Close Menu
SK Media NewsSK Media News
    What's Hot

    ಕ್ರೀಡಾಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಎಂ.ಆರ್. ಪೂವಮ್ಮ ಅವರು ಪ್ರತಿಷ್ಠಿತ ರಾಜ್ಯಮಟ್ಟದ ‘ವಂದನಾ ಪ್ರಶಸ್ತಿ’ಗೆ ಆಯ್ಕೆ

    October 28, 2026

    ನ.3ರಿಂದ 15 : ಮಾಂಡ್ ಸೊಭಾಣ್ ಸಂಘಟನೆಯ ವತಿಯಿಂದ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮ್ಮೇಳನ -ಸತತ 12 ದಿನ, 12 ಗಂಟೆ ಹಾಗೂ 12 ನಿಮಿಷಗಳ ನಿರಂತರ ಗಾಯನದ ಮೂಲಕ ಗಿನ್ನೆಸ್ ದಾಖಲೆಗೆ ಪ್ರಯತ್ನ

    October 28, 2026

    ಸತತ ಸೋಲುಗಳ ಹತಾಶೆಯಿಂದ ಪ್ರಧಾನಿಗಳ ತಂದೆಯವರನ್ನು ನಿಂದನೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಅವರ ಹಿರಿತನಕ್ಕೆ ಶೋಭೆಯಲ್ಲ: ಶಾಸಕ ಕಾಮತ್ 

    October 27, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಹಾಸ್ಯಮಯ ಸಿನಿಮಾ “ವಾದಿರಾಜ ವಾಲಗ ಮಂಡಳಿ” ಶೀಘ್ರದಲ್ಲೇ ಬಿಡುಗಡೆ: ನಿರ್ಮಾಪಕ ಡಾ| ಎಂ.ಎನ್ ರಾಜೇಂದ್ರ ಕುಮಾರ್
    ಕರಾವಳಿ

    ಹಾಸ್ಯಮಯ ಸಿನಿಮಾ “ವಾದಿರಾಜ ವಾಲಗ ಮಂಡಳಿ” ಶೀಘ್ರದಲ್ಲೇ ಬಿಡುಗಡೆ: ನಿರ್ಮಾಪಕ ಡಾ| ಎಂ.ಎನ್ ರಾಜೇಂದ್ರ ಕುಮಾರ್

    April 28, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು, ಏಪ್ರಿಲ್ 28:ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಪ್ರಯೋಗವಾಗಿ ಮೂಡಿಬರುತ್ತಿರುವ “ವಾದಿರಾಜ ವಾಲಗ ಮಂಡಳಿ” ಹಾಸ್ಯಮಯ ಸಿನಿಮಾದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣಗೊಂಡಿದೆ. ಪ್ರಸ್ತುತ ಚಿತ್ರವು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಸಂಕಲನ, ಹಿನ್ನೆಲೆ ಸಂಗೀತ ಹಾಗೂ ಡಬ್ಬಿಂಗ್ ಕೆಲಸಗಳು ವೇಗವಾಗಿ ಸಾಗುತ್ತಿವೆ‌ ಚಿತ್ರದ ನಿರ್ಮಾಪಕರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ರವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

    ಎಮ್.ಎನ್.ಆರ್. ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರವು ವಿಶಿಷ್ಟ ಕಥಾಹಂದರ, ಹೊಸ ಶೀರ್ಷಿಕೆ ಹಾಗೂ ಕಲಾವಿದರ ವಿಭಿನ್ನ ಗೆಟಪ್ ಮೂಲಕ ಸಿನಿಪ್ರೇಮಿಗಳಲ್ಲಿ ಈಗಾಗಲೇ ಕುತೂಹಲ ಹುಟ್ಟಿಸಿದೆ. ಕರಾವಳಿ ಕನ್ನಡದ ಸೊಗಡನ್ನು ಹೊಂದಿರುವ ಈ ಸಿನಿಮಾ ರಾಜ್ಯದ ಎಲ್ಲಾ ಭಾಗದ ಪ್ರೇಕ್ಷಕರನ್ನೂ ಸೆಳೆಯಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ ಎಂದರು.

    “ವರಾಹ ರೂಪಂ” ಹಾಡಿನ ಖ್ಯಾತಿಯ ಶಶಿರಾಜ್ ಕಾವೂರು ಈ ಚಿತ್ರದ ಮೂಲಕ ನಿರ್ದೇಶಕರಾಗಿ ಚಿತ್ರರಂಗಕ್ಕೆ ಪ್ರವೇಶಿಸುತ್ತಿದ್ದಾರೆ. ಕಥೆ, ಚಿತ್ರಕತೆ ಹಾಗೂ ಸಂಭಾಷಣೆಯ ಜೊತೆಗೆ ನಿರ್ದೇಶನದ ಹೊಣೆಗಾರಿಕೆಯನ್ನು ಅವರು ನಿರ್ವಹಿಸಿದ್ದಾರೆ. ಸುಮಾರು 50 ದಿನಗಳ ಕಾಲ ಎರಡು ಹಂತಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ ಎಂದು ಅವರು ವಿವರಿಸಿದರು.

    ಚಿತ್ರದಲ್ಲಿ ಹಾಸ್ಯ, ಭಾವನೆ ಹಾಗೂ ಸಾಮಾಜಿಕ ಅಂಶಗಳನ್ನು ಸಂಯೋಜಿಸಿ ಸಂಪೂರ್ಣ ಮನರಂಜನಾ ಪ್ಯಾಕೇಜ್ ರೂಪಿಸಲಾಗಿದೆ. ಕುಟುಂಬ ಸಮೇತ ವೀಕ್ಷಿಸಬಹುದಾದ ಚಿತ್ರವಾಗಿದ್ದು, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿಯೂ ಬಿಡುಗಡೆ ಮಾಡುವ ಯೋಜನೆ ಇದೆ ಎಂದು ಹೇಳಿದರು.

    ಕರಾವಳಿಯ ಜನಪ್ರಿಯ ಕಲಾವಿದರಾದ ನವೀನ್ ಪಡೀಲ್, ಪ್ರಕಾಶ್ ತುಮಿನಾಡು, ಮೈಮ್ ರಾಮದಾಸ್, ದೀಪಕ್ ರೈ ಪಾಣಾಜೆ ಹಾಗೂ ಪುಷ್ಪರಾಜ್ ಬೊಳ್ಳಾರ್  ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅರ್ಜುನ್ ವೇದಾಂತ ಮತ್ತು ಅಥರ್ವ ಪ್ರಕಾಶ್ ನಾಯಕ ನಟರಾಗಿ ಅಭಿನಯಿಸಿದ್ದು, ತನ್ನಿ ರಾವ್ ಹಾಗೂ ವೇನ್ಯ ರೈ ನಾಯಕಿಯರಾಗಿ ನಟಿಸಿದ್ದಾರೆ. ಲಕ್ಷ್ಮಣ ಕುಮಾರ್ ಮಲ್ಲೂರು ಸೇರಿದಂತೆ ಹಲವು ಅನುಭವಿ ಕಲಾವಿದರು ಚಿತ್ರದಲ್ಲಿದ್ದಾರೆ.

    ಚಿತ್ರದ ಚಿತ್ರೀಕರಣಕ್ಕೆ Arri LF ಅತ್ಯಾಧುನಿಕ ಕ್ಯಾಮೆರಾ ಬಳಕೆಯಾಗಿದೆ. ಛಾಯಾಗ್ರಹಣವನ್ನು ಎಸ್. ಚಂದ್ರಶೇಖರನ್ ನಿರ್ವಹಿಸಿದ್ದು, ಸಂಗೀತ ಸಂಯೋಜನೆಯನ್ನು ಮಣಿಕಾಂತ್ ಕದ್ರಿ ನೀಡಿದ್ದಾರೆ. ಸಾಹಸ ನಿರ್ದೇಶನವನ್ನು ಟೈಗರ್ ಶಿವು ಮಾಡಿದ್ದು, ವಿವಿಧ ಭಾಷೆಗಳ ಖ್ಯಾತ ಗಾಯಕರು ಹಾಡುಗಳಿಗೆ ಧ್ವನಿ ನೀಡಿದ್ದಾರೆ.

    ಉದ್ಯಮಿ ಜಯಪ್ರಕಾಶ್ ತುಂಬೆ ಸಹ ನಿರ್ಮಾಪಕರಾಗಿದ್ದು, ಸಂತೋಷ್ ಶೆಟ್ಟಿ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ. ರಾಜೇಶ್ ಕುಡ್ಡ ಹಾಗೂ ಕಾರ್ತಿಕ್ ಪ್ರೊಡಕ್ಷನ್ ಮ್ಯಾನೇಜರ್‌ಗಳಾಗಿ ಸಹಕರಿಸಿದ್ದಾರೆ.

    ಆಗಸ್ಟ್‌ನಲ್ಲಿ  ಅದ್ಧೂರಿ ಬಿಡುಗಡೆ:

    ಕರಾವಳಿ ಭಾಷೆಯ ನೈಜತೆಯನ್ನು ಉಳಿಸಿಕೊಂಡು ಎಲ್ಲಾ ವರ್ಗದ ಪ್ರೇಕ್ಷಕರಿಗೂ ಹತ್ತಿರವಾಗುವಂತೆ ನಿರ್ಮಾಣಗೊಂಡಿರುವ “ವಾದಿರಾಜ ವಾಲಗ ಮಂಡಳಿ” ಸಿನಿಮಾ ಆಗಸ್ಟ್ ತಿಂಗಳಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಚಿತ್ರಕ್ಕೆ ಉತ್ತಮ ನಿರೀಕ್ಷೆ ವ್ಯಕ್ತವಾಗಿದ್ದು, ಬಿಡುಗಡೆಯ ಬಳಿಕ ಉತ್ತಮ ಪ್ರತಿಕ್ರಿಯೆ ಸಿಗುವ ವಿಶ್ವಾಸವನ್ನು ಚಿತ್ರತಂಡ ವ್ಯಕ್ತಪಡಿಸಿದೆ ಎಂದು ಎಂ. ಎನ್ ಆರ್ ತಿಳಿಸಿದ್ದಾರೆ.

    ಪತ್ರಿಕಾಗೋಷ್ಠಿಯಲ್ಲಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನ ಆಡಳಿತ ಮಂಡಳಿಯ ನಿರ್ದೇಶಕರು, ಪ್ರಮುಖರಾದ ಮೇಘರಾಜ್, ವಾದಿರಾಜ ವಾಲಗ ಮಂಡಳಿ ಚಿತ್ರದ ನಿರ್ದೇಶಕ ಶಶಿರಾಜ್ ಕಾವೂರು,ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ,. ಸಹ ನಿರ್ಮಾಪಕ ಜಯಪ್ರಕಾಶ್ ತುಂಬೆ, ನಟ ಅರ್ಜುನ್ ವೇದಾಂತ್, ನಾಯಕಿ ನಟಿ ವೇನ್ಯ ರೈ, ,ಮಹಿಮ್ ರಾಮದಾಸ್,ರಾಜೇಶ್ ಕುಡ್ಲ, ಶೋಭಾರಾಜ್ ಪಾವೂರು, ಅಕ್ಷತ ವಿಟ್ಲ, ಎಸ್ ಡಿ ಸಿ ಸಿ ಬ್ಯಾಂಕಿನ  ಸಿ. ಇ. ಒ ಗೋಪಾಲ ಕೃಷ್ಣ ಭಟ್ ,ಚೇತನ್ ರೈ ಮಾಣಿ ಹಾಗೂ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

    _ Sathish Kapikad 

    Share. Facebook Twitter Pinterest LinkedIn Email WhatsApp
    Previous Articleಸಾಂಸ್ಕೃತಿಕ ಸಂಘಟಕ, ನಾಟಕಕಾರ ಹಾಗೂ ರಾಜಕಾರಣಿ ,ರಾಮಚಂದ್ರ ಬೈಕಂಪಾಡಿ ನೈಜ ಕಾಳಜಿಯ ಸಾಂಸ್ಕೃತಿಕ ನಾಯಕ : ಡಾ. ಪ್ರಭಾಕರ ಜೋಶಿ 
    Next Article ಯಕ್ಷದ್ರುವ ಪಟ್ಲ ಫೌಂಡೇಶನಿಂದ ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ : ಮೇ 30ರಂದು ಪಟ್ಲ ಸಂಭ್ರಮ ಸಮಾರಂಭದಲ್ಲಿ ವಿತರಣೆ 

    Related Posts

    ಕರಾವಳಿ

    ಕ್ರೀಡಾಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಎಂ.ಆರ್. ಪೂವಮ್ಮ ಅವರು ಪ್ರತಿಷ್ಠಿತ ರಾಜ್ಯಮಟ್ಟದ ‘ವಂದನಾ ಪ್ರಶಸ್ತಿ’ಗೆ ಆಯ್ಕೆ

    October 28, 2026
    ಕರಾವಳಿ

    ನ.3ರಿಂದ 15 : ಮಾಂಡ್ ಸೊಭಾಣ್ ಸಂಘಟನೆಯ ವತಿಯಿಂದ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮ್ಮೇಳನ -ಸತತ 12 ದಿನ, 12 ಗಂಟೆ ಹಾಗೂ 12 ನಿಮಿಷಗಳ ನಿರಂತರ ಗಾಯನದ ಮೂಲಕ ಗಿನ್ನೆಸ್ ದಾಖಲೆಗೆ ಪ್ರಯತ್ನ

    October 28, 2026
    ಕರಾವಳಿ

    ಸತತ ಸೋಲುಗಳ ಹತಾಶೆಯಿಂದ ಪ್ರಧಾನಿಗಳ ತಂದೆಯವರನ್ನು ನಿಂದನೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಅವರ ಹಿರಿತನಕ್ಕೆ ಶೋಭೆಯಲ್ಲ: ಶಾಸಕ ಕಾಮತ್ 

    October 27, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.