ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಶೆಟ್ಟಿಯವರು ಇಂದು ತಮ್ಮ ಮುಡಾ ಕಚೇರಿಯಲ್ಲಿ ಊರ್ವಸ್ಟೋರ್ ಮಾರುಕಟ್ಟೆಯ ವ್ಯಾಪಾರಸ್ಥರೊಂದಿಗೆ ಸಭೆ ನಡೆಸಿ, ನೂತನವಾಗಿ ನಿರ್ಮಾಣವಾಗಲಿರುವ ಮಾರುಕಟ್ಟೆಯ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಿದರು.

ಈ ಸಂದರ್ಭದಲ್ಲಿ ನೂತನ ಮಾರುಕಟ್ಟೆ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳುವ ಹಿನ್ನೆಲೆಯಲ್ಲಿ ವ್ಯಾಪಾರಸ್ಥರಿಗೆ ತಾತ್ಕಾಲಿಕ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಸ್ಥಳ ನಿಗದಿಪಡಿಸುವುದು ಸೇರಿದಂತೆ ವ್ಯಾಪಾರಸ್ಥರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ಹಾಗೂ ಅವುಗಳ ಪರಿಹಾರದ ಕುರಿತು ಸಮಾಲೋಚನೆ ನಡೆಸಲಾಯಿತು.

ಈ ಸಭೆಯಲ್ಲಿ ಮುಡಾ ಆಯುಕ್ತರು, ಮೂಡ ಸಹಾಯಕ ಕಾರ್ಯಪಾಲಕ ಅಭಿಯಂತರರು, ಮುಡಾ ಅಧಿಕಾರಿಗಳು ಹಾಗೂ ಊರ್ವಸ್ಟೋರ್ ಮಾರುಕಟ್ಟೆಯ ವ್ಯಾಪಾರಸ್ಥರು ಉಪಸ್ಥಿತರಿದ್ದರು.

Sathish Kapikad 

Share.
Leave A Reply

Exit mobile version