ಮಂಗಳೂರು: ನಗರದಲ್ಲಿ ಯುವಕರಿಗೆ ಮತ್ತು ವಿದ್ಯಾರ್ಥಿಗಳಿಗೆ
ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ಆರೋಪದಲ್ಲಿ ಓರ್ವ ಮಹಿಳೆಯನ್ನು ಮಂಗಳೂರು ಉತ್ತರ ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿತೆಯನ್ನು ಪಂಪ್ ವೆಲ್ ಸಮೀಪದ
ಉಜ್ಜೋಡಿಯ ಫ್ಲಾಟ್ ನಲ್ಲಿ ವಾಸ್ತವ್ಯ ಹೊಂದಿರುವ
ನಸೀಮಾ ಎಂದು ಗುರುತಿಸಲಾಗಿದೆ.

ಪಂಪ್ ವೆಲ್ ಉಜ್ಜೋಡಿಯ ಫ್ಲಾಟ್ ನಲ್ಲಿ ಆರೋಪಿತೆಯನ್ನು ವಶಕ್ಕೆ ಪಡೆಯಲಾಗಿದ್ದು, ಆರೋಪಿಯಿಂದ
ಸುಮಾರು 15,30,000/- ಮೌಲ್ಯದ 153. ಗ್ರಾಂ MDMA ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿತೆಯು ಮಂಗಳೂರು ನಗರದಾದ್ಯಂತ ಯುವಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಈ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದುದಾಗಿ, ವಿಚಾರಣೆಯ ವೇಳೆ ತಿಳಿದು ಬಂದಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಮತ್ತು ಸೊತ್ತು ಪತ್ತೆ ಕಾರ್ಯದಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ.

Sathish Kapikad

Share.
Leave A Reply

Exit mobile version