Close Menu
SK Media NewsSK Media News
    What's Hot

    ದುಬೈಯಲ್ಲಿ ‘ದುಬೈ ಯಕ್ಷೋತ್ಸವ–2026’ – ಶ್ರೀ ಹರಿಲೀಲಾಮೃತಂ” ಯಕ್ಷಗಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಟಿಕೆಟ್ ಬಿಡುಗಡೆ

    November 17, 2026

    ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯಕಾರಣಿ ಸಮಿತಿ ಸಭೆ :ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿಯವರಿಂದ ಮುಂದಿನ ವರ್ಷದ ಕ್ರೀಡಾಕೂಟಗಳ ಬಗ್ಗೆ ಚರ್ಚೆ 

    November 17, 2026

    ಮಂಗಳೂರಿನಲ್ಲಿ ಯುವವಾಹಿನಿಯ ನೂತನ ಆಡಳಿತ ಕಚೇರಿ ಲೋಕಾರ್ಪಣೆ : ನಾಲ್ಕು ದಶಕಗಳ ಸಂಘಟನಾ ಪಯಣದಲ್ಲಿ ಐತಿಹಾಸಿಕ ಮೈಲಿಗಲ್ಲು 

    November 17, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಬೆಂಗಳೂರಿನಲ್ಲಿ ರೋಹನ್ ಕಾರ್ಪೋರೇಶನ್‌ನ ನೂತನ ಕಚೇರಿ ಶುಭಾರಂಭ – ಮುಖ್ಯಮಂತ್ರಿಗಳಿಂದ ಉದ್ಘಾಟನೆ: ನ. 6ರಿಂದ ಮೂರು ದಿನಗಳ ಪ್ರಾಜೆಕ್ಟ್ ಎಕ್ಸಿಬಿಷನ್, ವಿಶೇಷ ದರಗಳಲ್ಲಿ ಖರೀದಿಗೆ ಅವಕಾಶ
    ಕರಾವಳಿ

    ಬೆಂಗಳೂರಿನಲ್ಲಿ ರೋಹನ್ ಕಾರ್ಪೋರೇಶನ್‌ನ ನೂತನ ಕಚೇರಿ ಶುಭಾರಂಭ – ಮುಖ್ಯಮಂತ್ರಿಗಳಿಂದ ಉದ್ಘಾಟನೆ: ನ. 6ರಿಂದ ಮೂರು ದಿನಗಳ ಪ್ರಾಜೆಕ್ಟ್ ಎಕ್ಸಿಬಿಷನ್, ವಿಶೇಷ ದರಗಳಲ್ಲಿ ಖರೀದಿಗೆ ಅವಕಾಶ

    November 5, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಬೆಂಗಳೂರು: ಮಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆ ರೋಹನ್ ಕಾರ್ಪೋರೇಶನ್ ಬೆಂಗಳೂರಿನಲ್ಲಿ ತನ್ನ ನೂತನ ಕಚೇರಿಯನ್ನು ಆರಂಭಿಸುವ ಮೂಲಕ ಕರ್ನಾಟಕದ ರಾಜಧಾನಿಯಲ್ಲಿ ಕಾರ್ಯಚಟುವಟಿಕೆಗಳನ್ನು ವಿಸ್ತರಿಸಿದೆ. ನಗರದ ಕನ್ನಿಂಗ್‌ಹ್ಯಾಮ್ ರಸ್ತೆಯ ಸ್ಯಾಂಕಿ ರಸ್ತೆ ಕ್ರಾಸ್‌ನಲ್ಲಿರುವ ದಿ ಕನ್ನಿಂಗ್‌ಹ್ಯಾಮ್ ಕಮರ್ಷಿಯಲ್‌ನ ಮೊದಲ ಮಹಡಿಯಲ್ಲಿ ಸ್ಥಾಪಿಸಲಾಗಿರುವ ನೂತನ ಕಚೇರಿಯನ್ನು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಬೆಂಗಳೂರು ದೇಶದ ಪ್ರಮುಖ ಉದ್ಯಮ ಮತ್ತು ಹೂಡಿಕೆ ಕೇಂದ್ರವಾಗಿ ಬೆಳೆಯುತ್ತಿದ್ದು, ವಿವಿಧ ಕ್ಷೇತ್ರಗಳ ಉದ್ಯಮಿಗಳು ಮತ್ತು ಹೂಡಿಕೆದಾರರಿಗೆ ವಿಫುಲ ಅವಕಾಶಗಳನ್ನು ಒದಗಿಸುತ್ತಿದೆ. ಇಂತಹ ಸಂದರ್ಭದಲ್ಲಿ ರೋಹನ್ ಕಾರ್ಪೋರೇಶನ್ ಬೆಂಗಳೂರಿಗೆ ಪ್ರವೇಶಿಸಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದ್ದು, ಸಂಸ್ಥೆಯ ಮುಂದಿನ ಸಾಧನೆಗಳಿಗೆ ಶುಭ ಹಾರೈಸಿದರು.

    ರೋಹನ್ ಕಾರ್ಪೋರೇಶನ್ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಾ. ರೋಹನ್ ಮೊಂತೆರೊ ಮಾತನಾಡಿ, ಬೆಂಗಳೂರಿನಲ್ಲಿ ಕಚೇರಿ ಆರಂಭಿಸಿರುವುದು ಸಂಸ್ಥೆಯ ಬೆಳವಣಿಗೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಇಲ್ಲಿನ ಗ್ರಾಹಕರಿಗೆ ಸಂಸ್ಥೆಯ ಯೋಜನೆಗಳನ್ನು ಪರಿಚಯಿಸುವುದರೊಂದಿಗೆ ವಿಶ್ವಾಸಪೂರ್ಣ ಸಂಬಂಧಗಳನ್ನು ಬೆಳೆಸುವುದು ಮತ್ತು ಹೊಸ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಉದ್ದೇಶವಾಗಿದೆ ಎಂದರು.

    ಸಂಸ್ಥೆಯ ನಿರ್ದೇಶಕ ಡಿಯಾನ್ ಮೊಂತೆರೊ ಮಾತನಾಡಿ, ಬೆಂಗಳೂರಿನ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಮನೆ ಖರೀದಿದಾರರ ನಿರೀಕ್ಷೆಗಳು ಮತ್ತು ಜೀವನಶೈಲಿಯ ಅಗತ್ಯಗಳು ನಿರಂತರವಾಗಿ ಬದಲಾಗುತ್ತಿವೆ. ಈ ಬದಲಾವಣೆಗಳನ್ನು ಅರಿತು ಗ್ರಾಹಕರ ಅಗತ್ಯಗಳಿಗೆ ಅನುಗುಣವಾಗಿ ಗುಣಮಟ್ಟದ ವಸತಿ ಯೋಜನೆಗಳನ್ನು ಪರಿಚಯಿಸುವುದು ಸಂಸ್ಥೆಯ ಗುರಿಯಾಗಿದೆ ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಬೆಂಗಳೂರು ಮಹಾಧರ್ಮಪ್ರಾಂತ್ಯದ ಸಹಾಯಕ ಬಿಷಪ್ ಡಾ. ಜೋಸೆಫ್ ಸುಸೈನಾಥನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಖ್ಯಾತ ನಿರೂಪಕಿ ರೀನಾ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು.

    ನ. 6ರಿಂದ ಮೂರು ದಿನಗಳ ಪ್ರಾಜೆಕ್ಟ್ ಎಕ್ಸಿಬಿಷನ್ :

    ನೂತನ ಕಚೇರಿಯ ಉದ್ಘಾಟನೆಯ ಅಂಗವಾಗಿ ರೋಹನ್ ಕಾರ್ಪೋರೇಶನ್ ನವೆಂಬರ್ 6, 7 ಮತ್ತು 8ರಂದು ಮೂರು ದಿನಗಳ ಪ್ರಾಜೆಕ್ಟ್ ಎಕ್ಸಿಬಿಷನ್ ಆಯೋಜಿಸಿದೆ. ಪ್ರದರ್ಶನದಲ್ಲಿ ಸಂಸ್ಥೆಯ ವಿವಿಧ ವಸತಿ ಹಾಗೂ ರಿಯಲ್ ಎಸ್ಟೇಟ್ ಯೋಜನೆಗಳ ಮಾಹಿತಿ ಪಡೆಯಲು, ಸಂಸ್ಥೆಯ ಪ್ರತಿನಿಧಿಗಳೊಂದಿಗೆ ನೇರವಾಗಿ ಸಮಾಲೋಚಿಸಲು ಗ್ರಾಹಕರಿಗೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ, ಆಯ್ದ ಯೋಜನೆಗಳನ್ನು ವಿಶೇಷ ಹಾಗೂ ಆಕರ್ಷಕ ದರಗಳಲ್ಲಿ ಖರೀದಿಸುವ ಅವಕಾಶವೂ ಇರಲಿದೆ.

    1994ರಿಂದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ರೋಹನ್ ಕಾರ್ಪೋರೇಶನ್, ತನ್ನ ಮೂರು ದಶಕಗಳಿಗೂ ಮೀರಿದ ಅನುಭವ ಮತ್ತು ಗ್ರಾಹಕರ ವಿಶ್ವಾಸದೊಂದಿಗೆ ಇದೀಗ ಬೆಂಗಳೂರಿನ ಮಾರುಕಟ್ಟೆಯಲ್ಲೂ ತನ್ನ ಛಾಪು ಮೂಡಿಸಲು ಮುಂದಾಗಿದೆ.

    Sathish Kapikad 

    Share. Facebook Twitter Pinterest LinkedIn Email WhatsApp
    Previous Articleದೇಶ ವಿರೋಧಿಗಳ ಸಂಚನ್ನು ಬಯಲುಗೊಳಿಸಲು ನಾಳೆ ಮಂಗಳೂರಿನಲ್ಲಿ ಪ್ರಜಾಪ್ರಭುತ್ವ ಉಳಿಸಿ- ಅರಾಜಕತೆ ಅಳಿಸಿ’ ಬೃಹತ್ ಪಾದಯಾತ್ರೆ ಹಾಗೂ ಸಾರ್ವಜನಿಕ ಸಭೆ – ಅಭಿಯಾನ : ಸುರೇಶ್ ಗೋಪಿ, ತೇಜಸ್ವಿ ಸೂರ್ಯ ಭಾಗಿ
    Next Article ಹಾಲಿನ ದರ ಏರಿಕೆ ಖಂಡಿಸಿ ವಿಮೆನ್ ಇಂಡಿಯಾ ಮೂವ್‌ಮೆಂಟ್ ವತಿಯಿಂದ ಬಿಸಿರೋಡ್ ನಲ್ಲಿ ಪ್ರತಿಭಟನೆ – ಜನಸಾಮಾನ್ಯರ ಬದುಕನ್ನು ಆರ್ಥಿಕ ಸಂಕಷ್ಟಕ್ಕೆ ತಳ್ಳುವ ಸರ್ಕಾರ: ಝೀನತ್ ಗೂಡಿನಬಳಿ ಆಕ್ರೋಶ 

    Related Posts

    ಅಂತಾರಾಷ್ಟ್ರೀಯ

    ದುಬೈಯಲ್ಲಿ ‘ದುಬೈ ಯಕ್ಷೋತ್ಸವ–2026’ – ಶ್ರೀ ಹರಿಲೀಲಾಮೃತಂ” ಯಕ್ಷಗಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಟಿಕೆಟ್ ಬಿಡುಗಡೆ

    November 17, 2026
    ಕರಾವಳಿ

    ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯಕಾರಣಿ ಸಮಿತಿ ಸಭೆ :ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿಯವರಿಂದ ಮುಂದಿನ ವರ್ಷದ ಕ್ರೀಡಾಕೂಟಗಳ ಬಗ್ಗೆ ಚರ್ಚೆ 

    November 17, 2026
    ಕರಾವಳಿ

    ಮಂಗಳೂರಿನಲ್ಲಿ ಯುವವಾಹಿನಿಯ ನೂತನ ಆಡಳಿತ ಕಚೇರಿ ಲೋಕಾರ್ಪಣೆ : ನಾಲ್ಕು ದಶಕಗಳ ಸಂಘಟನಾ ಪಯಣದಲ್ಲಿ ಐತಿಹಾಸಿಕ ಮೈಲಿಗಲ್ಲು 

    November 17, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.