
ಮಂಗಳೂರು: ಮುಡಾದ ಕುಂಜತ್ ಬೈಲ್ ಲೇಔಟ್ ಆಸುಪಾಸಿನ ಸಾರ್ವಜನಿಕರು ಸಲ್ಲಿಸಿದ ರಸ್ತೆ ಸಂಪರ್ಕದ ಬೇಡಿಕೆಗೆ ಸ್ಪಂದಿಸಿದ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಶೆಟ್ಟಿಯವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ರಸ್ತೆ ಸಂಪರ್ಕದ ಬೇಡಿಕೆಗೆ ಸೂಕ್ತ ಪರಿಹಾರ ಕಲ್ಪಿಸುವ ಭರವಸೆ ನೀಡಿದರು. ಅಲ್ಲದೆ, ಸ್ಥಳೀಯ ಸಾರ್ವಜನಿಕರ ಅನುಕೂಲಕ್ಕಾಗಿ ಪವರ್ ಸ್ಟೇಷನ್ ಸ್ಥಾಪಿಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಮುಡಾ ಅಧಿಕಾರಿಗಳು, ಮೆಸ್ಕಾಂ ಅಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
Sathish Kapikad


