Close Menu
SK Media NewsSK Media News
    What's Hot

    ದುಬೈಯಲ್ಲಿ ‘ದುಬೈ ಯಕ್ಷೋತ್ಸವ–2026’ – ಶ್ರೀ ಹರಿಲೀಲಾಮೃತಂ” ಯಕ್ಷಗಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಟಿಕೆಟ್ ಬಿಡುಗಡೆ

    November 17, 2026

    ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯಕಾರಣಿ ಸಮಿತಿ ಸಭೆ :ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿಯವರಿಂದ ಮುಂದಿನ ವರ್ಷದ ಕ್ರೀಡಾಕೂಟಗಳ ಬಗ್ಗೆ ಚರ್ಚೆ 

    November 17, 2026

    ಮಂಗಳೂರಿನಲ್ಲಿ ಯುವವಾಹಿನಿಯ ನೂತನ ಆಡಳಿತ ಕಚೇರಿ ಲೋಕಾರ್ಪಣೆ : ನಾಲ್ಕು ದಶಕಗಳ ಸಂಘಟನಾ ಪಯಣದಲ್ಲಿ ಐತಿಹಾಸಿಕ ಮೈಲಿಗಲ್ಲು 

    November 17, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಕಾಂಗ್ರೆಸ್ಸಿನ ಷಡ್ಯಂತ್ರದ ವಿರುದ್ಧ ನ. 6ರಂದು ‘ಪ್ರಜಾಪ್ರಭುತ್ವ ಉಳಿಸಿ- ಅರಾಜಕತೆ ಅಳಿಸಿ’ ಅಭಿಯಾನ – ಬೃಹತ್ ಪಾದಯಾತ್ರೆ- ಮಂಗಳೂರು ದಕ್ಷಿಣದಿಂದ ಕೇಂದ್ರ ಸಚಿವ ಸುರೇಶ್ ಗೋಪಿ, ಎಂ.ಪಿ ತೇಜಸ್ವಿ ಸೂರ್ಯ ಸಹಿತಾ 5 ಸಾವಿರ ಜನ ಭಾಗಿ: ಶಾಸಕ ಕಾಮತ್
    ಕರಾವಳಿ

    ಕಾಂಗ್ರೆಸ್ಸಿನ ಷಡ್ಯಂತ್ರದ ವಿರುದ್ಧ ನ. 6ರಂದು ‘ಪ್ರಜಾಪ್ರಭುತ್ವ ಉಳಿಸಿ- ಅರಾಜಕತೆ ಅಳಿಸಿ’ ಅಭಿಯಾನ – ಬೃಹತ್ ಪಾದಯಾತ್ರೆ- ಮಂಗಳೂರು ದಕ್ಷಿಣದಿಂದ ಕೇಂದ್ರ ಸಚಿವ ಸುರೇಶ್ ಗೋಪಿ, ಎಂ.ಪಿ ತೇಜಸ್ವಿ ಸೂರ್ಯ ಸಹಿತಾ 5 ಸಾವಿರ ಜನ ಭಾಗಿ: ಶಾಸಕ ಕಾಮತ್

    November 4, 2026Updated:November 4, 20263 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: ಎಸ್‍ಐಆರ್ ಕುರಿತು ಸುಳ್ಳು ಮಾಹಿತಿ ನೀಡಿ ದೇಶಾದ್ಯಂತ ಅರಾಜಕತೆ ಸೃಷ್ಟಿಸಲು ನೋಡುತ್ತಿರುವ ಕಾಂಗ್ರೆಸ್ಸಿನ ಷಡ್ಯಂತ್ರದ ವಿರುದ್ಧ, ಯುವ ಸಮುದಾಯಕ್ಕೆ ಹಾಗೂ ಜನರಿಗೆ ಸರಿಯಾದ ಮಾಹಿತಿ ನೀಡಿ ದೇಶ ವಿರೋಧಿಗಳ ಸಂಚನ್ನು ಬಯಲು ಮಾಡುವ ಉದ್ದೇಶದಿಂದ ನ.6 ಶುಕ್ರವಾರದಂದು ಭಾರತೀಯ ಜನತಾ ಪಾರ್ಟಿ ಮಂಗಳೂರು ವಿಭಾಗ ಮಟ್ಟದ ‘ಪ್ರಜಾಪ್ರಭುತ್ವ ಉಳಿಸಿ- ಅರಾಜಕತೆ ಅಳಿಸಿ’ ಎಂಬ ಬೃಹತ್ ಪಾದಯಾತ್ರೆ ಹಾಗೂ ಸಾರ್ವಜನಿಕ ಸಭೆ ಅಭಿಯಾನ ನಡೆಯಲಿದೆಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಮಾಹಿತಿ ನೀಡಿದರು.

    ನಗರದಲ್ಲಿಂದು ಕರೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ಹಾಗೂ ಉಡುಪಿ ಜಿಲ್ಲೆಯಿಂದ ಒಟ್ಟು ಇಪ್ಪತ್ತು ಸಾವಿರಕ್ಕೂ ಜನ ಆಗಮಿಸಲಿದ್ದು, ಮಂಗಳೂರು ನಗರ ದಕ್ಷಿಣದಿಂದಲೇ ಐದು ಸಾವಿರ ಜನ ಬರಲಿದ್ದಾರೆ.

    ಮಧ್ಯಾಹ್ನ 3:00 ಗಂಟೆಗೆ ಕ್ಲಾಕ್ ಟವರ್ ಬಳಿಯ ಮಿನಿ ವಿಧಾನ ಸೌಧದಿಂದ ಕುಣಿತ ಭಜನೆ, ನಾಸಿಕ್ ಬ್ಯಾಂಡ್, ಚಂಡೆಯೊಂದಿಗೆ ಇಪ್ಪತ್ತು ಸಾವಿರಕ್ಕೂ ಅಧಿಕ ಜನ ಬೃಹತ್ ಪಾದಯಾತ್ರೆಯಲ್ಲಿ ಸಾಗಿ, ಕದ್ರಿ ಮೈದಾನಕ್ಕೆ ತಲುಪಿ ಅಲ್ಲಿಯೇ ಸಾರ್ವಜನಿಕ ಸಭೆ ನಡೆಯಲಿದೆ.

    ಈ ಸಂದರ್ಭದಲ್ಲಿ ಭಾರತದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆಯ ರಾಜ್ಯ ಸಚಿವರು ಮತ್ತು ಖ್ಯಾತ ಮಲಯಾಳಂ ಚಿತ್ರನಟ ಸುರೇಶ್ ಗೋಪಿ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯರವರು ಉಪಸ್ಥಿತರಿರಲಿದ್ದಾರೆ. ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಯುವಜನರು ಇರುವ ಈ ಅಭಿಯಾನದಲ್ಲಿ ವಿವಿಧ ಕ್ಷೇತ್ರಗಳ ಸಾರ್ವಜನಿಕರು ಭಾಗವಹಿಸಲಿದ್ದಾರೆ.

    ನರೇಂದ್ರ ಮೋದಿಯವರು ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಯುವಜನರನ್ನು ಕಣ್ಮುಂದೆ ಇಟ್ಟುಕೊಂಡು ಅನೇಕ ಯೋಜನೆಗಳನ್ನು ಮಾಡಿದ್ದಾರೆ. 7 ಐಐಟಿಗಳ ಸ್ಥಾಪನೆ, 8 ಕಡೆ ಹೊಸ ಕೇಂದ್ರೀಯ ವಿದ್ಯಾಲಯಗಳನ್ನು ಪ್ರಾರಂಭಿಸಲಾಗಿದೆ.

    2014ಕ್ಕೆ ಮೊದಲು ದೇಶದಲ್ಲಿ 387 ವೈದ್ಯಕೀಯ ಕಾಲೇಜುಗಳಿದ್ದವು. 12 ವರ್ಷಗಳಲ್ಲಿ 431 ಹೊಸ ವೈದ್ಯಕೀಯ ಕಾಲೇಜುಗಳನ್ನು ಆರಂಭಿಸಲಾಗಿದೆ. ಮೋದಿಯವರು ಕೌಶಲ್ಯಾಭಿವೃದ್ಧಿಯ ಹೊಸ ಸಚಿವಾಲಯ ಪ್ರಾರಂಭಿಸಿದ್ದಾರೆ. ಸ್ಟಾರ್ಟಪ್ ಸಂಖ್ಯೆಗಳೂ ಹೆಚ್ಚಾಗಿವೆ. 2,12,283 ಸ್ಟಾರ್ಟಪ್‍ಗಳು ಆರಂಭವಾಗಿವೆ. ಈ ಪೈಕಿ 21,601 ಕರ್ನಾಟಕದಲ್ಲೇ ಆರಂಭಗೊಂಡಿವೆ. ಕ್ರೀಡಾ ಕ್ಷೇತ್ರದಲ್ಲಿ ಯುವಜನರಿಗಾಗಿ ಹೊಸ ಯೋಜನೆಗಳನ್ನು ನೀಡಿದ್ದಾರೆ.

    ಆದರೆ, ಕಾಂಗ್ರೆಸ್ ಯುವಜನರನ್ನು ಸಂಘರ್ಷಕ್ಕೆ ಇಳಿಸುವ ಹಾಗೂ ತಪ್ಪು ದಾರಿಗೆ ಎಳೆಯುವ ಯತ್ನ ಮಾಡುತ್ತಿದೆ. ಯುವಕರನ್ನು ರಾಜಕೀಯ ಲಾಭಕ್ಕೆ ಬಳಸಿಕೊಂಡು ಸಂಘರ್ಷಕ್ಕೆ ಇಳಿಸುವುದು ಸರಿಯಲ್ಲವೆಂದು ಸುಪ್ರೀಂ ಕೋರ್ಟ್ ಕೂಡಾ ಹೇಳಿದೆ.

    ಈಗ ಎಸ್‍ಐಆರ್ ಸರಿ ಇಲ್ಲವೆಂದು ಆರೋಪ ಮಾಡುತ್ತಿರುವ ಕಾಂಗ್ರೆಸ್ ನಾಯಕರಿಗೆ ಇತಿಹಾಸ ಮರೆತು ಹೋಗಿರಬಹುದು. ಈ ದೇಶದಲ್ಲಿ 12 ಬಾರಿ ಮತದಾರರ ಪಟ್ಟಿ ಪರಿಷ್ಕರಣೆ ಆಗಿದ್ದು, 10 ಬಾರಿ ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗಲೇ ಆಗಿದೆ. ಈಗ ಪ್ರಜಾಪ್ರಭುತ್ವದ ಮುಖವಾಡ ಧರಿಸಿರುವ ಕಾಂಗ್ರೆಸ್ ಪಕ್ಷವು ವ್ಯವಸ್ಥೆಯನ್ನು ಬುಡಮೇಲು ಮಾಡಲು ನಿರಂತರವಾಗಿ ಕುತಂತ್ರ ನಡೆಸುತ್ತಿದೆ.

    ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಇಡೀ ವಿಶ್ವವೇ ಭಾರತವನ್ನು ಗೌರವದಿಂದ ನೋಡುತ್ತಿರುವ ಸಂದರ್ಭದಲ್ಲಿ, ದೇಶದ ಒಗ್ಗಟ್ಟನ್ನು ಒಡೆಯಲು ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಹವಣಿಸುತ್ತಿವೆ. ಇಂತಹ ದೇಶದ್ರೋಹಿ ಷಡ್ಯಂತ್ರಗಳನ್ನು ಜನಸಾಮಾನ್ಯರಿಗೆ ಮುಟ್ಟಿಸಲು ಬಿಜೆಪಿ ರಾಜ್ಯಾದ್ಯಂತ ಈ ಆಂದೋಲನವನ್ನು ಆರಂಭಿಸಿದೆ.

    “ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಎನ್‌ಡಿಎ ಸರ್ಕಾರ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿರುವುದನ್ನು ಜೀರ್ಣಿಸಿಕೊಳ್ಳಲು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್‌ ನಾಯಕರಿಗೆ ಸಾಧ್ಯವಾಗುತ್ತಿಲ್ಲ. ಮೋದಿಯವರ ಜಾಗತಿಕ ಜನಪ್ರಿಯತೆಯನ್ನು ಸಹಿಸದ ಕಾಂಗ್ರೆಸ್‌, ವಿದೇಶಿ ಶಕ್ತಿಗಳ ಜೊತೆಗೂಡಿ ದೇಶದಲ್ಲಿ ಆಂತರಿಕ ಅಶಾಂತಿ ಮತ್ತು ಅರಾಜಕತೆ ಸೃಷ್ಟಿಸಲು ನಿರಂತರವಾಗಿ ಹುನ್ನಾರ ನಡೆಸುತ್ತಿದೆ.

    ಕರ್ನಾಟಕದಲ್ಲಿ ಇಂದು ಭ್ರಷ್ಟಾಚಾರ ತಾಂಡವವಾಡುತ್ತಿದೆ. ಯಾವುದೇ ಅಭಿವೃದ್ಧಿ ಕಾಮಗಾರಿಗಳಿಗೆ ಹಣವಿಲ್ಲದಂತಾಗಿದೆ. ಖಜಾನೆ ಖಾಲಿಯಾಗಿದ್ದು, ಜನಸಾಮಾನ್ಯರ ಮೇಲೆ ನಿರಂತರವಾಗಿ ತೆರಿಗೆ ಮತ್ತು ಬೆಲೆ ಏರಿಕೆಯ ಬರೆ ಎಳೆಯಲಾಗುತ್ತಿದೆ. ಬರಿದಾಗಿರುವ ತನ್ನ ಖಜಾನೆ ತುಂಬಿಸಿಕೊಳ್ಳಲು ಈಗ ಕಾಂಗ್ರೆಸ್ ಜನರಿಂದಲೇ ಸುಲಿಗೆ ಮಾಡುತ್ತಿದೆ.

    ಈಗಾಗಲೇ ನೆರೆಹೊರೆಯ ದೇಶಗಳಲ್ಲಿ ಆಗಿರುವಂತಹ ದಂಗೆಗಳನ್ನು ಭಾರತದಲ್ಲೂ ನಡೆಸಿ ಸ್ಥಿರ ಆಡಳಿತವನ್ನು ಅಸ್ಥಿರಗೊಳಿಸಲು ಪಿತೂರಿ ನಡೆಸಲಾಗುತ್ತಿದೆ. ಆದರೆ ಭಾರತವನ್ನು ಬಾಂಗ್ಲಾ, ಶ್ರೀಲಂಕಾ, ಫ್ರಾನ್ಸ್ ಮಾಡಲು, ಇಲ್ಲಿ ಅರಾಜಕತೆ ಸೃಷ್ಟಿಸಲು ಯಾವ ಶಕ್ತಿಯಿಂದಲೂ ಅಸಾಧ್ಯ.

    ಸಂವಿಧಾನದ ಪ್ರತಿ ಹಿಡಿದು ತಿರುಗುವ ಕಾಂಗ್ರೆಸ್ಸಿಗರಿಗೆ ದೇಶದ ಸಂವಿಧಾನ, ನ್ಯಾಯಾಂಗ ಮತ್ತು ಸಾಂವಿಧಾನಿಕ ಸಂಸ್ಥೆಗಳ ಮೇಲೆ ಕಿಂಚಿತ್ತೂ ನಂಬಿಕೆಯಿಲ್ಲ. ದೇಶದ ಜನತೆ ನೀಡಿರುವ ತೀರ್ಪಿನ ಮೇಲೆ ನಂಬಿಕೆ ಇಲ್ಲ, ಇವಿಎಂ ಮೇಲೆ ನಂಬಿಕೆಯಿಲ್ಲ, ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿಲ್ಲ, ಸುಪ್ರೀಂ ಕೋರ್ಟ್‌ ತೀರ್ಪುಗಳ ಮೇಲೆಯೂ ನಂಬಿಕೆಯಿಲ್ಲ. ಇಂತಹ ದೇಶವಿರೋಧಿ ಶಕ್ತಿಗಳ ವಿರುದ್ಧ ಜನಜಾಗೃತಿ ಮೂಡಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ಅವರು ವಿವರ ನೀಡಿದರು.

    ಈ ಸಂದರ್ಭದಲ್ಲಿ ಮಂಡಲದ ಬಿಜೆಪಿ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ, ಲಲೇಶ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಕಾರ್ಯದರ್ಶಿ ಪೂರ್ಣಿಮಾ ಎಂ, ಮಂಡಲದ ಯುವ ಮೋರ್ಚಾ ಅಧ್ಯಕ್ಷರಾದ ಅಶ್ವಿತ್ ಕೊಟ್ಟಾರಿ, ಪ್ರಮುಖರಾದ ವಿನೋದ್ ಮೆಂಡನ್, ಸುರೇಖಾ ಹೆಗ್ಡೆ, ಸುಕೇಶ್ ಅಳಪೆ, ಪ್ರವೀಣ್ ನಿಡ್ಡೇಲ್, ಉಪಸ್ಥಿತರಿದ್ದರು.

    Sathish Kapikad

    Share. Facebook Twitter Pinterest LinkedIn Email WhatsApp
    Previous Articleಮಂಗಳೂರು — ಮಾಂಡ್ ಸೊಭಾಣ್ ಸಂಸ್ಥೆ ಆಯೋಜಿಸಿದ ಗಿನ್ನೆಸ್ ವಿಶ್ವ ದಾಖಲೆಯ “ಸುದೀರ್ಘ ಗಾಯನ” ಯಶಸ್ವಿ 36 ಗಂಟೆಗಳು ಪೂರ್ಣಗೊಳಿಸಿ ವಿಶ್ವ ದಾಖಲೆಯತ್ತ….
    Next Article ಊರ್ವಸ್ಟೋರ್ ನಲ್ಲಿ ನೂತನ ಮಾರುಕಟ್ಟೆ ನಿರ್ಮಾಣ: ಮೂಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿಯವರಿಂದ ಸ್ಥಳೀಯ ವ್ಯಾಪಾರಸ್ಥರ ಜೊತೆ ಚರ್ಚೆ 

    Related Posts

    ಅಂತಾರಾಷ್ಟ್ರೀಯ

    ದುಬೈಯಲ್ಲಿ ‘ದುಬೈ ಯಕ್ಷೋತ್ಸವ–2026’ – ಶ್ರೀ ಹರಿಲೀಲಾಮೃತಂ” ಯಕ್ಷಗಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಟಿಕೆಟ್ ಬಿಡುಗಡೆ

    November 17, 2026
    ಕರಾವಳಿ

    ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯಕಾರಣಿ ಸಮಿತಿ ಸಭೆ :ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿಯವರಿಂದ ಮುಂದಿನ ವರ್ಷದ ಕ್ರೀಡಾಕೂಟಗಳ ಬಗ್ಗೆ ಚರ್ಚೆ 

    November 17, 2026
    ಕರಾವಳಿ

    ಮಂಗಳೂರಿನಲ್ಲಿ ಯುವವಾಹಿನಿಯ ನೂತನ ಆಡಳಿತ ಕಚೇರಿ ಲೋಕಾರ್ಪಣೆ : ನಾಲ್ಕು ದಶಕಗಳ ಸಂಘಟನಾ ಪಯಣದಲ್ಲಿ ಐತಿಹಾಸಿಕ ಮೈಲಿಗಲ್ಲು 

    November 17, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.