Close Menu
SK Media NewsSK Media News
    What's Hot

    ಹೈ ಕೋರ್ಟ್ ಸರಕಾರಿ ವಕೀಲರಾಗಿ “ಚಿದಾನಂದ ಬಂಟ್ವಾಳ್ ” ನೇಮಕ

    July 18, 2026

    ದ.ಕ. ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ 

    July 17, 2026

    ಹೆಣ್ಣುಮಕ್ಕಳ ಅಸುರಕ್ಷತೆಗೆ ರಾಜ್ಯ ಸರ್ಕಾರದ ನಿಷ್ಕ್ರಿಯ ಆಡಳಿತ ವ್ಯವಸ್ಥೆಯೇ ಕಾರಣ : ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

    July 17, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಕೋಳಿ ಫಾರಂಗಳಿಗೆ ವಿದ್ಯುತ್ ಸಂಪರ್ಕ: ರೈತರ ಸಮಸೈ ನಿವಾರಣೆಗೆ ಡಿಸಿಎಂಗೆ ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ
    ಕರಾವಳಿ

    ಕೋಳಿ ಫಾರಂಗಳಿಗೆ ವಿದ್ಯುತ್ ಸಂಪರ್ಕ: ರೈತರ ಸಮಸೈ ನಿವಾರಣೆಗೆ ಡಿಸಿಎಂಗೆ ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ

    July 3, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಬೆಂಗಳೂರು: ಕೋಳಿ ಸಾಕಾಣಿಕೆ ಫಾರಂ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ರೈತರು ಎದುರಿಸುತ್ತಿರುವ ತಾಂತ್ರಿಕ ಮತ್ತು ಆಡಳಿತಾತ್ಮಕ ತೊಡಕುಗಳನ್ನು ನಿವಾರಿಸುವಂತೆ ಆಗ್ರಹಿಸಿ, ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ರಾಜ್ಯದ ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ. ಪರಮೇಶ್ವರ್ ಅವರನ್ನು ಖುದ್ದಾಗಿ ಭೇಟಿಯಾಗಿ ಮನವಿ ಸಲ್ಲಿಸಿದರು.

    ರಾಜ್ಯದಲ್ಲಿ ಗ್ರಾಮೀಣ ಭಾಗದ ಅನೇಕ ರೈತರು ಮತ್ತು ಯುವಕರು ಸ್ವ ಉದ್ಯೋಗ ಹಾಗೂ ಕೃಷಿ ಆಧಾರಿತ ಆದಾಯ ವೃದ್ಧಿಗಾಗಿ ಕೃಷಿ ಪೂರಕ ಚಟುವಟಿಕೆಯಾದ ಕೋಳಿ ಸಾಕಾಣಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ, ಕೃಷಿ ಜಮೀನುಗಳಲ್ಲಿ ನಿರ್ಮಿಸಲಾದ ಕೋಳಿ ಫಾರಂ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಎಸ್ಕಾಂ (ESCOM) ಕಂಪೆನಿಗಳು ಗ್ರಾಮ ಪಂಚಾಯತಿಯಿಂದ ‘ನಿರಾಕ್ಷೇಪಣಾ ಪತ್ರ’ (NOC) ತರುವಂತೆ ಕಡ್ಡಾಯಗೊಳಿಸುತ್ತಿವೆ.

    ಆದರೆ, ಈ ಕಟ್ಟಡಗಳನ್ನು ಕೃಷಿ ಭೂಮಿಯಲ್ಲಿ ನಿರ್ಮಿಸಿರುವುದರಿಂದ ಇವು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವುದಿಲ್ಲ. ಹಾಗಾಗಿ ಗ್ರಾಮ ಪಂಚಾಯತಿಗಳು ಇಂತಹ ಕಟ್ಟಡಗಳಿಗೆ ಸ್ವತ್ತಿನ ಸಂಖ್ಯೆ (Property Number) ನೀಡಲು ಅಥವಾ ನಿರಾಕ್ಷೇಪಣಾ ಪತ್ರ (NOC) ನೀಡಲು ನಿಯಮಗಳಲ್ಲಿ ಅವಕಾಶವಿಲ್ಲ ಎಂದು ನಿರಾಕರಿಸುತ್ತಿವೆ. ಈ ಗೊಂದಲದಿಂದಾಗಿ ರೈತರು ವಿದ್ಯುತ್ ಸಂಪರ್ಕ ಪಡೆಯಲಾಗದೆ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

    ಶಾಸಕರ ಪ್ರಮುಖ ಹಕ್ಕೊತ್ತಾಯಗಳು:

    ಕೋಳಿ ಸಾಕಾಣಿಕೆಯು ಕರ್ನಾಟಕ ಭೂ ಕಂದಾಯ ಅಧಿನಿಯಮದ ಪ್ರಕಾರ ಕೃಷಿ ಪೂರಕ ಚಟುವಟಿಕೆಯಾಗಿದ್ದು, ಈ ಕಟ್ಟಡಗಳು ಸಾಮಾನ್ಯ ವಾಣಿಜ್ಯ ಕಟ್ಟಡಗಳಿಗಿಂತ ಭಿನ್ನ ಸ್ವರೂಪದ್ದಾಗಿವೆ. ಆದ್ದರಿಂದ, ರೈತರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಗ್ರಾಮ ಪಂಚಾಯತಿ NOC ಬದಲಾಗಿ, ಕಂದಾಯ ಇಲಾಖೆಯ ‘ಸಂಬಂಧಿತ ಗ್ರಾಮ ಆಡಳಿತ ಅಧಿಕಾರಿ’ಗಳಿಂದಲೇ (VA) ನಿರಾಕ್ಷೇಪಣಾ ಪತ್ರ ನೀಡಲು ಅವಕಾಶ ಕಲ್ಪಿಸಬೇಕು. ಈ ಕುರಿತು ರಾಜ್ಯಮಟ್ಟದಲ್ಲಿ ಕಂದಾಯ ಇಲಾಖೆಯಿಂದ ಸೂಕ್ತ ಸರ್ಕಾರಿ ಆದೇಶ ಅಥವಾ ಸುತ್ತೋಲೆ ಹೊರಡಿಸಿ ಕೋಳಿ ಸಾಕಾಣಿಕೆದಾರರಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು.

    ಶಾಸಕರ ಈ ಜನಪರ ಕಾಳಜಿಯ ಕೋರಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸಚಿವರು, ಈ ನಿಟ್ಟಿನಲ್ಲಿ ಶೀಘ್ರವೇ ಸೂಕ್ತ ಆದೇಶ ಹೊರಡಿಸಿದರೆ ರಾಜ್ಯದ ಲಕ್ಷಾಂತರ ರೈತರು ಹಾಗೂ ಯುವಜನತೆಗೆ ಬಹುದೊಡ್ಡ ಪ್ರಯೋಜನವಾಗಲಿದೆ ಎಂದು ಶಾಸಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    _Sathish Kapikad

    Share. Facebook Twitter Pinterest LinkedIn Email WhatsApp
    Previous Articleಬೋಳೂರು ಪರಿಸರದಲ್ಲಿ ಒಳಚರಂಡಿ ಸಮಸ್ಯೆ : ಶಾಶ್ವತ ಪರಿಹಾರಕ್ಕೆ ಶಾಸಕರಿಂದ ಕುಡ್ಸೆಂಪ್ ವ್ಯವಸ್ಥಾಪಕ ನಿರ್ದೇಶಕರ ಜೊತೆ ಚರ್ಚೆ
    Next Article ಸಹಕಾರಿ ಪಿತಾಮಹ ಶಿವರಾಯರನ್ನೇ ಮೀರಿಸುತ್ತಿರುವ ಡಾ.ಎಂ.ಎನ್.ರಾಜೇಂದ್ರ ಕುಮಾರ್ : ಮಾಜಿ ಸಚಿವ ಪಾಲೇಮಾರ್ ಶ್ಲಾಘನೆ

    Related Posts

    ಕರಾವಳಿ

    ಹೈ ಕೋರ್ಟ್ ಸರಕಾರಿ ವಕೀಲರಾಗಿ “ಚಿದಾನಂದ ಬಂಟ್ವಾಳ್ ” ನೇಮಕ

    July 18, 2026
    ಕರಾವಳಿ

    ದ.ಕ. ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ 

    July 17, 2026
    ಕರಾವಳಿ

    ಹೆಣ್ಣುಮಕ್ಕಳ ಅಸುರಕ್ಷತೆಗೆ ರಾಜ್ಯ ಸರ್ಕಾರದ ನಿಷ್ಕ್ರಿಯ ಆಡಳಿತ ವ್ಯವಸ್ಥೆಯೇ ಕಾರಣ : ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

    July 17, 2026
    Add A Comment
    Leave A Reply Cancel Reply

    Top Posts

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.