅನುದಾನ : ಅಭಿವೃದ್ಧಿ ಯೋಜನೆ ಅನುಷ್ಠಾನದ ಬಗ್ಗೆ ಮೂಡಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ 

    October 25, 2026
    ಕರಾವಳಿ

    ಪೋಲಿಯೋ ಮುಕ್ತ ಸಮಾಜ ನಿರ್ಮಾಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯ: ರೋಟರಿ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್

    October 25, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.