Close Menu
SK Media NewsSK Media News
    What's Hot

    ದುಬೈಯಲ್ಲಿ ‘ದುಬೈ ಯಕ್ಷೋತ್ಸವ–2026’ – ಶ್ರೀ ಹರಿಲೀಲಾಮೃತಂ” ಯಕ್ಷಗಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಟಿಕೆಟ್ ಬಿಡುಗಡೆ

    November 17, 2026

    ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯಕಾರಣಿ ಸಮಿತಿ ಸಭೆ :ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿಯವರಿಂದ ಮುಂದಿನ ವರ್ಷದ ಕ್ರೀಡಾಕೂಟಗಳ ಬಗ್ಗೆ ಚರ್ಚೆ 

    November 17, 2026

    ಮಂಗಳೂರಿನಲ್ಲಿ ಯುವವಾಹಿನಿಯ ನೂತನ ಆಡಳಿತ ಕಚೇರಿ ಲೋಕಾರ್ಪಣೆ : ನಾಲ್ಕು ದಶಕಗಳ ಸಂಘಟನಾ ಪಯಣದಲ್ಲಿ ಐತಿಹಾಸಿಕ ಮೈಲಿಗಲ್ಲು 

    November 17, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಕಾರ್ಮೆಲ್ ಶಾಲೆಯ ವಿದ್ಯಾರ್ಥಿನಿಯಿಂದ ಸಾಹಿತ್ಯ ಲೋಕಕ್ಕೆ ಮೊದಲ ಹೆಜ್ಜೆ : ಏಳನೇ ತರಗತಿ ವಿದ್ಯಾರ್ಥಿನಿ “ವಿಯಾ ಸಾಯಿ” ಅವರ ಚೊಚ್ಚಲ ಕವನ ಸಂಕಲನ ಬಿಡುಗಡೆ
    ಕರಾವಳಿ

    ಕಾರ್ಮೆಲ್ ಶಾಲೆಯ ವಿದ್ಯಾರ್ಥಿನಿಯಿಂದ ಸಾಹಿತ್ಯ ಲೋಕಕ್ಕೆ ಮೊದಲ ಹೆಜ್ಜೆ : ಏಳನೇ ತರಗತಿ ವಿದ್ಯಾರ್ಥಿನಿ “ವಿಯಾ ಸಾಯಿ” ಅವರ ಚೊಚ್ಚಲ ಕವನ ಸಂಕಲನ ಬಿಡುಗಡೆ

    November 17, 2026Updated:November 17, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: ಕಾರ್ಮೆಲ್ ಸಿಬಿಎಸ್‌ಇ ಶಾಲೆಯ ಏಳನೇ ತರಗತಿ ವಿದ್ಯಾರ್ಥಿನಿ ವಿಯಾ ಸಾಯಿ ರಚಿಸಿರುವ ಚೊಚ್ಚಲ ಕವನ ಸಂಕಲನ ‘ವೇರ್ ಮೈ ವರ್ಡ್ಸ್ ಬಿಗಿನ್’ (Where My Words Begin) ಪುಸ್ತಕವು ನಗರದ ಇಎಲ್‌ಸಿ ಕ್ಯಾಂಪಸ್‌ನಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಬಿಡುಗಡೆಯಾಯಿತು.

    ನಗರದ ಸೆಂಟರ್ ಫಾರ್ ಇಂಟಿಗ್ರೇಟೆಡ್ ಲರ್ನಿಂಗ್ ಸಂಸ್ಥೆ ಹಾಗೂ ನಗರದ ಮೊದಲ ಮಕ್ಕಳ ಪುಸ್ತಕ ಕ್ಲಬ್ ‘ಬುಕ್‌ಹಾಲಿಕ್ಸ್ ಜೂನಿಯರ್’ ಜಂಟಿಯಾಗಿ ಈ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಆಯೋಜಿಸಿದ್ದವು.

    ಪುಸ್ತಕವನ್ನು ಬಿಡುಗಡೆಗೊಳಿಸಿದ ಕಾರ್ಮೆಲ್ ಸಿಬಿಎಸ್‌ಇ ಶಾಲೆಯ ಪ್ರಾಂಶುಪಾಲರಾದ ಸಿಸ್ಟರ್ ರೋಸ್ವೀರಾ ಅವರು, ಇಂದಿನ ಡಿಜಿಟಲ್ ಯುಗದಲ್ಲಿ ಮಕ್ಕಳಲ್ಲಿ ಓದುವ ಹವ್ಯಾಸ ಕಡಿಮೆಯಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಇಂತಹ ಸಂದರ್ಭದಲ್ಲಿ ವಿಯಾ ಸಾಯಿಯಂತಹ ಪುಟ್ಟ ಪ್ರತಿಭೆಗಳು ಪುಸ್ತಕ ಪ್ರಕಟಿಸುತ್ತಿರುವುದು ಹಾಗೂ ಬುಕ್‌ಹಾಲಿಕ್ಸ್ ಜೂನಿಯರ್ ಮೂಲಕ ಯುವ ಓದುಗರು ಒಂದೆಡೆ ಸೇರುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಹೇಳಿದರು.

    ಸಾಹಿತ್ಯ ಕ್ಷೇತ್ರದ ಜೊತೆಗೆ ಫ್ಯಾಷನ್ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿಯೂ ವಿಯಾ ಸಾಧನೆ ಮಾಡಿರುವುದನ್ನು ಅವರು ಶ್ಲಾಘಿಸಿದರು. ವಿಯಾಳ ಪುಸ್ತಕವು ಇತರ ಮಕ್ಕಳಿಗೂ ಓದುವ ಮತ್ತು ಬರೆಯುವ ಹವ್ಯಾಸ ಬೆಳೆಸಿಕೊಳ್ಳಲು ಪ್ರೇರಣೆಯಾಗಲಿದೆ ಎಂದು ಅಭಿಪ್ರಾಯಪಟ್ಟರು.

    ಕಾರ್ಯಕ್ರಮದಲ್ಲಿ ಮಾತನಾಡಿದ ಹಿರಿಯ ಪತ್ರಕರ್ತ ಶ್ರೀನಿವಾಸನ್ ನಂದಗೋಪಾಲ್ ಅವರು, ಮಕ್ಕಳು ತಮ್ಮ ಕಲ್ಪನೆಗಳಿಗೆ ಮಿತಿಯಿಲ್ಲದೆ ರೆಕ್ಕೆ ನೀಡಬೇಕು ಹಾಗೂ ಅವುಗಳನ್ನು ಬರಹದ ರೂಪದಲ್ಲಿ ಅಭಿವ್ಯಕ್ತಪಡಿಸಬೇಕು ಎಂದು ಕರೆ ನೀಡಿದರು. ಮಕ್ಕಳ ಕಲ್ಪನೆಗೆ ಯಾವುದೇ ಗಡಿಯಿಲ್ಲ. ಇಂದಿನ ದಿನಗಳಲ್ಲಿ ಆನ್‌ಲೈನ್ ವೇದಿಕೆ ಸೇರಿದಂತೆ ವಿವಿಧ ಮಾಧ್ಯಮಗಳ ಮೂಲಕ ಮಕ್ಕಳ ಸಾಹಿತ್ಯ ಕೃತಿಗಳನ್ನು ಪ್ರಕಟಿಸಲು ವಿಪುಲ ಅವಕಾಶಗಳಿವೆ ಎಂದು ತಿಳಿಸಿದರು.

    ಓದುವಿಕೆ ಕೇವಲ ಹವ್ಯಾಸವಾಗಿರದೆ ಬಾಲ್ಯದಿಂದಲೇ ಜೀವನದ ಒಂದು ಭಾಗವಾಗಬೇಕು. ಪುಸ್ತಕ ಓದುವ ಅಭ್ಯಾಸವು ಬರವಣಿಗೆಯ ಆಸಕ್ತಿಯನ್ನೂ ಬೆಳೆಸುತ್ತದೆ. ಇದೇ ಉದ್ದೇಶದಿಂದ ಬುಕ್‌ಹಾಲಿಕ್ಸ್ ಜೂನಿಯರ್ ವೇದಿಕೆಯು ಯುವ ಓದುಗರನ್ನು ಒಟ್ಟುಗೂಡಿಸಿ, ಅವರು ಓದಿದ ಪುಸ್ತಕಗಳ ಕುರಿತು ಚರ್ಚಿಸಲು ಅವಕಾಶ ಕಲ್ಪಿಸುತ್ತಿದೆ. ಇದರಿಂದ ವಿವಿಧ ಪ್ರಕಾರದ ಪುಸ್ತಕಗಳ ಬಗ್ಗೆ ಮಕ್ಕಳಲ್ಲಿ ಆಸಕ್ತಿ ಮೂಡುತ್ತಿದೆ ಎಂದು ಹೇಳಿದರು.

    ಕಳೆದ 17 ವರ್ಷಗಳಿಂದ ಸೆಂಟರ್ ಫಾರ್ ಇಂಟಿಗ್ರೇಟೆಡ್ ಲರ್ನಿಂಗ್ ಸಂಸ್ಥೆಯು ಮಕ್ಕಳ ಪ್ರತಿಭೆಯನ್ನು ಗುರುತಿಸಿ, ಅವರನ್ನು ಉತ್ತಮ ವ್ಯಕ್ತಿತ್ವವುಳ್ಳವರನ್ನಾಗಿ ರೂಪಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ ಎಂದರು.

    ತಮ್ಮ ಮೊದಲ ಕವನ ಸಂಕಲನ ಬಿಡುಗಡೆಯಾದ ಹಿನ್ನೆಲೆಯಲ್ಲಿ ಯುವ ಕವಯತ್ರಿ ವಿಯಾ ಸಾಯಿ ಸಂತಸ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಕವನಗಳ ಜೊತೆಗೆ ಗದ್ಯ ಸಾಹಿತ್ಯವನ್ನೂ ರಚಿಸಿ ಮತ್ತಷ್ಟು ಪುಸ್ತಕಗಳನ್ನು ಪ್ರಕಟಿಸುವ ಆಶಯವನ್ನು ವ್ಯಕ್ತಪಡಿಸಿದರು. ಈ ಪುಸ್ತಕವನ್ನು ಈಗಾಗಲೇ ‘ಬುಕ್ ಲೀಫ್ ಪಬ್ಲಿಷಿಂಗ್’ ಎಂಬ ಆನ್‌ಲೈನ್ ವೇದಿಕೆಯ ಮೂಲಕ ಪ್ರಕಟಿಸಲಾಗಿದೆ. ವಿಯಾ ಸಾಯಿ ಅವರು ತಮ್ಮ ಸಾಹಿತ್ಯಿಕ ಸಾಧನೆಗಾಗಿ ಪ್ರತಿಷ್ಠಿತ ‘21ನೇ ಶತಮಾನದ ಎಮಿಲಿ ಡಿಕಿನ್ಸನ್ ಪ್ರಶಸ್ತಿ’ಯನ್ನೂ ಪಡೆದಿದ್ದಾರೆ.

    ಕಾರ್ಯಕ್ರಮದಲ್ಲಿ ಸೆಂಟರ್ ಫಾರ್ ಇಂಟಿಗ್ರೇಟೆಡ್ ಲರ್ನಿಂಗ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕಿ ಸಚಿತಾ ನಂದಗೋಪಾಲ್, ವಿಯಾಳ ಪೋಷಕರಾದ ಭವ್ಯಾ ಮತ್ತು ಭರತ್ ಉಪಸ್ಥಿತರಿದ್ದರು.

    ಬುಕ್‌ಹಾಲಿಕ್ಸ್ ಜೂನಿಯರ್‌ನ ಮುಖ್ಯ ಕ್ಯುರೇಟರ್ ಪ್ರಕೃತಿ ಕಾರ್ಯಕ್ರಮ ನಿರೂಪಿಸಿದರು. ಪುಸ್ತಕ ಕ್ಲಬ್‌ನ ಸದಸ್ಯ ಅಭಯ್ ಕಾರ್ತಿಕ್ ಸ್ವಾಗತಿಸಿದರು. ದ್ರವಿನ್ ವಂದಿಸಿದರು.

    Sathish Kapikad 

    Share. Facebook Twitter Pinterest LinkedIn Email WhatsApp
    Previous Articleನ.22ರಂದು ಮಂಗಳೂರಿನಲ್ಲಿ ರೋಟರಿ ಚಿಣ್ಣರ ಉತ್ಸವ : ಒಂದು ದಿನದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧಾಕೂಟ
    Next Article ಮಂಗಳೂರಿನಲ್ಲಿ ಯುವವಾಹಿನಿಯ ನೂತನ ಆಡಳಿತ ಕಚೇರಿ ಲೋಕಾರ್ಪಣೆ : ನಾಲ್ಕು ದಶಕಗಳ ಸಂಘಟನಾ ಪಯಣದಲ್ಲಿ ಐತಿಹಾಸಿಕ ಮೈಲಿಗಲ್ಲು 

    Related Posts

    ಅಂತಾರಾಷ್ಟ್ರೀಯ

    ದುಬೈಯಲ್ಲಿ ‘ದುಬೈ ಯಕ್ಷೋತ್ಸವ–2026’ – ಶ್ರೀ ಹರಿಲೀಲಾಮೃತಂ” ಯಕ್ಷಗಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಟಿಕೆಟ್ ಬಿಡುಗಡೆ

    November 17, 2026
    ಕರಾವಳಿ

    ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯಕಾರಣಿ ಸಮಿತಿ ಸಭೆ :ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿಯವರಿಂದ ಮುಂದಿನ ವರ್ಷದ ಕ್ರೀಡಾಕೂಟಗಳ ಬಗ್ಗೆ ಚರ್ಚೆ 

    November 17, 2026
    ಕರಾವಳಿ

    ಮಂಗಳೂರಿನಲ್ಲಿ ಯುವವಾಹಿನಿಯ ನೂತನ ಆಡಳಿತ ಕಚೇರಿ ಲೋಕಾರ್ಪಣೆ : ನಾಲ್ಕು ದಶಕಗಳ ಸಂಘಟನಾ ಪಯಣದಲ್ಲಿ ಐತಿಹಾಸಿಕ ಮೈಲಿಗಲ್ಲು 

    November 17, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.