Close Menu
SK Media NewsSK Media News
    What's Hot

    ಮೂಡಾದಿಂದ ಮಹಾಯೋಜನೆ ಮೂಲಕ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ – ಭೂಪರಿವರ್ತನೆ ಶುಲ್ಕಶೇ.15ರಿಂದ ಶೇ.1ಕ್ಕೆ ಇಳಿಕೆ : ಸಂತೋಷ್ ಕುಮಾರ್ ಶೆಟ್ಟಿ

    October 29, 2026

    ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಅತ್ಯುತ್ತಮ ಬಾಲನಟ ಪ್ರಶಸ್ತಿ ಪಡೆದ ಕಲಾ ಕ್ಷೇತ್ರದ ಅಪ್ರತಿಮ ಸಾಧಕ ಶ್ರೀ ಅತೀಶ್ ಎಸ್. ಶೆಟ್ಟಿ ಯವರಿಗೆ ಗೌರವ ಸನ್ಮಾನ 

    October 29, 2026

    ದ. ಕ. ಜಿಲ್ಲೆ, ಉಡುಪಿ, ಕಾರ್ಕಳ, ಕುಮಟಾ ಹಾಗೂ ಶಿವಮೊಗ್ಗದಲ್ಲಿ ಉದ್ಯೋಗವಕಾಶ : ಅ.31ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    October 28, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ : ವಿಶ್ವ ಪರಿಸರ ದಿನಾಚರಣೆ ಉದ್ಘಾಟಿಸಿ ಜಿಲ್ಲಾಧಿಕಾರಿ
    ಕರಾವಳಿ

    ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ : ವಿಶ್ವ ಪರಿಸರ ದಿನಾಚರಣೆ ಉದ್ಘಾಟಿಸಿ ಜಿಲ್ಲಾಧಿಕಾರಿ

    June 5, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು, ಜೂ.05 : ಪರಿಸರ, ನೀರು, ಆಹಾರ ಶುಚಿಯಾಗಿದ್ದರೆ ಜೀವ ಸಂಕುಲ ರಕ್ಷಣೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ನಮ್ಮ ಸುತ್ತಲಿನ ಪರಿಸರವನ್ನು ಶುಚಿಯಾಗಿಟ್ಟು ರಕ್ಷಿಸಬೇಕಿದೆ. ಪರಿಸರದ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಹೇಳಿದರು.

    ಅವರು ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರಣ್ಯ ಇಲಾಖೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಶುಕ್ರವಾರದ ನಗರದ ಕೆಪಿಟಿಯಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
    ಪ್ರತಿಯೊಬ್ಬರು ತಮ್ಮ ಮನೆಯ ಸುತ್ತಮುತ್ತಲಿನ ಪರಿಸರ ರಕ್ಷಿಸಿದರೆ ಸಮಾಜ ತನ್ನಿಂತಾನೆ ಉತ್ತಮ ಪರಿಸರವನ್ನು ಹೊಂದುತ್ತದೆ. ಇತ್ತೀಚಿನ ದಿನಗಳಲ್ಲಿ ಆಧುನಿಕ ಬದುಕಿನ ಜಂಜಾಟದಲ್ಲಿ ಪರಿಸರ ನಾಶವಾಗುತ್ತಿದೆ. ಮುಂದಿನ ಪೀಳಿಗೆಯ ಭವಿಷ್ಯಕ್ಕಾಗಿ ಪರಿಸರ ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಬೇಕು ಎಂದು ಅವರು ಹೇಳಿದರು.

    ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನಿಸಾ ಮಾತನಾಡಿ, ಪರಿಸರ ನಾಶದಿಂದ ಮನುಷ್ಯನ ಆರೋಗ್ಯದ ಮೇಲೆ ಪರಿಣಾಮ ಉಂಟಾಗಲಿದೆ. ನಮ್ಮ ಸುತ್ತಮುತ್ತಲಿನ ಪರಿಸರವನ್ನು ನಾವೇ ಕಾಪಾಡಿಕೊಳ್ಳಬೇಕು. ಪರಿಸರವನ್ನು ಉಳಿಸಿದರೆ ಪರಿಸರ ನಮ್ಮನ್ನು ರಕ್ಷಿಸುತ್ತದೆ ಎಂದವರು ಹೇಳಿದರು.

    ಸಮಾರಂಭದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಯಲಕ್ಷ್ಮಿ ರಾಯಕೋಡ, ಹಿರಿಯ ಪರಿಸರ ಅಧಿಕಾರಿ ರಾಜಶೇಖರ ಪುರಾಣಿಕ್, ಕೆ.ಪಿ.ಟಿ ಪ್ರಾಂಶುಪಾಲ ಹರೀಶ್ ಶೆಟ್ಟಿ, ಎನ್.ಐ.ಟಿ,ಕೆ ನಿವೃತ್ತ ಪ್ರಾಧ್ಯಾಪಕ ಶ್ರೀ ನಿಕೇತನ್, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ಮಂಜು, ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

    ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸೀಡ್ ಬಾಲ್ ಮತ್ತು ಬಟ್ಟೆ ಬ್ಯಾಗನ್ನು ವಿತರಿಸಲಾಯಿತು. ಇದಕ್ಕೂ ಮೊದಲು ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಯೆಯ್ಯಾಡಿಯಿಂದ ಕೆ.ಪಿ.ಟಿವರೆಗೆ ಜಾಥಾ ಕಾರ್ಯಕ್ರಮ ನಡೆಯಿತು. ಪ್ರಧಾನ ಜಿಲ್ಲಾ ನ್ಯಾಯಾಧೀಶ ಬಸವರಾಜ್ ಜಾಥಾ ಉದ್ಘಾಟಿಸಿದರು.

    _Sathish Kapikad

    Share. Facebook Twitter Pinterest LinkedIn Email WhatsApp
    Previous Articleಸಂಚಾರ ನಿಯಮ ಉಲ್ಲಂಘನೆ ಪ್ರಕರಣ : ಜೂನ್ 21 ರಿಂದ ಜುಲೈ 10 ರೊಳಗೆ ದಂಡ ಪಾವತಿಸಿದರೆ ಶೇ.50 ರಿಯಾಯಿತಿ
    Next Article ರಮೀಝಾ ನಾಸೀರ್ ಅವರಿಗೆ ತಮ್ಮ ಅತೀವ ಸಾಧನೆಗಾಗಿ ಒಲಿದ ದ.ಕ. ಜಿಲ್ಲಾ ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ಪಟ್ಟ

    Related Posts

    ಕರಾವಳಿ

    ಮೂಡಾದಿಂದ ಮಹಾಯೋಜನೆ ಮೂಲಕ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ – ಭೂಪರಿವರ್ತನೆ ಶುಲ್ಕಶೇ.15ರಿಂದ ಶೇ.1ಕ್ಕೆ ಇಳಿಕೆ : ಸಂತೋಷ್ ಕುಮಾರ್ ಶೆಟ್ಟಿ

    October 29, 2026
    ಕರಾವಳಿ

    ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಅತ್ಯುತ್ತಮ ಬಾಲನಟ ಪ್ರಶಸ್ತಿ ಪಡೆದ ಕಲಾ ಕ್ಷೇತ್ರದ ಅಪ್ರತಿಮ ಸಾಧಕ ಶ್ರೀ ಅತೀಶ್ ಎಸ್. ಶೆಟ್ಟಿ ಯವರಿಗೆ ಗೌರವ ಸನ್ಮಾನ 

    October 29, 2026
    ಕರಾವಳಿ

    ದ. ಕ. ಜಿಲ್ಲೆ, ಉಡುಪಿ, ಕಾರ್ಕಳ, ಕುಮಟಾ ಹಾಗೂ ಶಿವಮೊಗ್ಗದಲ್ಲಿ ಉದ್ಯೋಗವಕಾಶ : ಅ.31ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    October 28, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.