Close Menu
SK Media NewsSK Media News
    What's Hot

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಎಸ್‌ಸಿಡಿಸಿಸಿ ಬ್ಯಾಂಕ್ ನಿಂದ ಆರ್ಥಿಕ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ : ಗ್ರಾಹಕರ ಒಳಿತಿಗಾಗಿ ಡಿಜಿಟಲ್ ಬ್ಯಾಂಕಿಂಗ್ ಸೌಲಭ್ಯಗಳ ಉದ್ಘಾಟನೆ
    ಕರಾವಳಿ

    ಎಸ್‌ಸಿಡಿಸಿಸಿ ಬ್ಯಾಂಕ್ ನಿಂದ ಆರ್ಥಿಕ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ : ಗ್ರಾಹಕರ ಒಳಿತಿಗಾಗಿ ಡಿಜಿಟಲ್ ಬ್ಯಾಂಕಿಂಗ್ ಸೌಲಭ್ಯಗಳ ಉದ್ಘಾಟನೆ

    February 17, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು, ಫೆಬ್ರವರಿ, 17 : ರಾಜ್ಯದ ಪ್ರತಿಷ್ಠಿತ ಸಹಕಾರಿ ಬ್ಯಾಂಕ್ ಗಳಲ್ಲಿ ಒಂದಾದ ಎಸ್ ಡಿಸಿಸಿ ಬ್ಯಾಂಕ್  ಗ್ರಾಹಕರಿಗೆ ಡಿಜಿಟಲ್ ಬ್ಯಾಂಕಿಂಗ್ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯವನ್ನು ಆರಂಭಿಸಿದ್ದು,  ಇದರ ಉದ್ಘಾಟನಾ ಸಮಾರಂಭ ಎಸ್ ಡಿಸಿಸಿ ಸಭಾಂಗಣದಲ್ಲಿ ಮಂಗಳವಾರ ದೀಪ ಬೆಳಗಿಸುವ ಮೂಲಕ ವಿದ್ಯುಕ್ತವಾಗಿ ಜರಗಿತು.

    ಈ ಸಂದರ್ಭ ಬ್ಯಾಂಕ್ ನ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಮಾತನಾಡಿ, “ನಮ್ಮ ಬ್ಯಾಂಕ್ ಬೇರೆ ಬ್ಯಾಂಕ್ ಗಳಿಗಿಂತ ಹಿಂದೆ ಉಳಿಯಬಾರದು ಎಂಬ ಉದ್ದೇಶದಿಂದ ಈ ಆಧುನಿಕ ಬ್ಯಾಂಕಿಂಗ್ ಸೌಲಭ್ಯಗಳನ್ನು ಅಳವಡಿಸಿಕೊಳ್ಳಲಾಗಿದೆ. ನಮ್ಮ ಶಾಖೆಯಲ್ಲಿ ಬಹುತೇಕ ಎಲ್ಲ ಸೇವೆಗಳನ್ನು 15-20 ವರ್ಷಗಳ ಹಿಂದೆಯೇ ಅಳವಡಿಸಿಕೊಂಡುಗಳು ಗ್ರಾಹಕ ಸ್ನೇಹಿಯಾಗಿ ಮುನ್ನಡೆಯುತ್ತಿದೆ.

    ಬ್ಯಾಂಕಿಂಗ್ ಸೇವೆಯಲ್ಲಿ ದೇಶಕ್ಕೆ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಎಸ್‌ ಸಿಡಿಸಿಸಿ ಬ್ಯಾಂಕ್) ಅತ್ಯಾಧುನಿಕ ತಂತ್ರಜ್ಞಾನದ ಬ್ಯಾಂಕಿಂಗ್ ಸೇವೆಗಳನ್ನು ಗ್ರಾಹಕರಿಗೆ ನೀಡುವ ಮೂಲಕ ಹೆಸರುವಾಸಿಯಾಗಿದೆ. ಇದಕ್ಕೆ ಸಹಕಾರ ನೀಡಿದ ಎಲ್ಲರಿಗೂ ಅಭಿನಂದನೆಗಳು“ ಎಂದರು.

    ಆಧುನಿಕ ಸೌಲಭ್ಯಗಳ ಕುರಿತು ಮಾಹಿತಿ ನೀಡಿದ ನಂದಕುಮಾರ್ ಅವರು, ”ಐಎಂಪಿಎಸ್ ಅಂದ್ರೆ ಅದರ ಮೂಲಕ ಎಲ್ಲಕ್ಕಿಂತ ಶೀಘ್ರವಾಗಿ ತಕ್ಷಣವೇ ಹಣವನ್ನು ವರ್ಗಾವಣೆ ಮಾಡಲು ಸಾಧ್ಯವಿದೆ. ಈ ಸೇವೆಯ ಮೂಲಕ ನಮ್ಮ ಬ್ಯಾಂಕಿನ ಮೊಬೈಲ್ ಅಪ್ಲಿಕೇಶನ್ ಬಳಸಿ ಗ್ರಾಹಕರು ಕ್ಷಣಾರ್ಧದಲ್ಲಿ ಹಣ ವರ್ಗಾವಣೆ ಮಾಡುವ ಸೌಲಭ್ಯವನ್ನು ಪಡೆಯುತ್ತಿದ್ದಾರೆ.

    ಐಎಂಪಿಎಸ್ ಎಂಬುದು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ಅಭಿವೃದ್ಧಿ ಪಡಿಸಿದ ತ್ವರಿತ ಹಣ ವರ್ಗಾವಣೆ ವ್ಯವಸ್ಥೆಯಾಗಿದ್ದು, ಇದು 24×7, ವಾರಾಂತ್ಯ ಮತ್ತು ಸಾರ್ವಜನಿಕ ರಜೆ ದಿನಗಳಲ್ಲಿಯೂ ಕಾರ್ಯನಿರ್ವಹಿಸುತ್ತದೆ. P2A (person to Account) ಮೂಲಕ ಖಾತೆ ಸಂಖ್ಯೆ ಮತ್ತು IFSC ಬಳಸಿ ಯಾವುದೇ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಬಹುದು.

    ಈಗ ಎಲ್ಲಾ ಕಡೆ ಡಿಜಿಟಲ್ ವ್ಯವಹಾರ ಆಗಿರುವ ಕಾರಣ ಯುಪಿಐ ಮೂಲಕ ಹಣಕಾಸಿನ ನಿರ್ವಹಣೆ ಸುಲಭ. ಕಳೆದ ಐದು ವರ್ಷಗಳ ಹಿಂದೆ ಬ್ಯಾಂಕ್ ಅಧ್ಯಕ್ಷರು ತಮ್ಮ ಗ್ರಾಹಕರಿಗೆ ಈ ಸೇವೆಯನ್ನು ಕಲ್ಪಿಸುವ ಯೋಚನೆ ಮಾಡಿದ್ದರು. ಅದು ಇಂದು ಸಾಕಾರವಾಗಿದೆ“ ಎಂದರು.

    ವೇದಿಕೆಯಲ್ಲಿ ಬ್ಯಾಂಕ್ ಉಪಾಧ್ಯಕ್ಷರಾದ ಬ್ಯಾಂಕ್ ನಿರ್ದೇಶಕರಾದ ವಿನಯ್ ಕುಮಾರ್ ಸೂರಿಂಜೆ, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ, ಭಾಸ್ಕರ್ ಕೋಟ್ಯಾನ್, ರಮೇಶ್, ಬ್ಯಾಂಕ್ ಸಿಇಒ ಗೋಪಾಲಕೃಷ್ಣ ಭಟ್ ಹಾಗೂ ಬ್ಯಾಂಕ್ ನಿರ್ದೇಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

    ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ರೈ ಬೊಳ್ಯೊಟ್ಟು ಪ್ರಾಸ್ತಾವಿಕ ಮಾತನ್ನಾಡಿ ಅತಿಥಿಗಳನ್ನು ಸ್ವಾಗತಿಸಿದರು.

    ಚಿತ್ರಲೇಖ ದೇವರನ್ನು ಸ್ತುತಿಸಿದರು. ರಾಜೀವ ಕಕ್ಕೆಪದವು ಕಾರ್ಯಕ್ರಮ ನಿರೂಪಿಸಿದರು.

    __ Sathish Kapikad 

    Share. Facebook Twitter Pinterest LinkedIn Email WhatsApp
    Previous Articleಗ್ರಾಹಕರಿಗೆ ಶುಭ ಸುದ್ಧಿ : ಆರ್ಥಿಕ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದ ಎಸ್ ಸಿಡಿಸಿಸಿ ಬ್ಯಾಂಕ್ – ಡಿಜಿಟಲ್ ಬ್ಯಾಂಕಿಂಗ್ – ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯಕ್ಕೆ ನಾಳೆ ಚಾಲನೆ
    Next Article ಸಹಕಾರ ರತ್ನ ಡಾ|ಎಂ.ಎನ್.ಆರ್ ಅವರ 77ನೇ ಹುಟ್ಟುಹಬ್ಬ ಸಂಭ್ರಮ: ಎಲ್ಲಾ ವರ್ಗದ ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಣೆ 

    Related Posts

    ಕರಾವಳಿ

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026
    ಕರಾವಳಿ

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026
    ಕರಾವಳಿ

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Add A Comment
    Leave A Reply Cancel Reply

    Top Posts

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.