
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಯು.ಟಿ. ಖಾದರ್ ರವರು ಹಾಗೂ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಶೆಟ್ಟಿಯವರು ಇಂದು ಮಂಗಳ ಕ್ರೀಡಾಂಗಣಕ್ಕೆ ಭೇಟಿ ನೀಡಿ, ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲೆಯ ಅಧಿಕಾರಿಗಳೊಂದಿಗೆ ಸ್ಥಳದಲ್ಲೇ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ದರ್ಶನ್ ಎಚ್ ವಿ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಶ್ರೀ. ನರ್ವಡೆ ವಿನಾಯಕ್ ಕಾರ್ಭಾರಿ , ದಕ್ಷಿಣ ಕನ್ನಡ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕರಾದ ಪ್ರದೀಪ್ ಡಿಸೋಜಾ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ (PWD Executive Engineer), ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದು, ಕ್ರೀಡಾಂಗಣದ ಅಭಿವೃದ್ಧಿ ಕಾಮಗಾರಿಗಳು, ಕ್ರೀಡಾಪಟುಗಳಿಗೆ ಅಗತ್ಯವಿರುವ ಮೂಲಸೌಕರ್ಯಗಳು ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಪೂರಕವಾದ ಸೌಲಭ್ಯಗಳ ಅಭಿವೃದ್ಧಿ ಕುರಿತು ಸಮಗ್ರ ಸಮಾಲೋಚನೆ ನಡೆಸಲಾಯಿತು.
ಮಂಗಳ ಕ್ರೀಡಾಂಗಣವನ್ನು ಇನ್ನಷ್ಟು ಸುಸಜ್ಜಿತಗೊಳಿಸಿ, ಕ್ರೀಡಾಪಟುಗಳಿಗೆ ಉತ್ತಮ ಗುಣಮಟ್ಟದ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಈ ಭೇಟಿ ಮಹತ್ವದ್ದಾಗಿದೆ.
Sathish Kapikad