Close Menu
SK Media NewsSK Media News
    What's Hot

    ದುಬೈಯಲ್ಲಿ ‘ದುಬೈ ಯಕ್ಷೋತ್ಸವ–2026’ – ಶ್ರೀ ಹರಿಲೀಲಾಮೃತಂ” ಯಕ್ಷಗಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಟಿಕೆಟ್ ಬಿಡುಗಡೆ

    November 17, 2026

    ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯಕಾರಣಿ ಸಮಿತಿ ಸಭೆ :ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿಯವರಿಂದ ಮುಂದಿನ ವರ್ಷದ ಕ್ರೀಡಾಕೂಟಗಳ ಬಗ್ಗೆ ಚರ್ಚೆ 

    November 17, 2026

    ಮಂಗಳೂರಿನಲ್ಲಿ ಯುವವಾಹಿನಿಯ ನೂತನ ಆಡಳಿತ ಕಚೇರಿ ಲೋಕಾರ್ಪಣೆ : ನಾಲ್ಕು ದಶಕಗಳ ಸಂಘಟನಾ ಪಯಣದಲ್ಲಿ ಐತಿಹಾಸಿಕ ಮೈಲಿಗಲ್ಲು 

    November 17, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಮಾ ಮಂತ್ರ ವೆಂಚರ್ಸ್ ಬ್ಯಾನರ್ ಅಡಿಯಲ್ಲಿ ಪಿಕೆ ಪ್ರೊಡಕ್ಷನ್ ಅರ್ಪಿಸುವ, ಮಹಿಳಾ ನಿರ್ದೇಶನದ ಬಹುನಿರೀಕ್ಷಿತ ತುಳು-ಕನ್ನಡ ಸಿನಿಮಾಕ್ಕೆ ಶೀಘ್ರದಲ್ಲೇ ಚಿತ್ರೀಕರಣ
    ಕರಾವಳಿ

    ಮಾ ಮಂತ್ರ ವೆಂಚರ್ಸ್ ಬ್ಯಾನರ್ ಅಡಿಯಲ್ಲಿ ಪಿಕೆ ಪ್ರೊಡಕ್ಷನ್ ಅರ್ಪಿಸುವ, ಮಹಿಳಾ ನಿರ್ದೇಶನದ ಬಹುನಿರೀಕ್ಷಿತ ತುಳು-ಕನ್ನಡ ಸಿನಿಮಾಕ್ಕೆ ಶೀಘ್ರದಲ್ಲೇ ಚಿತ್ರೀಕರಣ

    November 10, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: ಮಾ ಮಂತ್ರ ವೆಂಚರ್ಸ್ ಬ್ಯಾನರ್ ಅಡಿಯಲ್ಲಿ PK Productions ಅರ್ಪಿಸುವ ಬಹುನಿರೀಕ್ಷಿತ ತುಳು-ಕನ್ನಡ ಸಿನಿಮಾಕ್ಕೆ ಶೀಘ್ರದಲ್ಲೇ ಚಿತ್ರೀಕರಣ ಆರಂಭಗೊಳ್ಳಲಿದೆ ಎಂದು ಚಿತ್ರ ನಟ ಪ್ರಕಾಶ್ ಧರ್ಮನಗರ ತಿಳಿಸಿದರು.

    ಸೋಮವಾರ ಸಂಜೆ ನಗರದ ಖಾಸಗಿ ಹೋಟೆಲೊಂದರಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜಸೇವೆಯಲ್ಲಿ ತಮ್ಮನ್ನು ತಾವು ಸಕ್ರಿಯವಾಗಿ ತೊಡಗಿಸಿಕೊಂಡು, ಕ್ರೀಡಾ ಕ್ಷೇತ್ರದಲ್ಲಿ ಯುವಜನತೆಗೆ ಸದಾ ಪ್ರೋತ್ಸಾಹ ನೀಡುತ್ತಿರುವ ಯುವ ಸಮಾಜಸೇವಕ ಹಾಗೂ ಉದ್ಯಮಿ ಪ್ರಕಾಶ್ ಕುಂಪಲ ಅವರು ಈ ಸಿನಿಮಾದ ಮೂಲಕ ಚಿತ್ರ ನಿರ್ಮಾಪಕರಾಗಿ ತುಳು-ಕನ್ನಡ ಇಂಡಸ್ಟ್ರಿಗೆ ಪಾದಾರ್ಪಣೆ ಮಾಡಲಿದ್ದಾರೆ ಎಂದರು.

    ‘ನಮ್ಮ ಕುಡ್ಲ’ ಸಿನಿಮಾದ ನಿರ್ದೇಶನದ ಮೂಲಕ ತುಳು ಚಿತ್ರರಂಗದ ಪ್ರಥಮ ಮಹಿಳಾ ನಿರ್ದೇಶಕಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಅಶ್ವಿನಿ ಕೋಟ್ಯಾನ್ ಅವರು ಈ ಚಿತ್ರಕ್ಕೆ ನಿರ್ದೇಶನದ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ತುಳು ಮತ್ತು ಕನ್ನಡ ಭಾಷೆಗಳಲ್ಲಿ ಏಕಕಾಲದಲ್ಲಿ ನಿರ್ಮಾಣವಾಗಲಿರುವ ಈ ಚಿತ್ರದ ಚಿತ್ರೀಕರಣ ಶೀಘ್ರದಲ್ಲೇ ಆರಂಭವಾಗಲಿದೆ ಎಂದವರು ವಿವರ ನೀಡಿದರು.

    ಚಿತ್ರದ ನಿರ್ದೇಶಕಿ ಅಶ್ವಿನಿ ಕೋಟ್ಯಾನ್ ಅವರು ಮಾತನಾಡಿ,ಚಿತ್ರದ ಕಥೆಯನ್ನು ರಾಜ್ ಪ್ರಕಾಶ್ ಶೆಟ್ಟಿ ರಚಿಸಿದ್ದು, ಸಂಭಾಷಣೆಯನ್ನು ಡಿ.ಬಿ.ಸಿ. ಶೇಖರ್ ಬರೆದಿದ್ದಾರೆ. ಪ್ರಕಾಶ್ ಕುಂಪಲ ಹಾಗೂ ಎನ್.ಬಿ. ಶರವಣ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ.

    ಹೊಸ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶ ನೀಡುವ ಉದ್ದೇಶ ಹೊಂದಿರುವ ಚಿತ್ರತಂಡವು ಪ್ರಸ್ತುತ ಕಲಾವಿದರು ಹಾಗೂ ತಾಂತ್ರಿಕ ವರ್ಗದ ಆಯ್ಕೆ ಪ್ರಕ್ರಿಯೆಗೆ ಸಿದ್ಧತೆ ನಡೆಸುತ್ತಿದೆ ಎಂದರು.

    ನಿರ್ಮಾಪಕ ಪ್ರಕಾಶ್ ಕುಂಪಲ ಅವರು ಮಾತನಾಡಿ,ಮಂಗಳೂರು ಮತ್ತು ಉಡುಪಿ ಭಾಗದ ಪ್ರತಿಭಾವಂತ ಕಲಾವಿದರು ಹಾಗೂ ತಂತ್ರಜ್ಞರನ್ನು ಆಡಿಷನ್ ಮೂಲಕ ಆಯ್ಕೆ ಮಾಡಿ ಅವಕಾಶ ಕಲ್ಪಿಸಲು ನಿರ್ಧರಿಸಲಾಗಿದೆ.

    ಚಿತ್ರದ ಚಿತ್ರೀಕರಣ ಮಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುಮಾರು 35 ದಿನಗಳ ಕಾಲ ಒಂದೇ ಹಂತದಲ್ಲಿ ನಡೆಯಲಿದೆ. ಚಿತ್ರದಲ್ಲಿ ಒಟ್ಟು ನಾಲ್ಕು ಹಾಡುಗಳಿದ್ದು, ಕನ್ನಡ ಚಿತ್ರರಂಗದ ಪ್ರಸಿದ್ಧ ಸಂಗೀತ ನಿರ್ದೇಶಕರೊಂದಿಗೆ ಈಗಾಗಲೇ ಮಾತುಕತೆ ನಡೆಸಲಾಗಿದೆ ಎಂದು ತಿಳಿಸಿದರು.

    ಚಿತ್ರೀಕರಣದ ಬಳಿಕ ಪೋಸ್ಟ್ ಪ್ರೊಡಕ್ಷನ್ ಕಾರ್ಯಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ, ಮುಂದಿನ ವರ್ಷ ಚಿತ್ರವನ್ನು ಬಿಡುಗಡೆ ಮಾಡುವ ಯೋಜನೆಯನ್ನು ಚಿತ್ರತಂಡ ಹೊಂದಿದೆ.

    ಹೊಸ ಪ್ರತಿಭೆಗಳ ಸಮಾಗಮ, ವಿಭಿನ್ನ ಕಥಾಹಂದರ ಹಾಗೂ ಸಾಮಾಜಿಕ ಕಳಕಳಿಯ ಸಂದೇಶವನ್ನು ಒಳಗೊಂಡಿರುವ ಈ ತುಳು-ಕನ್ನಡ ಸಿನಿಮಾ ಪ್ರೇಕ್ಷಕರಿಗೆ ಹೊಸ ಅನುಭವ ನೀಡುವ ನಿರೀಕ್ಷೆಯನ್ನು ಚಿತ್ರತಂಡ ಹೊಂದಿದೆ ಎಂದವರು ಮಾಹಿತಿ ನೀಡಿದರು.

    ಚಿತ್ರದ ಮತ್ತೊರ್ವ ನಿರ್ಮಾಪಕ NB ಶರವಣ ಅವರು ಮಾತನಾಡಿ, ತುಳು ಮತ್ತು ಕನ್ನಡ ಚಿತ್ರರಂಗದಲ್ಲಿ ಹೊಸ ಪ್ರಯತ್ನಕ್ಕೆ ಮುನ್ನುಡಿ ಬರೆಯಲು ಸಜ್ಜಾಗಿರುವ ಈ ಚಿತ್ರವು ಪ್ರಾದೇಶಿಕ ಪ್ರತಿಭೆಗಳಿಗೆ ಉತ್ತಮ ವೇದಿಕೆಯಾಗುವ ಆಶಯ ಹೊಂದಿದೆ ಎಂದರು.

    ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ಕಥೆಗಾರ ರಾಜ್ ಪ್ರಕಾಶ್ ಶೆಟ್ಟಿ, ಸಂಭಾಷಣೆಕಾರ ಡಿ.ಬಿ.ಸಿ. ಶೇಖರ್, ಕಾರ್ಯಕಾರಿ ನಿರ್ಮಾಪಕ ಅನಿಲ್ ಕರ್ಕೇರ ಹಾಗೂ ತುಳುಚಿತ್ರ ನಿರ್ಮಾಪಕ ಪಮ್ಮಿ ಕೊಡಿಯಾಲ್ ಬೈಲ್ ಉಪಸ್ಥಿತರಿದ್ದರು.

    Sathish Kapikad 

    Share. Facebook Twitter Pinterest LinkedIn Email WhatsApp
    Previous Articleಪಾಕ ಶಾಸ್ತ್ರದಲ್ಲಿ “ನಳಪಾಕ” ಎಂದೇ ಪ್ರಸಿದ್ದರಾಗಿರುವ ವೆಂಕಟೇಶ್ ಪಾವಂಜೆ ಅವರಿಗೆ ಅವರ ವಿಶೇಷ ಸಾಧನೆಗಾಗಿ 2026ರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
    Next Article 8ನೇ ದಿನ ಪೂರೈಸಿ, 180 ಗಂಟೆಗಳ ಮೈಲಿಗಲ್ಲನ್ನು ತಲುಪಿದ 12 ದಿನ, 12 ಗಂಟೆ ಮತ್ತು 12 ನಿಮಿಷಗಳ ಕೊಂಕಣಿ ಗಾಯನ ಮಾರಾಥಾನ್ : ವಿಶ್ವದಾಖಲೆಗೆ ಇನ್ನೂ ನಾಲ್ಕು ದಿನ ಮಾತ್ರ ಬಾಕಿ

    Related Posts

    ಅಂತಾರಾಷ್ಟ್ರೀಯ

    ದುಬೈಯಲ್ಲಿ ‘ದುಬೈ ಯಕ್ಷೋತ್ಸವ–2026’ – ಶ್ರೀ ಹರಿಲೀಲಾಮೃತಂ” ಯಕ್ಷಗಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಟಿಕೆಟ್ ಬಿಡುಗಡೆ

    November 17, 2026
    ಕರಾವಳಿ

    ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯಕಾರಣಿ ಸಮಿತಿ ಸಭೆ :ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿಯವರಿಂದ ಮುಂದಿನ ವರ್ಷದ ಕ್ರೀಡಾಕೂಟಗಳ ಬಗ್ಗೆ ಚರ್ಚೆ 

    November 17, 2026
    ಕರಾವಳಿ

    ಮಂಗಳೂರಿನಲ್ಲಿ ಯುವವಾಹಿನಿಯ ನೂತನ ಆಡಳಿತ ಕಚೇರಿ ಲೋಕಾರ್ಪಣೆ : ನಾಲ್ಕು ದಶಕಗಳ ಸಂಘಟನಾ ಪಯಣದಲ್ಲಿ ಐತಿಹಾಸಿಕ ಮೈಲಿಗಲ್ಲು 

    November 17, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.