Close Menu
SK Media NewsSK Media News
    What's Hot

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ವಿಧಿವಶ

    July 18, 2026

    ಹೈ ಕೋರ್ಟ್ ಸರಕಾರಿ ವಕೀಲರಾಗಿ “ಚಿದಾನಂದ ಬಂಟ್ವಾಳ್ ” ನೇಮಕ

    July 18, 2026

    ದ.ಕ. ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ 

    July 17, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಸಾಮಾಜಿಕ ಸ್ವಾಸ್ಥ್ಯ ಕಾಪಾಡುವಲ್ಲಿ ಪತ್ರಕರ್ತರ ಪಾತ್ರ ದೊಡ್ಡದು : ಮಾಜಿ ಸಚಿವ ಬಿ.ಶ್ರೀರಾಮುಲು
    ಕರಾವಳಿ

    ಸಾಮಾಜಿಕ ಸ್ವಾಸ್ಥ್ಯ ಕಾಪಾಡುವಲ್ಲಿ ಪತ್ರಕರ್ತರ ಪಾತ್ರ ದೊಡ್ಡದು : ಮಾಜಿ ಸಚಿವ ಬಿ.ಶ್ರೀರಾಮುಲು

    February 20, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಬಳ್ಳಾರಿ:ಫೆ,20; ಸಾಮಾಜಿಕ ಸ್ವಾಸ್ಥ್ಯ ಕಾಪಾಡುವಲ್ಲಿ ಪತ್ರಕರ್ತರ ಪಾತ್ರ ದೊಡ್ಡದು ಸಮಾಜದ ಸಮಸ್ಯೆಗಳನ್ನು ಬಿಂಬಿಸುವಲ್ಲಿ ಅವರ ಸತತ ಪರಿಶ್ರಮ ಶ್ಲಾಘನೀಯ ಎಂದು ಬಿಜೆಪಿ ಹಿರಿಯ ಧುರೀಣ ಮಾಜಿ ಸಚಿವ ಬಿ.ಶ್ರೀರಾಮುಲು ಅಭಿಪ್ರಾಯಪಟ್ಟರು.

    ನಗರದ ಖಾಸಗಿ ಹೋಟೆಲ್ ಯೊಂದರಲ್ಲಿ ಕರ್ನಾಟಕ ಪತ್ರಕರ್ತರ ಸಂಘ ಬಳ್ಳಾರಿ ಜಿಲ್ಲಾ ಘಟಕದ ಸಹಯೋಗದೊಂದಿದೆ ಎರಡು ದಿನಗಳ ಕಾಲ ನಡೆಯುವ ಪತ್ರಕರ್ತರ ರಾಷ್ಟ್ರೀಯ ಮಂಡಳಿ ಸಭೆಯ ಎರಡನೇ ದಿನದ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ಗಾಂಧೀಜಿ ಹೇಳುವಂತೆ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ನಾವು ಮಾಡುವ ಕೆಲಸದ ಫಲ ಸಿಗುವಂತಿದ್ದರೆ ಆ ಕೆಲಸವನ್ನು ನಿರ್ಭಯದಿಂದ ಮಾಡಿ ಎಂಬ ಮಾತನ್ನು ಪತ್ರಕರ್ತರು ನೆನಪಿಡಬೇಕು. ಇವತ್ತು ಸಮಾಜ ಅತ್ಯಂತ ಸೂಕ್ಷ್ಮವಾಗಿದೆ. ಇಲ್ಲಿನ ಆಗುಹೋಗುಗಳನ್ನು ಎಲ್ಲರೂ ಗಮನಿಸುತ್ತಿರುತ್ತಾರೆ. ಹಾಗಾಗಿ ಪತ್ರಕರ್ತರ ಜವಾಬ್ದಾರಿ ಇವತ್ತು ಹೆಚ್ಚಿದೆ ಎಂದರು.

    ಇಂಗ್ಲೀಷ್‌ ಪತ್ರಿಕೆಗಳ ಓದುಗರು ಕಡಿಮೆ. ಆದರೂ ಇಂಗ್ಲೀಷ್‌ ಬಲ್ಲವರು ಇಂಗ್ಲೀಷ್‌ ಬಾರದ ಅತ್ಯಂತ ದೊಡ್ಡ ಸಮೂಹವನ್ನು ಆಳುತ್ತಾರೆ ಮತ್ತು ನೀತಿ ನಿರೂಪಣೆಗಳನ್ನು ರೂಪಿಸುವಂತಾಗಿದೆ. ಹಾಗಾಗಿ ಕೆಲವೊಮ್ಮೆ ಸರ್ವಾಧಿಕಾರಿ ಧೋರಣೆಯ ಅಪಾಯವೂ ಇದೆ. ಹಾಗಾಗಿ ಕನ್ನಡ ಪತ್ರಿಕೆಗಳನ್ನು ಓದುವವರ ಸಂಖ್ಯೆ ಹೆಚ್ಚಬೇಕಿದೆ. ಅಲ್ಲದೇ ಬಹುದೊಡ್ಡ ಜನ ಸಮುದಾಯದ ಬೇಕು ಬೇಡಗಳನ್ನು ನಿರ್ಧರಿಸಲು ಕನ್ನಡ ಬಲ್ಲ ಅಧಿಕಾರಿ ವರ್ಗವೂ ಮುಖ್ಯವಾಗುತ್ತದೆ. ಪತ್ರಿಕೆಗಳು ಧನಾತ್ಮಕ ಅಂಶಗಳನ್ನು ವರದಿ ಮಾಡುವಂತೆ, ಸಮಾಜವನ್ನು ತಿದ್ದುವ ಕೆಲಸವನ್ನು ಸಹ ಮಾಡಬೇಕು. ಜನಪ್ರತಿನಿಧಿಗಳಿಗೆ ಸಮಸ್ಯೆಗಳನ್ನು ತಲುಪಿಸಲು ಅಧಿಕಾರಿಗಳ ಧ್ವನಿಗಿಂತ ಪತ್ರಕರ್ತರ ಧ್ವನಿ ಗಟ್ಟಿಯಾದುದು ಎಂದು ಶ್ರೀರಾಮುಲು ಹೇಳಿದರು.

    ಈ ಸಂದರ್ಭದಲ್ಲಿ ರಾಷ್ಟ್ರೀಯ ಪತ್ರಕರ್ತರ ಸಂಘದ ಅಧ್ಯಕ್ಷರಾದ ಕೆ.ಬಿ.ಪಂಡಿತ್, ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಮುರುಗೇಶ್ ಶಿವುಪೂಜಿ, ಬಿಹಾರದ ರಾಜ್ಯಸಭಾ ಸದಸ್ಯ ಅನಿಲ್ ಪ್ರಸಾದ್ ಹೆಗಡೆ, ಸಂಡೂರು ಶಾಸಕಿ ಅನ್ನಪೂರ್ಣ ತುಕಾರಾಂ, ಪಂಜಾಬಿನ ರಾಜ್ಯಾಧ್ಯಕ್ಷರಾದ ಜಸ್ಬೀರ್ ಸಿಂಗ್ ಪಟ್ಟಿ, ಬಿಹಾರ್ ರಾಜ್ಯದ ಅಧ್ಯಕ್ಷರಾದ ನವೀನ್ ಕುಮಾರ್, ಬಳ್ಳಾರಿ ಜಿಲ್ಲಾಧ್ಯಕ್ಷ ಯಾಳ್ಪಿ ವಲಿಭಾಷ ಸೇರಿದಂತೆ ದೇಶದ ಹದಿನಂಟು ರಾಜ್ಯಗಳ ಪತ್ರಕರ್ತರ ಪ್ರತಿನಿಧಿಗಳು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳ ಕರ್ನಾಟಕ ಪತ್ರಕರ್ತರ ಸಂಘದ ಸದಸ್ಯರು ಪದಾಧಿಕಾರಿಗಳು ಉಪಸ್ಥಿತರಿದ್ದರು.

    __ Sathish Kapikad 

    Share. Facebook Twitter Pinterest LinkedIn Email WhatsApp
    Previous Articleಸಹಕಾರ ರತ್ನ ಡಾ|ಎಂ.ಎನ್.ಆರ್ ಅವರ 77ನೇ ಹುಟ್ಟುಹಬ್ಬ ಸಂಭ್ರಮ: ಎಲ್ಲಾ ವರ್ಗದ ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಣೆ 
    Next Article ಪತ್ರಕರ್ತರ ದ್ವನಿ ಹತ್ತಿಕ್ಕುವ ಕೆಲಸ ಪ್ರಜಾಪ್ರಭುತ್ವಕ್ಕೆ ಮಾರಕ :  ಸಂಡೂರು ಶಾಸಕಿ ಈ ಅನ್ನಪೂರ್ಣ ಕಳವಳ 

    Related Posts

    ಕರಾವಳಿ

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ವಿಧಿವಶ

    July 18, 2026
    ಕರಾವಳಿ

    ಹೈ ಕೋರ್ಟ್ ಸರಕಾರಿ ವಕೀಲರಾಗಿ “ಚಿದಾನಂದ ಬಂಟ್ವಾಳ್ ” ನೇಮಕ

    July 18, 2026
    ಕರಾವಳಿ

    ದ.ಕ. ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ 

    July 17, 2026
    Add A Comment
    Leave A Reply Cancel Reply

    Top Posts

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.