ಕುಂದು ಕೊರತೆ ಇದ್ದಲ್ಲಿ ತುರ್ತು ಸಹಾಯವಾಣಿಗೆ ಕರೆಮಾಡಿ

ಮಂಗಳೂರು, ಮಾ.13(ಕ.ವಾ):- ಜಿಲ್ಲೆಯಲ್ಲಿ ಗೃಹ ಬಳಕೆ ಅನಿಲ ಸಿಲಿಂಡರ್‍ಗಳ ದಾಸ್ತಾನು ಲಭ್ಯವಿದ್ದು, ಜಿಲ್ಲೆಯ ಎಲ್ಲಾ ಗೃಹ ಬಳಕೆ ಅನಿಲ ಗ್ರಾಹಕರು ಯಾರು ಸಹ ಗಾಬರಿ/ ಆತಂಕಪಡಬಾರದೆಂದು ಹಾಗೂ ಹೆಚ್ಚುವರಿ ದಾಸ್ತಾನು ಮಾಡಿಕೊಳ್ಳಬಾರದು.

ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಸಿಲಿಂಡರ್‍ಗಳ ಕೊರತೆ ಇಲ್ಲದಿರುವುದರಿಂದ ಸಾರ್ವಜನಿಕರು ಭಯ ಬೀಳುವ ಅಗತ್ಯವಿಲ್ಲ ಮತ್ತು ಸಾಮಾಜಿಕ ಜಾಲತಾಣದಲ್ಲಿ ಭಿತ್ತರವಾಗುವ ಸುಳ್ಳು ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು.

ಗೃಹ ಬಳಕೆ ಅಡುಗೆ ಅನಿಲಕ್ಕೆ ಸಂಬಂಧಿಸಿದಂತೆ ಯಾವುದೇ ಕುಂದು ಕೊರತೆ ಇದ್ದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಗೃಹ ಬಳಕೆ ಅನಿಲ ಗ್ರಾಹಕರು ಸಹಾಯವಾಣಿ ಸಂಖ್ಯೆ 0824-2423622 ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Sathish Kapikad 

Share.
Leave A Reply

Exit mobile version