ಮಂಗಳೂರು: ಆರೋಗ್ಯ ಸಚಿವ ಯು ಟಿ ಖಾದರ್ ಅವರ ಸೂಚನೆಯ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆಹಾರ ಸುರಕ್ಷಿತಾ ಮತ್ತು ಗುಣಮಟ್ಟ ಇಲಾಖೆಯಿಂದ ಅನಿರೀಕ್ಷಿತ ದಾಳಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಅಂಕಿತ ಅಧಿಕಾರಿ ಡಾ. ಪ್ರವೀಣ್ ಕುಮಾರ್ ಸಿಎಚ್ ಇವರ ನೇತೃತ್ವದಲ್ಲಿ ಐದು ತಂಡಗಳನ್ನು ರಚಿಸಿ ಸೂರತ್ಕಲ್ ವ್ಯಾಪ್ತಿಯಲ್ಲಿ ನಡೆಸಲಾಯಿತು.

ಸುರತ್ಕಲ್ ನಲ್ಲಿರುವ ಸೂರಜ್ ಇಂಟರ್ನ್ಯಾಷನಲ್ ಹೋಟೆಲ್, ಮೋರ್ ರಿಟೇಲ್ ಮಳಿಗೆ, ಬ್ಲಿಂಕ್ ಇಟ್ ಆನ್ಲೈನ್ ಪ್ಲಾಟ್ಫಾರ್ಮ್,ಮಕ್ ಡೊನಾಲ್ಡ್ಶ್ ರೆಸ್ಟೋರೆಂಟ್, ಎನ್ ಐಟಿಕೆ ತಾಂತ್ರಿಕ ಕಾಲೇಜು ವಿದ್ಯಾರ್ಥಿಗಳ ಹಾಸ್ಟೆಲ್ಗಳಿಗೆ ಆಹಾರ ಸರಬರಾಜು ಮಾಡುವ ಕಿಚನ್ ಗಳಿಗೆ ಅನಿರೀಕ್ಷಿತವಾಗಿ ದಾಳಿ ನಡೆಸಲಾಯಿತು.

ಸೂರಜ್ ಇಂಟರ್ನ್ಯಾಷನಲ್ ಹೋಟೆಲ್ನಲ್ಲಿ ನೈರ್ಮಲ್ಯತೆ ಕಾಪಾಡಿಕೊಳ್ಳದಿರುವುದರಿಂದ ಏಡಿಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಕ್ರಮ ಕೈಗೊಳ್ಳಲಾಯಿತು.

Mc donald ಸುರತ್ಕಲ್ ಇಲ್ಲಿ ಅಡುಗೆ ಕೋಣೆಯಲ್ಲಿ ನೈರ್ಮಲ್ಯ ಕೊರತೆ ಇರುವುದರಿಂದ ಪ್ರಕರಣ ದಾಖಲಿಸಲಾಯಿತು.

ಸೂರಜ್ ಇಂಟರ್ನ್ಯಾಷನಲ್ ಹೋಟೆಲ್ ಮತ್ತು ಮಕ್ ಡೊನಾಲ್ಡ್ ರೆಸ್ಟೋರೆಂಟ್ ಗಳಿಂದ ಆಹಾರ ಮಾದರಿಯ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಯಿತು.

ಬೈಕಂಪಾಡಿ ಇಂಡಸ್ಟ್ರಿ ಯಲ್ ಏರಿಯಾದಲ್ಲಿರುವ ಫಾರ್ಚುನ್ ಇಂಡಸ್ಟ್ರೀಸ್ ಚೀಸ್ ಬಾಲ್ ಸ್ನಾಕ್ಸ್ ತಯಾರಿಸುತ್ತಿದ್ದು ತಯಾರಿಕಾ ಘಟಕ ದಲ್ಲಿ ಹೆಗ್ಗಣಗಳು ಓಡಾಡುತ್ತಿದ್ದು ಹಾಗೂ ಅನೈ ರ್ಮಲ್ಯದಿಂದ ಕೂಡಿದ್ದು ತಯಾರಿಕಾ ಘಟಕಕ್ಕೆ ಸೀಲ್ ಮಾಡಿ ಸೀಜ್ ಮಾಡಲಾಯಿತು.

Sathish Kapikad 

Share.
Leave A Reply

Exit mobile version