ನವದೆಹಲಿ, ಜೂ. 10 : ಇಲ್ಲಿನ ದ್ವಾರಕಾ ಸೆಕ್ಟರ್ 13ರ ಶಾಬಾದ್ ಅಪಾರ್ಟ್‌ಮೆಂಟ್‌ನಲ್ಲಿ ಮಂಗಳವಾರ ಬೆಂಕಿ ಕಾಣಿಸಿಕೊಂಡಿದ್ದು, ಅಪಾಯದಿಂದ ಪಾರಾಗಲು ಬಾಲ್ಕನಿಯಿಂದ ಹಾರಿದ ಇಬ್ಬರು ಮಕ್ಕಳು ಹಾಗೂ ತಂದೆ ಸಾವನ್ನಪ್ಪಿದ್ದಾರೆ.10 ವರ್ಷ ವಯಸ್ಸಿನ ಇಬ್ಬರು ಮಕ್ಕಳು ಹಾಗೂ ತಂದೆ ಯಾದವ್ (35) ಮೃತಪಟ್ಟವರು.

ಅಪಾರ್ಟ್‌ಮೆಂಟ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಅಪಾಯದಿಂದ ಪಾರಾಗಲು ಯಾದವ್ ತನ್ನ ಇಬ್ಬರು ಮಕ್ಕಳೊಂದಿಗೆ ಅಪಾರ್ಟ್‌ಮೆಂಟ್ನ 9ನೇ ಮಹಡಿಯ ಬಾಲ್ಕನಿಯಿಂದ ಕೆಳಗೆ ಹಾರಿದ್ದಾರೆ. ತಕ್ಷಣ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.ಆದರೆ ಇಬ್ಬರು ಮಕ್ಕಳು ಆಸ್ಪತ್ರೆಗೆ ಸಾಗಿಸುವ ಮೊದಲೇ ಮೃತಪಟ್ಟಿದ್ದರು. ಯಾದವ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಯಾದವ್ ಅವರ ಪತ್ನಿ ಹಾಗೂ ಹಿರಿಯ ಮಗನನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅಪಾರ್ಟ್‌ಮೆಂಟ್‌ನಲ್ಲಿದ್ದ ಎಲ್ಲಾ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Share.
Leave A Reply

Exit mobile version