Close Menu
SK Media NewsSK Media News
    What's Hot

    ನಡೆದಾಡುವ, ಮಾತನಾಡುವ ದೇವರು ಅಮ್ಮ :ಅಮ್ಮ ಮಂಗಳೂರಿಗೆ ಆಗಮನ ಹಿನ್ನೆಲೆ ಚಪ್ಪರ ಮುಹೂರ್ತ ನೆರವೇರಿಸಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

    May 6, 2026

    ಕೀರ್ತನ್ ಭಂಡಾರಿ ನಿರ್ದೇಶನದ ಬಹು ನಿರೀಕ್ಷಿತ `ಗಜಾನನ ಕ್ರಿಕೆಟರ್ಸ್” ತುಳು ಚಿತ್ರ ಮೇ 22ರಂದು ತೆರೆಗೆ

    May 5, 2026

    ಪಂಚರಾಜ್ಯ ಚುನಾವಣೆಯಲ್ಲಿ ಹಿಂದೂ ವಿರೋಧಿಗಳಿಗೆ ತಕ್ಕ ಪಾಠ : ಸತೀಶ್ ಕುಂಪಲ

    May 4, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರಾವಳಿ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ನಂದಿನಿ ನದಿಯ ಮಧ್ಯದಲ್ಲಿರುವ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿಯ ಕ್ಷೇತ್ರದ ಬಗ್ಗೆ…
    ಕರಾವಳಿ

    ನಂದಿನಿ ನದಿಯ ಮಧ್ಯದಲ್ಲಿರುವ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿಯ ಕ್ಷೇತ್ರದ ಬಗ್ಗೆ…

    January 26, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ಪರಿಸರದ ಪವಿತ್ರವಾದ ನಂದಿನಿ ನದಿಯ ಮಧ್ಯದಲ್ಲಿ, ಐತಿಹಾಸಿಕ ದೃಶ್ಯಾವಳಿಗಳ ಮತ್ತು ಆಕರ್ಷಣೀಯ ಹಚ್ಚ ಹಸಿರಿನ ವನಸಿರಿಯ ಮಧ್ಯೆ ಇರುವ ಪವಿತ್ರ ದೇವಾಲಯವೇ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಾಲಯವಾಗಿದೆ. ಇದು ಮಂಗಳೂರಿನಿಂದ ಸುಮಾರು 26 ಕಿ.ಮೀ ದೂರದಲ್ಲಿದೆ ಮತ್ತು ಹಿಂದೂ ಧರ್ಮದ ಪವಿತ್ರ ದೇವಾಲಯಗಳಲ್ಲೊಂದಾಗಿದೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿಯ ದರ್ಶನ ಮಾಡಿ ಆಶೀರ್ವಾದ ಪಡೆಯಲು ಪ್ರತಿನಿತ್ಯ ಸಹಸ್ರಾರು ಭಕ್ತಾದಿಗಳು ಕಟೀಲು ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ.

    ಶ್ರೀ ಕ್ಷೇತ್ರ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ನವರಾತ್ರಿ ಉತ್ಸವವ ಹಾಗೂ ಲಕ್ಷದೀಪೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ನವರಾತ್ರಿ ಉತ್ಸವದ ಭಾಗವಾಗಿ ‘ಲಲಿತ ಪಂಚಮಿ’, ‘ಮಹಾನವಮಿ’,’ವಿಜಯದಶಮಿ’ ಹಾಗೂ ‘ಮಧ್ವ ಜಯಂತಿ’ಯನ್ನು ಆಚರಿಸಲಾಗುತ್ತದೆ. ಕಾರ್ತಿಕ ಮಾಸದ ಬಹುಲಾ ಪಂಚಮಿ ದಿನದಂದು ದೀಪಗಳ ಹಬ್ಬ ಲಕ್ಷದೀಪೋತ್ಸವವನ್ನು ಆಚರಿಸಲಾಗುತ್ತದೆ.

    ಶ್ರೀ ಕ್ಷೇತ್ರದಲ್ಲಿ ಏಪ್ರಿಲ್ ತಿಂಗಳಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವನ್ನು 8 ದಿನಗಳವರೆಗೆ ವಿಶಿಷ್ಟ ವೈಶಿಷ್ಟ್ಯಗಳೊಂದಿಗೆ ಅಚರಿಸಲಾಗುತ್ತದೆ. ಮೊದಲ ದಿನ ಕೋಡಿ ಧ್ವಜವನ್ನು ಏರಿಸಲಾಗುತ್ತದೆ. ಮೂರನೇ ದಿನ ದೇವರ ಮೂಡು ಸವಾರಿ (ಮೂಡಣದ ದಿಕ್ಕಿಗೆ) ನಡೆಯುತ್ತದೆ. ಐದನೇ ದಿನ ರಥಬೀದಿಯಲ್ಲಿ ಬೆಳ್ಳಿ ರಥೋತ್ಸವ ನಡೆಯುತ್ತದೆ. ಆರನೇ ದಿನ ಪಡು ಸವಾರಿ ( ಪಡುವಣದ ದಿಕ್ಕಿಗೆ) ನಡೆಯುತ್ತದೆ. ಏಳನೇ ದಿನ ಬ್ರಹ್ಮರಥೋತ್ಸವ ನಡೆಯುತ್ತದೆ. ಉತ್ಸವದ ಎಲ್ಲಾ ದಿನಗಳಲ್ಲಿ ಚಿನ್ನದ ರಥೋತ್ಸವ ನಡೆಯುತ್ತದೆ. ಕೊನೆಯ ದಿನ ದೇವರ ಕಟೀಲು ಊರ ಸವಾರಿ ನಡೆಯುತ್ತದೆ. ಮರಳಿ ರಥಬೀದಿಗೆ ಬರುವಾಗ ಮಧ್ಯರಾತ್ರಿ ಸುಮಾರು 2 ಘಂಟೆ ಆಗುತ್ತದೆ. ಅದೇ ಸಮಯಕ್ಕೆ ಶಿಬರೂರಿನ ಕೊಡಮಣಿತ್ತಾಯ ದೈವದ ಪ್ರವೇಶವೂ ಆಗಿರುತ್ತದೆ. ಮುಂದೆ ಅಲ್ಲಿ ಅವಭೃಥೋತ್ಸವ (ರಥೋತ್ಸವ) ನಡೆಯುತ್ತದೆ. ಬಳಿಕ ದೇವರು ಜಳಕಕ್ಕೆ ಹೋಗಿ ಅಲ್ಲಿಂದ ಮರಳಿ ಬರುವಾಗ ತೂತಾಟ (ಬೆಂಕಿಯ ಆಟ) ಶುರುವಾಗುತ್ತದೆ. ( ಬೆಂಕಿಯ ಆಟಕ್ಕೆ ಕೊಡೆತ್ತೂರು ಮತ್ತು ಅತ್ತೂರು ಗ್ರಾಮದ ಜನತೆಯ ನಡುವೆ ನಡೆದ ಜಗಳದ ಬೇರೆಯೇ ಇತಿಹಾಸ ಇದೆ ಎನ್ನಲಾಗಿದೆ)

    ಶ್ರೀ ಕ್ಷೇತ್ರದಲ್ಲಿ ಪ್ರತೀ ದಿನವೂ ಭಕ್ತರಿಗೆ ಎರಡು ಬಾರಿ ಅನ್ನ ಪ್ರಸಾದ ನೀಡಲಾಗುತ್ತದೆ. ಒಂದೇ ಸಮಯದಲ್ಲಿ ಸುಮಾರು ಒಂದು ಸಾವಿರ ಜನರಿಗೆ ಅವಕಾಶ ಕಲ್ಪಿಸಲು ವಿಸ್ತಾರವಾದ ಭೋಜನಶಾಲೆಯನ್ನು ನಿರ್ಮಿಸಲಾಗಿದೆ. ಇಲ್ಲಿ ವಾರ್ಷಿಕವಾಗಿ ಸುಮಾರು ಹತ್ತು ಲಕ್ಷ ಭಕ್ತರು ಅನ್ನಪ್ರಸಾದವನ್ನು ಪಡೆಯುತ್ತಾರೆ ಎಂದು ಅಂದಾಜಿಸಲಾಗಿದೆ. ಅನ್ನದಾನ ಮತ್ತು ಮಹಾ ಅನ್ನದಾನಾ ಎಂಬ ಎರಡು ಪ್ರತ್ಯೇಕ ಸೇವೆಗಳು ಇಲ್ಲಿ ಲಭ್ಯವಿದೆ. ಇದರ ಮೂಲಕ ಭಕ್ತರು ಅನ್ನದಾನ ಸೇವೆಯಲ್ಲಿ ಪೋಷಕರಾಗಿ ಭಾಗವಹಿಸಬಹುದು.

    ಶ್ರೀ ಕ್ಷೇತ್ರದ ವತಿಯಿಂದ ಐದು ಶಿಕ್ಷಣ ಸಂಸ್ಥೆಗಳನ್ನು ನಡೆಸಿ ಕೊಡು ಬರುತ್ತದೆ. ಹಿರಿಯ ಪ್ರಾಥಮಿಕ ಪ್ರೌಢಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಪ್ರಥಮ ದರ್ಜೆ ಕಾಲೇಜು ಮತ್ತು ಸಂಸ್ಕೃತದಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ. ಈ ದೇವಾಲಯವು ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಮಧ್ಯಾಹ್ನ ಊಟವನ್ನು ನೀಡುತ್ತದೆ, ಆದರೆ ಇದಕ್ಕೆ ಪ್ರತಿಯಾಗಿ ಏನನ್ನೂ ತೆಗೆದುಕೊಳ್ಳುವುದಿಲ್ಲ. ಜೊತೆಗೆ ಆಸಕ್ತರಿಗೆ ಯಕ್ಷಗಾನವನ್ನು ಕಲಿಯುವ ಅವಕಾಶವೂ ಇದೆ. ಹಬ್ಬದ ದಿನಗಳಲ್ಲಿ ಈ ವಿದ್ಯಾರ್ಥಿಗಳು ಯಕ್ಷಗಾನವನ್ನು ನಡೆಸುತ್ತಾರೆ. ಥಮ ದರ್ಜೆ ಕಾಲೇಜಿನಲ್ಲಿ ಸರ್ಕಾರದ ಅನುದಾನವನ್ನು ಪಡೆದುಕೊಳ್ಳದೆ, ಈ ಕಾಲೇಜು ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಪ್ರಯೋಜನವನ್ನು ವಿಸ್ತರಿಸಲು ಸಹಕರಿಸುತ್ತಿದೆ. ವಿದ್ಯಾರ್ಥಿಗಳು ಯುನಿವರ್ಸಿಟಿ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನುಗಳಿಸುತ್ತಿರುವುದು, ಇವರ ಈ ಯೋಜನೆಯ ಗುಣಮಟ್ಟಕ್ಕೆ ಹಿಡಿದ ಕನ್ನಡಿಯಾಗಿದೆ.

    ಕಟೀಲೇಶ್ವರಿ ಎಂದು ಜನಪ್ರಿಯವಾಗಿ ಕರೆಯಲ್ಪಡುವ ದೇವಾಲಯದ ಪ್ರಧಾನ ದೇವತೆಯಾದ ಶ್ರೀ ದೇವಿಯು ಸಂಗೀತ ಮತ್ತು ನೃತ್ಯದಂತಹ ಲಲಿತಕಲೆಗಳಲ್ಲಿ ಬಹಳ ಆಸಕ್ತಿ ಹೊಂದಿದವಳು. ಅದರಲ್ಲೂ ಯಕ್ಷಗನ ತಾಯಿಯ ಅಚ್ಚುಮೆಚ್ಚಿನದಾಗಿದೆ. ಈ ಹಿನ್ನೆಲೆಯಲ್ಲಿ ಆರಂಭಗೊಂಡ ಕಟೀಲು ಮೇಳ ಎಂದೇ ಜನಪ್ರಿಯವಾಗಿರುವ ಶ್ರೀ ಕಟೀಲು ಯಕ್ಷಗಾನ ಮೇಳ ಒಂದು ಪ್ರಸಿದ್ಧ ಯಕ್ಷಗಾನ ತಂಡವಾಗಿದೆ. ಈ ಯಕ್ಷಗಾನ ತಂಡವು ಒಂದು ಪ್ರಮುಖ ‘ಹರಕೆ ಸೇವಾ’ ತಂಡವಾಗಿದೆ. ಒಂದು ಸೇವೆಯಾಗಿ ಯಕ್ಷಗಾನದ ಪ್ರದರ್ಶನವನ್ನು, ಪ್ರತಿಜ್ಞೆ (ಹರಕೆ) ಮಾಡುವ ಭಕ್ತರ ಕೋರಿಕೆಯ ಮೇರೆಗೆ ಏರ್ಪಡಿಸಲಾಗುತ್ತದೆ.

    Share. Facebook Twitter Pinterest LinkedIn Email WhatsApp
    Previous Articleಶ್ರೀ ಮಂಜುನಾಥ ದೇವರ ಐತಿಹಾಸಿಕ ದೇವಸ್ಥಾನ ಶ್ರೀ ಕ್ಷೇತ್ರ ಕದ್ರಿಯ ಬಗ್ಗೆ ನಿಮಗೆಷ್ಟು ಗೊತ್ತು ?
    Next Article ಮಂಗಳೂರು ವಿಮಾನ ನಿಲ್ದಾಣದಲ್ಲಿ 77ನೇ ಗಣರಾಜ್ಯೋತ್ಸವ: ಬೆಲ್ಜಿಯಂನ ಮಾಲಿನೋಯಿಸ್ ರೇಂಜರ್, ಮ್ಯಾಕ್ಸ್ ಮತ್ತು ಲ್ಯಾಬ್ರಡಾರ್ ರಿಯೊ ವಿಶೇಶ ಪ್ರದರ್ಶನ

    Related Posts

    ಕರಾವಳಿ

    ನಡೆದಾಡುವ, ಮಾತನಾಡುವ ದೇವರು ಅಮ್ಮ :ಅಮ್ಮ ಮಂಗಳೂರಿಗೆ ಆಗಮನ ಹಿನ್ನೆಲೆ ಚಪ್ಪರ ಮುಹೂರ್ತ ನೆರವೇರಿಸಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

    May 6, 2026
    ಕರಾವಳಿ

    ಕೀರ್ತನ್ ಭಂಡಾರಿ ನಿರ್ದೇಶನದ ಬಹು ನಿರೀಕ್ಷಿತ `ಗಜಾನನ ಕ್ರಿಕೆಟರ್ಸ್” ತುಳು ಚಿತ್ರ ಮೇ 22ರಂದು ತೆರೆಗೆ

    May 5, 2026
    ಕರಾವಳಿ

    ಪಂಚರಾಜ್ಯ ಚುನಾವಣೆಯಲ್ಲಿ ಹಿಂದೂ ವಿರೋಧಿಗಳಿಗೆ ತಕ್ಕ ಪಾಠ : ಸತೀಶ್ ಕುಂಪಲ

    May 4, 2026
    Add A Comment
    Leave A Reply Cancel Reply

    Top Posts

    ನಾಲ್ಕನೇ ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿ ಅದ್ಯಪಾಡಿ ಶ್ರೀ ನೀಲಕಂಠ ಉಮಾಮಹೇಶ್ವರ ದೇವಸ್ಥಾನ : ಬ್ರಹ್ಮಕಲಶಾಭಿಷೇಕಕ್ಕೆ ಕ್ಷಣಗಣನೆ

    March 11, 2026

    ನಡೆದಾಡುವ, ಮಾತನಾಡುವ ದೇವರು ಅಮ್ಮ :ಅಮ್ಮ ಮಂಗಳೂರಿಗೆ ಆಗಮನ ಹಿನ್ನೆಲೆ ಚಪ್ಪರ ಮುಹೂರ್ತ ನೆರವೇರಿಸಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

    May 6, 2026

    “ಬಿರ್ದ್ ದ ಕಂಬುಲ” ತುಳು ಹಾಗೂ “ವೀರಕಂಬಳ” ಕನ್ನಡ ಸಿನಿಮಾ ಫೆ.27ರಂದು ರಾಜ್ಯಾದ್ಯಂತ ಬಿಡುಗಡೆ

    February 22, 2026
    About Us
    About Us

    Lorem Ipsum is simply dummy text of the printing and typesetting industry. Lorem Ipsum has been the industry's standard dummy text ever since the 1500s,

    Email : skmedianews@gmail.com
    Phone : +91 95914 89084

    Most Popular

    ನಾಲ್ಕನೇ ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿ ಅದ್ಯಪಾಡಿ ಶ್ರೀ ನೀಲಕಂಠ ಉಮಾಮಹೇಶ್ವರ ದೇವಸ್ಥಾನ : ಬ್ರಹ್ಮಕಲಶಾಭಿಷೇಕಕ್ಕೆ ಕ್ಷಣಗಣನೆ

    March 11, 2026

    ನಡೆದಾಡುವ, ಮಾತನಾಡುವ ದೇವರು ಅಮ್ಮ :ಅಮ್ಮ ಮಂಗಳೂರಿಗೆ ಆಗಮನ ಹಿನ್ನೆಲೆ ಚಪ್ಪರ ಮುಹೂರ್ತ ನೆರವೇರಿಸಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

    May 6, 2026

    “ಬಿರ್ದ್ ದ ಕಂಬುಲ” ತುಳು ಹಾಗೂ “ವೀರಕಂಬಳ” ಕನ್ನಡ ಸಿನಿಮಾ ಫೆ.27ರಂದು ರಾಜ್ಯಾದ್ಯಂತ ಬಿಡುಗಡೆ

    February 22, 2026
    Our Picks

    ನಡೆದಾಡುವ, ಮಾತನಾಡುವ ದೇವರು ಅಮ್ಮ :ಅಮ್ಮ ಮಂಗಳೂರಿಗೆ ಆಗಮನ ಹಿನ್ನೆಲೆ ಚಪ್ಪರ ಮುಹೂರ್ತ ನೆರವೇರಿಸಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

    May 6, 2026

    ಕೀರ್ತನ್ ಭಂಡಾರಿ ನಿರ್ದೇಶನದ ಬಹು ನಿರೀಕ್ಷಿತ `ಗಜಾನನ ಕ್ರಿಕೆಟರ್ಸ್” ತುಳು ಚಿತ್ರ ಮೇ 22ರಂದು ತೆರೆಗೆ

    May 5, 2026

    ಪಂಚರಾಜ್ಯ ಚುನಾವಣೆಯಲ್ಲಿ ಹಿಂದೂ ವಿರೋಧಿಗಳಿಗೆ ತಕ್ಕ ಪಾಠ : ಸತೀಶ್ ಕುಂಪಲ

    May 4, 2026
    Facebook X (Twitter) Instagram Pinterest
    • ಮುಖಪುಟ
    • ಕರಾವಳಿ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.