ಮಂಗಳೂರು, ನವೆಂಬರ್.05: ದೇಶಾದ್ಯಂತ ಅರಾಜಕತೆ ಸೃಷ್ಟಿಸಲು ನೋಡುತ್ತಿರುವ ಕಾಂಗ್ರೆಸ್ಸಿನ ಷಡ್ಯಂತ್ರದ ವಿರುದ್ಧ, ಯುವ ಸಮುದಾಯಕ್ಕೆ ಹಾಗೂ ಜನರಿಗೆ ಸರಿಯಾದ ಮಾಹಿತಿ ನೀಡಿ ದೇಶ ವಿರೋಧಿಗಳ ಸಂಚನ್ನು ಬಯಲು ಮಾಡುವ ಉದ್ದೇಶದಿಂದ ಇದೇ ನವೆಂಬರ್ 6 ಶುಕ್ರವಾರದಂದು ಬಿಜೆಪಿ ಮಂಗಳೂರು ವಿಭಾಗ ಮಟ್ಟದ ‘ಪ್ರಜಾಪ್ರಭುತ್ವ ಉಳಿಸಿ- ಅರಾಜಕತೆ ಅಳಿಸಿ’ ಎಂಬ ಬೃಹತ್ ಪಾದಯಾತ್ರೆ ಹಾಗೂ ಸಾರ್ವಜನಿಕ ಸಭೆ ಅಭಿಯಾನ ನಡೆಯಲಿದೆ ಎಂದು ಭಾರತೀಯ ಜನತಾ ಪಕ್ಷದ ಮುಖಂಡರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಮಧ್ಯಾಹ್ನ 3:00 ಗಂಟೆಗೆ ಕ್ಲಾಕ್ ಟವರ್ ಬಳಿಯ ಮಿನಿ ವಿಧಾನ ಸೌಧದಿಂದ ಆರಂಭವಾಗುವ ಈ ಬೃಹತ್ ಪಾದಯಾತ್ರೆ ಹಾಗೂ ಸಾರ್ವಜನಿಕ ಸಭೆಯಲ್ಲಿ ಭಾರತದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆಯ ರಾಜ್ಯ ಸಚಿವರು ಮತ್ತು ಖ್ಯಾತ ಮಲಯಾಳಂ ಚಿತ್ರನಟ ಸುರೇಶ್ ಗೋಪಿ (Suressh Gopi) ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದರಾದ ತೇಜಸ್ವಿ ಸೂರ್ಯ (Tejasvi Surya) ರವರು ಉಪಸ್ಥಿತರಿರಲಿದ್ದು, ಕಾರ್ಯಕರ್ತ ಬಂಧುಗಳು, ಸಾರ್ವಜನಿಕರು, ಯುವಜನತೆ, ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಪಕ್ಷದ ಮುಖಂಡರು ಮನವಿ ಮಾಡಿದ್ದಾರೆ.

Sathish Kapikad 

Share.
Leave A Reply

Exit mobile version