Close Menu
SK Media NewsSK Media News
    What's Hot

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಸಹಕಾರ ರತ್ನ ಡಾ|ಎಂ.ಎನ್.ಆರ್ ಅವರ 77ನೇ ಹುಟ್ಟುಹಬ್ಬ ಸಂಭ್ರಮ: ಎಲ್ಲಾ ವರ್ಗದ ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಣೆ 
    ಕರಾವಳಿ

    ಸಹಕಾರ ರತ್ನ ಡಾ|ಎಂ.ಎನ್.ಆರ್ ಅವರ 77ನೇ ಹುಟ್ಟುಹಬ್ಬ ಸಂಭ್ರಮ: ಎಲ್ಲಾ ವರ್ಗದ ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಣೆ 

    February 20, 2026Updated:February 20, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು, ಫೆಬ್ರವರಿ.20:: ಸಹಕಾರಿ ಕ್ಷೇತ್ರದ ಬಲವರ್ಧನೆಗೆ ತನ್ನದೇ ಆದ ಪ್ರಾಮಾಣಿಕ ಸೇವೆಯನ್ನು ಸಲ್ಲಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ ಸಿಡಿಸಿಸಿ ಬ್ಯಾಂಕ್) ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದೆ. ಬ್ಯಾಂಕಿನ ಬೆಳವಣಿಗೆಯಲ್ಲಿ ಪ್ರಾಮಾಣಿಕ ರೀತಿಯ ಸಾರ್ಥಕತೆಯನ್ನು ಕಂಡ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಎಲ್ಲರ ಪ್ರೀತಿ ವಿಶ್ವಾಸವನ್ನು ಗಳಿಸಿದವರು.

    ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮಾದರಿ ಸಹಕಾರಿ ನಾಯಕರಾಗಿ ರಾಜ್ಯ, ರಾಷ್ಟ್ರ ಮಟ್ಟದಲ್ಲೂ ಗುರುತಿಸಿಕೊಂಡಿರುವ ‘ಸಹಕಾರ ರತ್ನ’ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮಾಚರಣೆಯನ್ನು ನಡೆಸಲು ಅವಿಭಜಿತ ಜಿಲ್ಲೆಯ ಸಮಸ್ತ ಸಹಕಾರಿಗಳೆಲ್ಲರೂ ತೀರ್ಮಾನಿಸಿದ್ದೇವೆ ಎಂದು ‘ಸಹಕಾರ ರತ್ನ’ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಅಭಿನಂದನಾ ಸಮಿತಿಯ ಅಧ್ಯಕ್ಷರಾದ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ತಿಳಿಸಿದರು.

     ನಗರದ ಎಸ್ ಸಿಡಿಸಿಸಿ ಬ್ಯಾಂಕ್ ನ ಪ್ರದಾನ ಕಛೇರಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಇದೆ ಬರುವ ಫೆಬ್ರವರಿ-24 ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ ಹುಟ್ಟುಹಬ್ಬದ ದಿನವಾಗಿದ್ದು, ಆ ದಿನ ಬೆಳಿಗ್ಗೆ 10.30 ಕ್ಕೆ ಎಸ್‌ ಸಿಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮದ ಜೊತೆಗೆ ಅಭಿವಂದನಾ ಕಾರ್ಯಕ್ರಮ ಹಾಗೂ ಅರ್ಹ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಸಮಾರಂಭ ನಡೆಯಲಿದೆ ಎಂದರು.

    ಸಹಕಾರ ಕ್ಷೇತ್ರವನ್ನು ಸದೃಢಗೊಳಿಸುವ ಚಿಂತನೆಯೊಂದಿಗೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಕ್ರಾಂತಿಯನ್ನು ಸೃಷ್ಟಿಸಿರುವ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಸಹಕಾರಿಗಳೆಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆ. ಸಹಕಾರ ಕ್ಷೇತ್ರದ ಬೆಳವಣಿಗೆಗೆ ವಿಶೇಷ ಕಾರ್ಯಯೋಜನೆಯನ್ನು ಆಯೋಜಿಸಿ, ನಮಗೆಲ್ಲರಿಗೂ ಮಾರ್ಗದರ್ಶಕರಾದ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಅಂದು 77 ಮಂದಿ ಅರ್ಹ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

    ಸಹಕಾರ ಕ್ಷೇತ್ರವು ಸರ್ವಧರ್ಮೀಯರ ಕ್ಷೇತ್ರವಾಗಿರುವುದರಿಂದ ಸಮಾಜದ ಎಲ್ಲಾ ವರ್ಗದ ಫಲಾನುಭವಿಗಳನ್ನು ಗುರುತಿಸಿ, ಸವಲತ್ತುಗಳನ್ನು ಈ ಕಾರ್ಯಕ್ರಮದಲ್ಲಿ ವಿತರಿಸಲಾಗುವುದು‌ ಎಂದರು.

    ಡಾ| ಎಂ.ಎನ್.ರಾಜೇಂದ್ರ ಕುಮಾರ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಕಾರ್ಯಕ್ರಮವು ಕರ್ನಾಟಕ ವಿಧಾನಸಭೆಯ ಮಾನ್ಯ ಸಭಾಧ್ಯಕ್ಷರಾದ ಶ್ರೀ ಯು. ಟಿ. ಖಾದರ್ ಫರೀದ್ ಅವರಿಂದ ಉದ್ಘಾಟನೆಗೊಳ್ಳಲಿದೆ.

    ಸಮಸ್ತ ಸಹಕಾರಿಗಳ ಪರವಾಗಿ ಈ ಕಾರ್ಯಕ್ರಮದಲ್ಲಿ ಡಾ| ಎಂ.ಎನ್. ರಾಜೇಂದ್ರ ಕುಮಾ‌ರ್ ಅವರು ಅಭಿವಂದನೆಯನ್ನು ಸ್ವೀಕರಿಸಲಿದ್ದು, ಕರ್ನಾಟಕ ಸರ್ಕಾರದ ಮಾನ್ಯ ಮಾಜಿ ಮುಖ್ಯಮಂತ್ರಿಗಳಾದ ಡಾ| ಎಂ. ವೀರಪ್ಪ ಮೊಯಿಲಿ ಅವರು ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಅಭಿವಂದಿಸಿ. ಅಭಿವಂದನಾ ಭಾಷಣ ಮಾಡಲಿದ್ದು, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಡಿ. ವೇದವ್ಯಾಸ ಕಾಮತ್ ಇವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

    ಪತ್ರಿಕಾಗೋಷ್ಠಿಯಲ್ಲಿ ಅಭಿನಂದನಾ ಸಮಿತಿಯ ಕಾರ್ಯಾಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಕೋಟ್ಯಾನ್,  ಬ್ಯಾಂಕಿನ ಉಪಾಧ್ಯಕ್ಷರಾದ ವಿನಯ್ ಕುಮಾರ್ ಸೂರಿಂಜೆ, ಮೂಡಾ ಅಧ್ಯಕ್ಷ ಸದಾಶಿವ ಉಳ್ಳಾಲ್,  ಬ್ಯಾಂಕಿನ ಆಡಳಿತ ಮಂಡಳಿಯ ಸದಸ್ಯರಾದ ಎಸ್ ಬಿ ಜಯರಾಮ ರೈ, ಎಕ್ಕಾರ್ ಮೋನಪ್ಪ ಶೆಟ್ಟಿ, ವಾದಿರಾಜ್, ,ಭಾಸ್ಕರ್ ಕೋಟ್ಯಾನ್ ಹಾಗೂ ಬ್ಯಾಂಕಿನ ಸಿಇಓ ( ಪ್ರಭಾರ)  ಗೋಪಾಲಕೃಷ್ಣ ಭಟ್ ಮುಂತಾದವರು ಉಪಸ್ಥಿತರಿದ್ದರು.

    __Sathish Kapikad

    Share. Facebook Twitter Pinterest LinkedIn Email WhatsApp
    Previous Articleಎಸ್‌ಸಿಡಿಸಿಸಿ ಬ್ಯಾಂಕ್ ನಿಂದ ಆರ್ಥಿಕ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ : ಗ್ರಾಹಕರ ಒಳಿತಿಗಾಗಿ ಡಿಜಿಟಲ್ ಬ್ಯಾಂಕಿಂಗ್ ಸೌಲಭ್ಯಗಳ ಉದ್ಘಾಟನೆ
    Next Article ಸಾಮಾಜಿಕ ಸ್ವಾಸ್ಥ್ಯ ಕಾಪಾಡುವಲ್ಲಿ ಪತ್ರಕರ್ತರ ಪಾತ್ರ ದೊಡ್ಡದು : ಮಾಜಿ ಸಚಿವ ಬಿ.ಶ್ರೀರಾಮುಲು

    Related Posts

    ಕರಾವಳಿ

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026
    ಕರಾವಳಿ

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026
    ಕರಾವಳಿ

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Add A Comment
    Leave A Reply Cancel Reply

    Top Posts

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.