Close Menu
SK Media NewsSK Media News
    What's Hot

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಗ್ರಾಹಕರಿಗೆ ಶುಭ ಸುದ್ಧಿ : ಆರ್ಥಿಕ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದ ಎಸ್ ಸಿಡಿಸಿಸಿ ಬ್ಯಾಂಕ್ – ಡಿಜಿಟಲ್ ಬ್ಯಾಂಕಿಂಗ್ – ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯಕ್ಕೆ ನಾಳೆ ಚಾಲನೆ
    ಕರಾವಳಿ

    ಗ್ರಾಹಕರಿಗೆ ಶುಭ ಸುದ್ಧಿ : ಆರ್ಥಿಕ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದ ಎಸ್ ಸಿಡಿಸಿಸಿ ಬ್ಯಾಂಕ್ – ಡಿಜಿಟಲ್ ಬ್ಯಾಂಕಿಂಗ್ – ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯಕ್ಕೆ ನಾಳೆ ಚಾಲನೆ

    February 16, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು, ಫೆಬ್ರವರಿ. 16: ಬ್ಯಾಂಕಿಂಗ್ ಸೇವೆಯಲ್ಲಿ ದೇಶಕ್ಕೆ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಎಸ್‌ ಸಿಡಿಸಿಸಿ ಬ್ಯಾಂಕ್) ಅತ್ಯಾಧುನಿಕ ತಂತ್ರಜ್ಞಾನದ ಬ್ಯಾಂಕಿಂಗ್ ಸೇವೆಗಳನ್ನು ಗ್ರಾಹಕರಿಗೆ ನೀಡುತ್ತಿದೆ. ಬ್ಯಾಂಕ್ ಈಗಾಗಲೇ ಕೋರ್ ಬ್ಯಾಂಕಿಂಗ್ ಸೇವೆಯೊಂದಿಗೆ ಆರ್ ಟಿಜಿಎಸ್ / ನೆಫ್ಟ್, ಸಿಟಿಎಸ್, ಎಸ್‌ಎಂಎಸ್, ಎಟಿಎಂ, ಮೊಬೈಲ್ ಬ್ಯಾಂಕಿಂಗ್, ಪಿಒಎಸ್ (POS) ಸೌಲಭ್ಯ ಸೇರಿದಂತೆ ಹಲವಾರು ಡಿಜಿಟಲ್ ಸೇವೆಗಳನ್ನು ಯಶಸ್ವಿಯಾಗಿ ನೀಡುತ್ತಿದೆ ಈ ಸಾಲಿನಲ್ಲಿ ಯುಪಿಐ ಮತ್ತು ಐಎಂಪಿಎಸ್ ಸೇವೆಯು ಸೇರ್ಪಡೆಯಾಗಲಿದ್ದು ಇದರ ಉದ್ಘಾಟನಾ ಕಾರ್ಯಕ್ರಮವು ನಾಳೆ ಮಧ್ಯಾಹ್ನ 12 ಗಂಟೆಗೆ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಲಿದೆ ಎಂದು ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರ ಕುಮಾರ್ ತಿಳಿಸಿದರು ,

    ಎಸ್‌ಸಿಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ಸೋಮವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕಿಂಗ್ ಕ್ಷೇತ್ರ ಇತ್ತೀಚಿನ ವರ್ಷಗಳಲ್ಲಿ ಪ್ರಮುಖ ಪರಿವರ್ತನೆಗೆ ಒಳಗಾಗಿದೆ. ಡಿಜಿಟಲ್ ಸೇವೆಗಳು ಸಾಂಪ್ರದಾಯಿಕ ಮಾದರಿಯನ್ನು ಬದಲಾಯಿಸಿವೆ. ಇಂದು, ಹೆಚ್ಚಿನ ಗ್ರಾಹಕರು ಇಂಟರ್ನೆಟ್ ಬ್ಯಾಂಕಿಂಗ್, ಮೊಬೈಲ್ ಅಪ್ಲಿಕೇಶನ್‌ಗಳು ಮತ್ತು ತ್ವರಿತ ಪಾವತಿ ವ್ಯವಸ್ಥೆಗಳ ಮೂಲಕ ತಮ್ಮ ಖಾತೆಗಳಿಗೆ ಸುಗಮ ಪ್ರವೇಶವನ್ನು ನಿರೀಕ್ಷಿಸುತ್ತಾರೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ತಮ್ಮ ಗ್ರಾಹಕರಿಗೆ ಪ್ರಸ್ತುತ ಅವಶ್ಯಕತೆಗೆ ಅನುಗುಣವಾಗಿ ಡಿಜಿಟಲ್ ಬ್ಯಾಂಕಿಂಗ್ ಅನ್ನು ಕೂಡಾ ಅಳವಡಿಸಿಕೊಂಡಿದೆ ಎಂದರು .

    ಡಿಜಿಟಲ್ ಬ್ಯಾಂಕಿಂಗ್ ಸೇವೆಗಳನ್ನು ಮತ್ತಷ್ಟು ವಿಸ್ತರಿಸುವ ಉದ್ದೇಶದಿಂದ ನಮ್ಮ ಬ್ಯಾಂಕ್ 16 ಸೆಪ್ಟೆಂಬರ್ 2025 ರಿಂದ ಐಎಂಪಿಎಸ್ (IMPS Immediate Payment Service) ಸೇವೆಯನ್ನು ಆರಂಭಿಸಿದೆ. ಈ ಸೇವೆಯ ಮೂಲಕ ನಮ್ಮ ಬ್ಯಾಂಕಿನ ಮೊಬೈಲ್ ಅಪ್ಲಿಕೇಶನ್ ಬಳಸಿ ಗ್ರಾಹಕರು ಕ್ಷಣಾರ್ಧದಲ್ಲಿ ಹಣ ವರ್ಗಾವಣೆ ಮಾಡುವ ಸೌಲಭ್ಯವನ್ನು ಪಡೆಯುತ್ತಿದ್ದಾರೆ. ಐಎಂಪಿಎಸ್ ಎಂಬುದು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ಅಭಿವೃದ್ಧಿ ಪಡಿಸಿದ ತ್ವರಿತ ಹಣ ವರ್ಗಾವಣೆ ವ್ಯವಸ್ಥೆಯಾಗಿದ್ದು, ಇದು 24×7, ವಾರಾಂತ್ಯ ಮತ್ತು ಸಾರ್ವಜನಿಕ ರಜೆ ದಿನಗಳಲ್ಲಿಯೂ ಕಾರ್ಯನಿರ್ವಹಿಸುತ್ತದೆ P2A (person to Account) ಮೂಲಕ ಖಾತೆ ಸಂಖ್ಯೆ ಮತ್ತು IFSC ಬಳಸಿ ಯಾವುದೇ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಬಹುದು ಎಂದರು .

    ಈ ಸೇವೆಯ ಮೂಲಕ ಗ್ರಾಹಕರು ಬ್ಯಾಂಕ್‌ ಗೆ ಭೇಟಿ ನೀಡುವ ಅವಶ್ಯಕತೆ ಇಲ್ಲದೆ. ಮನೆಯಲ್ಲಿಯೇ ಅಥವಾ ಎಲ್ಲಿಂದ ಬೇಕಾದರೂ 24×7 ಸಮಯದಲ್ಲಿ ಹಣ ವರ್ಗಾವಣೆ ಮಾಡಬಹುದು. ಇದು ವೇಗವಾದ, ಸುರಕ್ಷಿತ ಹಾಗೂ ಸುಲಭವಾದ ಡಿಜಿಟಲ್ ಪಾವತಿ ವಿಧಾನವಾಗಿದೆ ಎಂದರು.

    ಆನ್‌ಲೈನ್ ಖರೀದಿ ಹಾಗೂ ಬಿಲ್ ಪಾವತಿ ಮಾಡಬಹುದು ದೇಶದ ಯಾವುದೇ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಬಹುದು ಈ ಎಲ್ಲಾ, ವ್ಯವಹಾರಗಳು ಯುಪಿಐ ಪಿನ್ ಮತ್ತು ಎರಡು ಹಂತದ ಭದ್ರತಾ ವ್ಯವಸ್ಥೆಯಿಂದ ಸುರಕ್ಷಿತವಾಗಿರುತ್ತವೆ.

    ‘ಯುಪಿಐ ಸೇವೆಯಿಂದ ಸಣ್ಣ ವ್ಯಾಪಾರಿಗಳು, ರೈತರು, ಅಂಗಡಿ ಮಾಲಕರು, ವಿದ್ಯಾರ್ಥಿಗಳು, ಉದ್ಯೋಗಿಗಳು ಎಲ್ಲರೂ ಪ್ರಯೋಜನ ಪಡೆಯಬಹುದು.ಒಬ್ಬ ಚಿಲ್ಲರೆ ವ್ಯಾಪಾರಿಯೂ ಈಗ QR ಕೋಡ್ ಮೂಲಕ ಡಿಜಿಟಲ್ ಪಾವತಿ ಸ್ವೀಕರಿಸಬಹುದು. ಇದು ನಮ್ಮ ಬ್ಯಾಂಕಿನ ಆರ್ಥಿಕತೆಯನ್ನು ಇನ್ನಷ್ಟು ಬಲಪಡಿಸುತ್ತದೆ. ಇದು ದಿನನಿತ್ಯದ ಸಣ್ಣ ಮೊತ್ತದ ಪಾವತಿಗಳಿಗೆ, ಇ-ಕಾಮರ್ಸ್ ವ್ಯವಹಾರಗಳಿಗೆ ಹಾಗೂ ವ್ಯಕ್ತಿಯಿಂದ ವ್ಯಕ್ತಿಗೆ ಹಣ ವರ್ಗಾವಣೆ ಮಾಡಲು ಅತ್ಯಂತ ಅನುಕೂಲಕರವಾಗಿದೆ ಎಂದರು.

    ಈ ಸಂದರ್ಭದಲ್ಲಿ ಬ್ಯಾಂಕಿನ ಸಿಇಓ ( ಪ್ರಭಾರ) ಗೋಪಿನಾಥ್ ಭಟ್, ಬ್ಯಾಂಕಿನ ಆಡಳಿತ ಮಂಡಳಿಯ ಸದಸ್ಯರಾದ ಶಶಿಕುಮಾರ್ ಬಾಳ್ಳೊಟ್ಟು, ಭಾಸ್ಕರ್ ಕೋಟ್ಯಾನ್, ಜಯರಾಜ್ ರೈ, ಜಯರಾಮ್ ರೈ ಬಿ., ಸದಾಶಿವ ಉಳ್ಳಾಲ್ ಹಾಗೂ ಮೋನಪ್ಪ ಶೆಟ್ಟಿ ಎಕ್ಕಾರು ಮುಂತಾದವರು ಉಪಸ್ಥಿತರಿದ್ದರು.

    __Sathish Kapikad 

    Share. Facebook Twitter Pinterest LinkedIn Email WhatsApp
    Previous Articleಮಂಗಳೂರಿನಲ್ಲಿ ‘ವೈಲ್ಡ್ ಟೈಗರ್ ಸಫಾರಿ’ ಚಿತ್ರದ ಮೊದಲ ಹಾಡು ಬಿಡುಗಡೆ : ಖ್ಯಾತ ನಟ ಜಾವೇದ್ ಜಾಫ್ರಿ ಹಾಗೂ ಚಿತ್ರ ತಂಡ ಭಾಗಿ
    Next Article ಎಸ್‌ಸಿಡಿಸಿಸಿ ಬ್ಯಾಂಕ್ ನಿಂದ ಆರ್ಥಿಕ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ : ಗ್ರಾಹಕರ ಒಳಿತಿಗಾಗಿ ಡಿಜಿಟಲ್ ಬ್ಯಾಂಕಿಂಗ್ ಸೌಲಭ್ಯಗಳ ಉದ್ಘಾಟನೆ

    Related Posts

    ಕರಾವಳಿ

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026
    ಕರಾವಳಿ

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026
    ಕರಾವಳಿ

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Add A Comment
    Leave A Reply Cancel Reply

    Top Posts

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.