Close Menu
SK Media NewsSK Media News
    What's Hot

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಹಿರಿಯ ಆರ್‌ಎಸ್‌ಎಸ್ ಕಾರ್ಯಕರ್ತ, ಬಿಜೆಪಿಯ ಹಿರಿಯ ನಾಯಕ ಸತೀಶ್ ಪ್ರಭು ವಿಧಿವಶ
    ಕರಾವಳಿ

    ಹಿರಿಯ ಆರ್‌ಎಸ್‌ಎಸ್ ಕಾರ್ಯಕರ್ತ, ಬಿಜೆಪಿಯ ಹಿರಿಯ ನಾಯಕ ಸತೀಶ್ ಪ್ರಭು ವಿಧಿವಶ

    March 3, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು, ಫೆಬ್ರವರಿ, 03 : ಆರ್ ಎಸ್ ಎಸ್ ನ ಹಿರಿಯ ಕಾರ್ಯಕರ್ತ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಮಾಜಿ ವಕ್ತಾರ ನಗರದ ರಥಬೀದಿ ನಿವಾಸಿ ಸತೀಶ್ ಪ್ರಭು ( ವಯಸ್ಸು 59 ) ಅವರು ಮಂಗಳವಾರ ಬೆಳಗ್ಗೆ ನಗರದ ಯೆ್ನೆಪೋಯ ಅಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

    ತಮ್ಮ ಮನೆಯಲ್ಲಿದ್ದ ಸಂದರ್ಭ ಇಂದು ಬೆಳಗ್ಗೆ ಏಕಾಏಕಿ ಕುಸಿದು ಬಿದ್ದ ಪ್ರಭು ಅವರನ್ನು ನಗರದ ಯೆ್ನೆಪೋಯ ಅಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆಗೆ ಒಳಪಡಿಸಲಾಯಿತು. ಈ ವೇಳೆ ಇವರನ್ನು ಪರೀಕ್ಷಿಸಿದ ವೈದ್ಯರು ಪ್ರಭು ಅವರಿಗೆ ಬ್ರೈನ್ ಹೇಮರೆಜ್ ಆಗಿರುವುದಾಗಿ ತಿಳಿಸಿದ್ದು, ಇದೇ ಸಂದರ್ಭದಲ್ಲಿ ಅವರು ಮೃತ ಪಟ್ಟಿದ್ದಾರೆ ಎನ್ನಲಾಗಿದೆ.

    ಮೃತರು ಪತ್ನಿ ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ.

    ಬಾಲ್ಯದಿಂದಲೇ ಸಂಘದ ಸ್ವಯಂಸೇವಕರಾಗಿದ್ದ ಇವರು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS)ದ ಹಿರಿಯ ಕಾರ್ಯಕರ್ತರಾಗಿ ವಿವಿಧ ಜವಾಬ್ಧಾರಿಗಳನ್ನು ವಹಿಸಿಕೊಳ್ಳುವ ಮೂಲಕ ಸಂಘಕ್ಕೆ ನಿಷ್ಟಾವಂತರಾಗಿ ಅಪಾರ ಸೇವೆ ಸಲ್ಲಿಸಿದ್ದರು. ನಗರದ ಕಾರ್‌ಸ್ಟ್ರೀಟ್ ಶ್ರೀ ವೆಂಕಟರಮಣ ದೇವಸ್ಥಾನದ ಟ್ರಸ್ಟಿಯಾಗಿದ್ದರು. ಮಾತ್ರವಲ್ಲದೇ ನಗರದ ಮಣ್ಣಗುಡ್ಡೆ ಸಮೀಪವಿರುವ ಸಂಘನಿಕೇತನದ ಕೇಶವ ಸಂವರ್ಧನ ಸಮಿತಿಯ ಉಪಾಧ್ಯಕ್ಷಕರಾಗಿದ್ದು, ಸಂಘನಿಕೇತನ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಕಾರ್ಯದರ್ಶಿಯಾಗಿದ್ದು ಕೂಡ ಸೇವಾ ಚಟುವಟಿಕೆಯಲ್ಲಿ ತೊಡಗಿದ್ದರು.

    ಕದ್ರೊಳಿ ಸಮೀಪ ಸಣ್ಣ ಮುದ್ರಣ ಸಂಸ್ಥೆ ಆರಂಭಿಸಿ ತಮ್ಮ ಉದ್ಯೋಗದಲ್ಲಿ ತೃಪ್ತಿಪಟ್ಟುಕೊಂಡಿದ್ದ ಪ್ರಭು ಅವರು, ಆರ್ ಎಸ್ ಎಸ್ ಹಾಗೂ ಬಿಜೆಪಿಯಲ್ಲಿ ಪ್ರಬಲ ಮುಖಂಡರ ಸಂಪರ್ಕ ಇದ್ದರೂ, ತುಂಬಾ ಸರಳವಾಗಿಯೇ ಬದುಕು ನಡೆಸುತಿದ್ದರು.

    ಹಲವು ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರೀಯರಾಗಿದ್ದು ಕೊಂಡು ಹಲವಾರು ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದರೂ ಬಿಜೆಪಿಯಲ್ಲಿ ಸೂಕ್ತ ಸ್ಥಾನಮಾನ ಸಿಗದ ಹಿನ್ನೆಲೆಯಲ್ಲಿ ಅಸಮಧಾನಗೊಂಡು ಹಿಂದಿನ ಬಾರಿಯ ಚುನಾವಣೆ ಸಂದರ್ಭ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಆದರೆ ಅಲ್ಲಿಯೂ ಕೂಡ ತಮಗೆ ಒಗ್ಗಿಕೊಳ್ಳಲ್ಲು ಸಾಧ್ಯವಾಗದ ಹಿನ್ನೆಲೆಯಲ್ಲಿ ನಗರದ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ನಡೆದ ಭಾರತೀಯ ಜನತಾ ಪಕ್ಷದ ಅದ್ಧೂರಿ ಸಮಾರಂಭವೊಂದರಲ್ಲಿ ಮತ್ತೆ ಮರಳಿ ತಮ್ಮ ಮಾತೃ ಪಕ್ಷಕ್ಕೆ ಸೇರ್ಪಡೆಗೊಂದಿದ್ದರು.. ಇದೀಗ ಸತೀಸ್ ಪ್ರಭು ಅವರು ಸ್ವಯಂಸೇವಕ ಸಂಘದ ಹಾಗೂ ಬಿಜೆಪಿಯಲ್ಲಿನ ತಮ್ಮ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

    2024 ಮಾರ್ಚ್ ನಲ್ಲಿ ಬಿಜೆಪಿ ದಕ್ಷಿಣ ಮಂಡಲ ವತಿಯಿಂದ ನಗರದ ಟಿ ವಿ ರಮಣ ಪೈ ಸಭಾಂಗಣದಲ್ಲಿ ನಡೆದ ಶಕ್ತಿಕೇಂದ್ರ ಕಾರ್ಯಕರ್ತರ ಸಭೆಯಲ್ಲಿ ಮರಳಿ ಮಾತೃ ಪಕ್ಷ ಸೇರಿದ್ದ ಸತೀಶ್ ಪ್ರಭು

    __Sathish Kapikad

    Share. Facebook Twitter Pinterest LinkedIn Email WhatsApp
    Previous Articleರೋಟರಿ ಕ್ಲಬ್ ಹಿಲ್‌ಸೈಡ್ ಮಂಗಳೂರು ವತಿಯಿಂದ ಮುಲ್ಲಕಾಡ್ ಸರ್ಕಾರಿ ಶಾಲೆಗೆ ಮೇಲ್ಛಾವಣಿ ಕೊಡುಗೆ
    Next Article ಮುಲ್ಕಿಯಲ್ಲಿ ಮಹಾದಾನಿ “ಡಾ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ” : ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಭೆಯಲ್ಲಿ ಐಕಳ ಹರೀಶ್ ಶೆಟ್ಟಿ ಘೋಷಣೆ

    Related Posts

    ಕರಾವಳಿ

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026
    ಕರಾವಳಿ

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026
    ಕರಾವಳಿ

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Add A Comment
    Leave A Reply Cancel Reply

    Top Posts

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.