
ಜಿಲ್ಲಾಧ್ಯಕ್ಷ ಉಳ್ಳಾಲ ನಂದನ್ ಮಲ್ಯ
ಮಂಗಳೂರು, ಏಪ್ರಿಲ್.15: ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾ ಯುವ ಮೋರ್ಚಾದ ಪ್ರಮುಖ ಸಭೆಯು ಜಿಲ್ಲಾಧ್ಯಕ್ಷರಾದ ಉಳ್ಳಾಲ ನಂದನ್ ಮಲ್ಯ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಯಶಸ್ವಿಯಾಗಿ ಜರುಗಿತು.
ಸಭೆಯಲ್ಲಿ ಜಿಲ್ಲಾ ಬಿಜೆಪಿಯ ಸಂಘಟನಾತ್ಮಕ ಬೆಳವಣಿಗೆ ಮತ್ತು ಮುಂಬರುವ ದಿನಗಳಲ್ಲಿ ಯುವ ಮೋರ್ಚಾ ಹಮ್ಮಿಕೊಳ್ಳಬೇಕಾದ ವಿವಿಧ ಜನಪರ ಕಾರ್ಯಕ್ರಮಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು.

ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಅವರು ಯುವ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಸಂಘಟನೆಯ ಬಲವರ್ಧನೆಗೆ ಯುವ ಮೋರ್ಚಾದ ಪಾತ್ರ ನಿರ್ಣಾಯಕವಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕೇಂದ್ರ ಸರ್ಕಾರದ ಸೌಲಭ್ಯಗಳು ತಲುಪುವಂತೆ ಮಾಡುವಲ್ಲಿ ಯುವಕರು ಮುಂಚೂಣಿಯಲ್ಲಿರಬೇಕು ಎಂದು ಮಾರ್ಗದರ್ಶನ ನೀಡಿದರು.
ವೇದಿಕೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ ಅವರು ಉಪಸ್ಥಿತರಿದ್ದು, ಉಮೇಶ್ ಕುಲಾಲ್ ಅವರು ಸಭೆಗೆ ಆಗಮಿಸಿದ ಗಣ್ಯರನ್ನು ಮತ್ತು ಕಾರ್ಯಕರ್ತರನ್ನು ಆತ್ಮೀಯವಾಗಿ ಸ್ವಾಗತಿಸಿದರು.
ಕಾರ್ಯಕ್ರಮದ ಕೊನೆಯಲ್ಲಿ ಭರತ್‌ರಾಜ್ ಕೃಷ್ಣಾಪುರ ಅವರು ವಂದನಾರ್ಪಣೆ ಮಾಡಿದರು.
ಸಭೆಯಲ್ಲಿ ಜಿಲ್ಲಾ ಸಮಿತಿಯ ಸದಸ್ಯರು, ವಿವಿಧ ಮಂಡಲಗಳ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು ಪಾಲ್ಗೊಂಡಿದ್ದರು.
_Sathish Kapikad

