
ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿ ವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನಲ್ಲಿ ಸೆಪ್ಟಂಬರ್ 14 ರಿಂದ 16 ರ ವರೆಗೆ ನಡೆಯಲಿರುವ 20ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಸಂಚಾಲಕರಾಗಿ ಉದ್ಯಮಿ, ಸಮಾಜಸೇವಕರಾದ ಜಯಶೀಲ ಅಡ್ಯಾಂತಾಯ ಅಡ್ಯಾರ್ ಗುತ್ತು ಆಯ್ಕೆಯಾದರು.
ಶ್ರೀ ಗಣೇಶೋತ್ಸವದ ಪೂರ್ವಭಾವಿ ಸಭೆ ಬಂಟ್ಸ್ ಹಾಸ್ಟೇಲ್ ನ ಅಮೃತೋತ್ಸವ ಕಟ್ಟಡದಲ್ಲಿ ಟ್ರಸ್ಟ್ ನ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಂಚಾಲಕರ ಆಯ್ಕೆ ಪ್ರಕ್ರಿಯೆ ನಡೆಯಿತು.
ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಕೆ ಅಜಿತ್ ಕುಮಾರ್ ರೈ ಮಾಲಾಡಿ, ಪ್ರಧಾನ ಕಾರ್ಯದರ್ಶಿ ಎಮ್ ಕರುಣಾಕರ ಶೆಟ್ಟಿ, ಕೋಶಾಧಿಕಾರಿ ಸಿಎ ರಾಮ್ ಮೋಹನ್ ರೈ, ಸಿದ್ಧಿವಿನಾಯಕ ಪ್ರತಿಷ್ಠಾನದ ಟ್ರಸ್ಟಿಗಳಾದ ಕೃಷ್ಣಪ್ರಸಾದ್ ರೈ, ಕಾರ್ಯಕಾರಿ ಸಮಿತಿ ಸದಸ್ಯರಾದ ಎಮ್ ಸುಂದರ ಶೆಟ್ಟಿ, ವಸಂತ ಶೆಟ್ಟಿ ಜೆಪ್ಪು, ಪದವು ಮೇಗಿನಮನೆ ಉಮೇಶ್ ರೈ, ಉಲ್ಲಾಸ್ ಶೆಟ್ಟಿ ಪೆರ್ಮುದೆ, ರತ್ನಾಕರ ಶೆಟ್ಟಿ ಎಕ್ಕಾರ್, ಮನೀಶ್ ರೈ ಅಡ್ಯಾರ್, ಜಗಧೀಶ್ ಶೆಟ್ಟಿ ಬಿಜೈ ಮಂಗಳೂರು ತಾಲೂಕು ಸಮಿತಿಯ ಸಂಚಾಲಕ ದಿವಾಕರ ಸಾಮಾನಿ ಚೇಳ್ಯಾರು ಗುತ್ತು, ಮತ್ತಿತರರು ಉಪಸ್ಥಿತರಿದ್ದರು.
ಜಯಶೀಲ ಅಡ್ಯಂತಾಯ ಅವರು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಟ್ರಸ್ಟಿಯಾಗಿ, ಬಸ್ಸು ಮಾಲಕರ ಸಂಘದ ಅಧ್ಯಕ್ಷರಾಗಿ, ಎಪಿಎಂಸಿಯ ಸದಸ್ಯರಾಗಿ, ದ.ಕ.ಜಿಲ್ಲಾ ಕಾಂಗ್ರೆಸ್ ನ ಉಪಾಧ್ಯಕ್ಷರಾಗಿ, ಅಡ್ಯಾರ್ ಪಕ್ಷಿಕೃಷ್ಣ ಮಹಾವಿಷ್ಣು ದೇವಸ್ಥಾನದ ಕೋಶಾಧಿಕಾರಿಯಾಗಿ, ಬಂಟರ ಮಾತೃ ಸಂಘದ ಮಂಗಳೂರು ತಾಲೂಕು ಸಮಿತಿ ಸದಸ್ಯರಾಗಿ, ಅಡ್ಯಾರ್ ಗ್ರಾಮ ಪಂಚಾಯತ್ ಸದಸ್ಯರಾಗಿ ದುಡಿದವರು. ಅಡ್ಯಾರ್ ಫ್ಯಾಮಿಲಿ ಟ್ರಸ್ಟ್ ನ ಉಪಾಧ್ಯಕ್ಷರಾಗಿಯೂ ಕರ್ತವ್ಯ ನಿರ್ವಹಿಸುತ್ತಿರುವ ಜಯಶೀಲ ಅಡ್ಯಂತಾಯ ಅವರು ಬಂಟ್ಸ್ ಹಾಸ್ಟೇಲ್ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನದ ಗಣೇಶೋತ್ಸವ ಸಮಿತಿಯ ಸಂಚಾಲಕರಾಗಿ ಆಯ್ಕೆಯಾಗಿ, ಗಣೇಶನ ಸೇವೆ ಮಾಡಲು ಒಂದು ಅವಕಾಶ ದೊರೆತಿದೆ. ಎಲ್ಲರೂ ಸಹಕಾರಿ ನೀಡಿ ಗಣೇಶೋತ್ಸವವನ್ನು ಯಶಸ್ವಿ ಗೊಳಿಸೋಣ ಎಂದರು.
_Sathish Kapikad


