Close Menu
SK Media NewsSK Media News
    What's Hot

    ಬಂಟ್ಸ್ ಹಾಸ್ಟೇಲ್ ಸಿದ್ದಿವಿನಾಯಕ ಪ್ರತಿಷ್ಠಾನದ ಸಾರ್ವಜನಿಕ ಶ್ರೀ ಗಣೇಶೋತ್ಸವ: ವಿಶೇಷ ಮೆರವಣಿಗೆಯೊಂದಿಗೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ ಆಗಮನ

    September 13, 2026

    ತುಳು ಹಾಗೂ ಕನ್ನಡ ಎರಡು ಭಾಷೆಗಳಲ್ಲಿ ನಿರ್ಮಾಣಗೊಂಡಿರುವ, ಅರ್ಜುನ್ ದೇವ್ ನಿರ್ದೇಶನದ “ಟಾಸ್” ಸಿನಿಮಾ ಸೆಪ್ಟಂಬರ್ 18 ರಂದು ರಾಜ್ಯಾದ್ಯಂತ ತೆರೆಗೆ

    September 13, 2026

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಕದ್ರಿ ಉದ್ಯಾನವನದಲ್ಲಿ ರಾಜ್ಯ ಮಟ್ಟದ ಗೇರು ಮೇಳಕ್ಕೆ ಸಿದ್ಧತೆ -ಸಾರ್ವಜನಿಕರಿಗೆ ಉಚಿತ ಗೇರು ಗಿಡ ವಿತರಣೆ : ಮಮತಾ ಡಿ.ಗಟ್ಟಿ
    ಕರಾವಳಿ

    ಕದ್ರಿ ಉದ್ಯಾನವನದಲ್ಲಿ ರಾಜ್ಯ ಮಟ್ಟದ ಗೇರು ಮೇಳಕ್ಕೆ ಸಿದ್ಧತೆ -ಸಾರ್ವಜನಿಕರಿಗೆ ಉಚಿತ ಗೇರು ಗಿಡ ವಿತರಣೆ : ಮಮತಾ ಡಿ.ಗಟ್ಟಿ

    May 15, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು, ಮೇ . 15: ಕರ್ನಾಟಕ ಗೇರು ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಕರ್ನಾಟಕ ಅರಣ್ಯ ಇಲಾಖೆ ಸಹಯೋಗದಲ್ಲಿ ‘ಕರ್ನಾಟಕ ಗೇರು ಮೇಳ ಮತ್ತು ಕಾರ್ಯಾಗಾರ-2026’ ಮೇ 17 ಮತ್ತು 18ರಂದು ನಗರದ ಕದ್ರಿ ಉದ್ಯಾನವನದಲ್ಲಿ ನಡೆಯಲಿದ್ದು ಮೇಳ ವೀಕ್ಷಣೆಗೆ ಬಂದ ಅಗತ್ಯ ಇರುವ ಸಾರ್ವಜನಿಕರಿಗೆ ಉಚಿತವಾಗಿ ಗೇರು ಗಿಡ ವಿತರಿಸಲಾಗುದೆಂದು ನಿಗಮದ ಅಧ್ಯಕ್ಷೆ ಮಮತಾ ಡಿ. ಗಟ್ಟಿ ತಿಳಿಸಿದರು.

    ತಮ್ಮ ಕಚೇರಿಯಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 17ರಂದು ಬೆಳಿಗ್ಗೆ 11 ಗಂಟೆಗೆ ಸ್ಪೀಕರ್ ಯು.ಟಿ. ಖಾದರ್ ಗೇರು ಮೇಳವನ್ನು ಉದ್ಘಾಟಿಸಲಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ರಾಜ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ್ ಬಿ. ಖಂಡ್ರೆ ಸಮಾರಂಭ ಉದ್ಘಾಟಿಸಲಿದ್ದಾರೆ ಎಂದರು.

    ಈ ಸಂದರ್ಭದಲ್ಲಿ ಶಾಸಕರಾದ ಡಿ. ವೇದವ್ಯಾಸ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ರಾಜ್ಯಸಭಾ ಸದಸ್ಯ ಡಿ. ವೀರೇಂದ್ರ ಹೆಗ್ಗಡೆ ಮತ್ತು ಗೇರು ಮೇಳದ ನಿಗಮ ಮಂಡಳಿಯ ಅಧ್ಯಕ್ಷರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದವರು ತಿಳಿಸಿದರು.

    ಮೇ 17 ಮತ್ತು 18ರಂದು ಗೇರು ಕೃಷಿ ಕುರಿತು ತಾಂತ್ರಿಕ ಕಾರ್ಯಾಗಾರಗಳು ನಡೆಯಲಿವೆ. ಗೇರು ಸಂಶೋಧನಾ ನಿರ್ದೇಶನಾಲಯದ ಪ್ರಧಾನ ವಿಜ್ಞಾನಿ ಡಾ. ಜಿ. ದಿನಕರ ಉಳ್ಳಾಳ್ ಹಾಗೂ ಹಿರಿಯ ವಿಜ್ಞಾನಿ ಡಾ. ವೀಣಾ ಜಿ.ಎಲ್. ಆಧುನಿಕ ತಂತ್ರಜ್ಞಾನ, ಗೇರು ಸಂಸ್ಕರಣೆ ಮತ್ತು ಮೌಲ್ಯವರ್ಧನೆ ಕುರಿತು ಮಾಹಿತಿ ನೀಡಲಿದ್ದಾರೆ. ಪ್ರಗತಿಪರ ರೈತ ಸುಭಾಷ್ ರೈ ಗೇರು ಕೃಷಿಯ ಅನುಭವ ಹಂಚಿಕೊಳ್ಳಲಿದ್ದಾರೆ.

    ಮೇ 18ರಂದು ನಡೆಯುವ ತಾಂತ್ರಿಕ ಅಧಿವೇಶನದಲ್ಲಿ ಕೆಸಿಎಂಡಿ ಮಾಜಿ ಅಧ್ಯಕ್ಷ ಪ್ರಕಾಶ್ ಕಲ್ಬಾವಿ ‘ರಾಜ್ಯ ಮಟ್ಟದ ಗೇರು ಮೇಳ’ ಕುರಿತು ವಿಚಾರ ಮಂಡನೆ ಮಾಡಲಿದ್ದಾರೆ. ಹುಬ್ಬಳ್ಳಿಯ ಗೇರು ಮತ್ತು ಕೋಕೋ ನಿರ್ದೇಶನಾಲಯದ ಮಾಜಿ ನಿರ್ದೇಶಕ ಡಾ. ವೆಂಕಟೇಶ್ ಎನ್. ಹುಬ್ಬಳ್ಳಿ ಹಾಗೂ ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಸಂಯೋಜಕ ಡಾ. ಸಿ. ಸುನಿಲ್ ಯೋಜನೆಗಳು ಹಾಗೂ ನರ್ಸರಿಗಳ ಮಾನ್ಯತೆ ಕುರಿತು ರೈತರಿಗೆ ಮಾಹಿತಿ ನೀಡಲಿದ್ದಾರೆ.

    ಗೇರು ಬೆಳೆಯಲ್ಲಿ ಗಮನಾರ್ಹ ಸಾಧನೆ ಮಾಡಿದ ಪ್ರಗತಿಪರ ರೈತರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುವುದು ಎಂದು ಅವರು ತಿಳಿಸಿದರು .

    ಸಾರ್ವಜನಿಕರು ಹಾಗೂ ರೈತರಿಗೆ ಮೇಳದಲ್ಲಿ ಉಚಿತ ಪ್ರವೇಶವಿದ್ದು, ರೈತರ ಉತ್ಪನ್ನಗಳಿಗೆ ನೇರ ಮಾರುಕಟ್ಟೆ ಒದಗಿಸುವ ಉದ್ದೇಶದಿಂದ 70ಕ್ಕೂ ಹೆಚ್ಚು ಉಚಿತ ಮಾರಾಟ ಮಳಿಗೆಗಳನ್ನು ತೆರೆಯಲಾಗುತ್ತಿದೆ. ವಿದ್ಯಾರ್ಥಿಗಳಿಗಾಗಿ ಭಾಷಣ ಹಾಗೂ ಚಿತ್ರಕಲಾ ಸ್ಪರ್ಧೆ, ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಮೇಳಕ್ಕೆ ಆಗಮಿಸುವ ಸಾರ್ವಜನಿಕರಿಗೆ ಉಚಿತವಾಗಿ ಗೇರು ಹಣ್ಣಿನ ಜ್ಯೂಸ್ ವಿತರಿಸಲಾಗುವುದು ಎಂದವರು ವಿವರಿಸಿದರು.

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleಬೃಹಶ್ರೀ ನಾರಾಯಣ ಗುರುಗಳ ತತ್ವಗಳು ಸಮಾಜವನ್ನು ಒಟ್ಟುಗೂಡಿಸಿದೆ: ವಿಧಾನಸಭಾಧ್ಯಕ್ಷ ಯು. ಟಿ ಖಾದರ್.
    Next Article ಉಳ್ಳಾಲ ತಾಲ್ಲೂಕಿನ ಪ್ರಥಮ ಪೈಲಟ್ ಚರಣ್ ರಾಜ್ ಕೆ. ಶೆಟ್ಟಿ ಹಾಗೂ ಪ್ರಕೃತಿ ಸಿ. ಶೆಟ್ಟಿ ದಂಪತಿಗೆ ಅಬ್ಬಕ್ಕ ಸಾಧನಾ ಪ್ರಶಸ್ತಿ” ಪ್ರದಾನ

    Related Posts

    ಕರಾವಳಿ

    ಬಂಟ್ಸ್ ಹಾಸ್ಟೇಲ್ ಸಿದ್ದಿವಿನಾಯಕ ಪ್ರತಿಷ್ಠಾನದ ಸಾರ್ವಜನಿಕ ಶ್ರೀ ಗಣೇಶೋತ್ಸವ: ವಿಶೇಷ ಮೆರವಣಿಗೆಯೊಂದಿಗೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ ಆಗಮನ

    September 13, 2026
    ಕರಾವಳಿ

    ತುಳು ಹಾಗೂ ಕನ್ನಡ ಎರಡು ಭಾಷೆಗಳಲ್ಲಿ ನಿರ್ಮಾಣಗೊಂಡಿರುವ, ಅರ್ಜುನ್ ದೇವ್ ನಿರ್ದೇಶನದ “ಟಾಸ್” ಸಿನಿಮಾ ಸೆಪ್ಟಂಬರ್ 18 ರಂದು ರಾಜ್ಯಾದ್ಯಂತ ತೆರೆಗೆ

    September 13, 2026
    ಕರಾವಳಿ

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026
    Add A Comment
    Leave A Reply Cancel Reply

    Top Posts

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.