Close Menu
SK Media NewsSK Media News
    What's Hot

    ದುಬೈಯಲ್ಲಿ ‘ದುಬೈ ಯಕ್ಷೋತ್ಸವ–2026’ – ಶ್ರೀ ಹರಿಲೀಲಾಮೃತಂ” ಯಕ್ಷಗಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಟಿಕೆಟ್ ಬಿಡುಗಡೆ

    November 17, 2026

    ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯಕಾರಣಿ ಸಮಿತಿ ಸಭೆ :ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿಯವರಿಂದ ಮುಂದಿನ ವರ್ಷದ ಕ್ರೀಡಾಕೂಟಗಳ ಬಗ್ಗೆ ಚರ್ಚೆ 

    November 17, 2026

    ಮಂಗಳೂರಿನಲ್ಲಿ ಯುವವಾಹಿನಿಯ ನೂತನ ಆಡಳಿತ ಕಚೇರಿ ಲೋಕಾರ್ಪಣೆ : ನಾಲ್ಕು ದಶಕಗಳ ಸಂಘಟನಾ ಪಯಣದಲ್ಲಿ ಐತಿಹಾಸಿಕ ಮೈಲಿಗಲ್ಲು 

    November 17, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ನ.22ರಂದು ಮಂಗಳೂರಿನಲ್ಲಿ ರೋಟರಿ ಚಿಣ್ಣರ ಉತ್ಸವ : ಒಂದು ದಿನದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧಾಕೂಟ
    ಕರಾವಳಿ

    ನ.22ರಂದು ಮಂಗಳೂರಿನಲ್ಲಿ ರೋಟರಿ ಚಿಣ್ಣರ ಉತ್ಸವ : ಒಂದು ದಿನದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧಾಕೂಟ

    November 17, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು, ನ.17: ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್, ರೋಟರ‍್ಯಾಕ್ಟ್ ಕ್ಲಬ್ ಮಂಗಳೂರು ಸಿಟಿ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ, ತಮ್ಮ ಸಮಾಜ ಸೇವಾ ಚಟುವಟಿಕೆಗಳ ಅಂಗವಾಗಿ 26ನೇ ವಾರ್ಷಿಕ ರೋಟರಿ ಚಿಣ್ಣರ ಉತ್ಸವ -ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧಾಕೂಟವನ್ನು ರವಿವಾರ ತಾ.22.11.2026ರಂದು ಕೆನರಾ ಹೈಸ್ಕೂಲ್ ಉರ್ವ ಮಂಗಳೂರು ಆವರಣದಲ್ಲಿ ಬೆಳಗ್ಗೆ 9 ಗಂಟೆಗೆ ಆಯೋಜಿಸಲಾಗಿದೆ ಎಂದು ಚಿಣ್ಣರ ಉತ್ಸವದ ಸಂಘಟನಾ ಅಧ್ಯಕ್ಷ ಡಾ. ದೇವದಾಸ್ ರೈ ಅವರು ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ ನೀಡಿದರು.

    ಈ ಒಂದು ದಿನದ ಕ್ರೀಡಾ ಸ್ಪರ್ಧಾಕೂಟ ಮತ್ತು ಮನೋರಂಜನಾ ಉತ್ಸವದಲ್ಲಿ ಜಿಲ್ಲೆಯ ವಿವಿಧ 10 ಮಕ್ಕಳ ರಕ್ಷಣೆ ಮತ್ತು ಆರೈಕೆ ಕೇಂದ್ರಗಳಿಂದ ಸುಮಾರು 434 ನಿವಾಸಿ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ನುಡಿದರು.

    ಈ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧಾಕೂಟವನ್ನು ಸಂಸದ ಕ್ಯಾ. ಬ್ರಿಜೇಶ್ ಚೌಟ ಉದ್ಘಾಟಸಲಿರುವರು. ವಲಯ ಸೇನಾನಿ ರೋ. ಜಿಲ್ಲಾ 3181 ವಲಯ 2ರ ಮಾಜಿ ಅಧ್ಯಕ್ಷ ರಾಜೇಶ್ ಶೆಟ್ಟಿ ಅವರು ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿರುವರು. ರೋಟರಿ ಮಂಗಳೂರು ಸೆಂಟ್ರಲ್ ಸಂಸ್ಥೆಯ ಅಧ್ಯಕ್ಷರಾದ ಬಿ.ಎನ್. ರವೀಂದ್ರ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

    ಸಮಾರೋಪ ಸಮಾರಂಭವು ನಗರದ ಕೆನರಾ ಹೈಸ್ಕೂಲ್, ಉರ್ವ, ಮಂಗಳೂರು ಸಭಾಂಗಣದಲ್ಲಿ ಸಂಜೆ 5 ಗಂಟೆಗೆ ಜರುಗಲಿದೆ. ರೋಟರಿ ಜಿಲ್ಲೆ 3181ರ ಮಾಜಿ ಗವರ್ನರ್ ಎಂ.ಡಿ. ಪ್ರಕಾಶ್ ಕಾರಂತ್ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು, ಸ್ಪರ್ಧಾ ವಿಜೇತರಿಗೆ ಬಹುಮಾನ ಹಾಗೂ ಸರ್ವಾಂಗೀಣ ಪ್ರದರ್ಶನ ನೀಡಿದ ಮಕ್ಕಳ ರಕ್ಷಣೆ ಮತ್ತು ಆರೈಕೆ ಕೇಂದ್ರಕ್ಕೆ ಪ್ರಶಸ್ತಿ ಫಲಕವನ್ನು ನೀಡಲಿರುವರು ಎಂದರು.

    ಕ್ರೀಡಾ ಮತ್ತು ಮನೋರಂಜನಾ ಉತ್ಸವದಲ್ಲಿ ಮಕ್ಕಳು ತಮ್ಮ ಆಕರ್ಷಕ ಪಥಸಂಚಲನ, ಪ್ರತಿಭಾ ಕೌಶಲ್ಯ ಮತ್ತು ಸಾಧನೆಯನ್ನು ಪ್ರದರ್ಶಿಸಲಿರುವರು. ಅವರ ಉತ್ಸಾಹಕ್ಕೆ ಪ್ರೋತ್ಸಾಹ ನೀಡಿ ಅವರ ಒಂದು ದಿನದ ಸಂತಸವನ್ನು ಹೊರಹೊಮ್ಮಿಸುವುದೇ ರೋಟರಿ ಸಂಸ್ಥೆಯ ಪ್ರಮುಖ ಉದ್ಧೇಶವಾಗಿದೆ. ಈ ಕ್ರೀಡಾಕೂಟವನ್ನು ರೋಟರಿ ಸಂಸ್ಥೆಯು 1996ರಿಂದ ಸತತವಾಗಿ ಆಯೋಜಿಸುತ್ತಿದೆ ಎಂದು ಡಾ.ದೇವದಾಸ್ ರೈ ತಿಳಿಸಿದರು.

    ವೇದಿಕೆಯಲ್ಲಿ ರೋಟರಿ ಸಂಸ್ಥೆಯ ಅಧ್ಯಕ್ಷ ರವೀಂದ್ರ, ಕಾರ್ಯದರ್ಶಿ ಜಾಕ್ಸನ್ ಸಲ್ದಾನಾ, ಮಾಜಿ ಅಧ್ಯಕ್ಷ ಭಾಸ್ಕರ ರೈ, ರೋಟರಾಕ್ಟ್ ಸಂಸ್ಥೆಯ ಅಧ್ಯಕ್ಷ ರಕ್ಷಣ್, ಕಾರ್ಯದರ್ಶಿ ಮುಕೇಶ್, ಸಂಸ್ಥೆಯ ಮಾಧ್ಯಮ ಸಲಹೆಗಾರ ಎಂ.ವಿ. ಮಲ್ಯ ಉಪಸ್ಥಿತರಿದ್ದರು.

    Sathish Kapikad

    Share. Facebook Twitter Pinterest LinkedIn Email WhatsApp
    Previous Articleರಾಜ್ಯಮಟ್ಟದ ಸಹಕಾರ ಸಪ್ತಾಹ ಗೌರವ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಪಿ.ಬಿ.ಹರೀಶ್ ರೈ ಆಯ್ಕೆ : ನವೆಂಬರ್ 20ರಂದು ಪ್ರದಾನ 
    Next Article ಕಾರ್ಮೆಲ್ ಶಾಲೆಯ ವಿದ್ಯಾರ್ಥಿನಿಯಿಂದ ಸಾಹಿತ್ಯ ಲೋಕಕ್ಕೆ ಮೊದಲ ಹೆಜ್ಜೆ : ಏಳನೇ ತರಗತಿ ವಿದ್ಯಾರ್ಥಿನಿ “ವಿಯಾ ಸಾಯಿ” ಅವರ ಚೊಚ್ಚಲ ಕವನ ಸಂಕಲನ ಬಿಡುಗಡೆ

    Related Posts

    ಅಂತಾರಾಷ್ಟ್ರೀಯ

    ದುಬೈಯಲ್ಲಿ ‘ದುಬೈ ಯಕ್ಷೋತ್ಸವ–2026’ – ಶ್ರೀ ಹರಿಲೀಲಾಮೃತಂ” ಯಕ್ಷಗಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಟಿಕೆಟ್ ಬಿಡುಗಡೆ

    November 17, 2026
    ಕರಾವಳಿ

    ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯಕಾರಣಿ ಸಮಿತಿ ಸಭೆ :ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿಯವರಿಂದ ಮುಂದಿನ ವರ್ಷದ ಕ್ರೀಡಾಕೂಟಗಳ ಬಗ್ಗೆ ಚರ್ಚೆ 

    November 17, 2026
    ಕರಾವಳಿ

    ಮಂಗಳೂರಿನಲ್ಲಿ ಯುವವಾಹಿನಿಯ ನೂತನ ಆಡಳಿತ ಕಚೇರಿ ಲೋಕಾರ್ಪಣೆ : ನಾಲ್ಕು ದಶಕಗಳ ಸಂಘಟನಾ ಪಯಣದಲ್ಲಿ ಐತಿಹಾಸಿಕ ಮೈಲಿಗಲ್ಲು 

    November 17, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.