ಬಂಟ್ವಾಳ, ಜುಲೈ 16 : ಬಸ್ಸಿಗಾಗಿ ಕಾಯುತ್ತಿದ್ದ ಯುವತಿಯನ್ನು ದುಷ್ಕರ್ಮಿಯೊಬ್ಬ ಬರ್ಬರವಾಗಿ ಕಡಿದು ಪರಾರಿಯಾಗಿರುವ ಘಟನೆ ಇಂದು ( ಗುರುವಾರ) ಸಂಜೆ ಬಂಟ್ವಾಳ ತಾಲೂಕಿನ ಬಿ ಸಿ ರೋಡ್ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ಬಿ ಸಿ ರೋಡ್ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ಲಾವಣ್ಯ ಎಂಬ ಯುವತಿಯನ್ನು ಅಪರಿಚಿತ ಯುವಕನೋರ್ವ ಹರಿತವಾದ ಅಯುಧದಿಂದಬರ್ಬರವಾಗಿ ಕೊಚ್ಚಿ ಹತ್ಯೆಗೈದಿದ್ದಾನೆ.. ಮೃತರನ್ನು ಕಕ್ಕೆ ಪದವು ನಿವಾಸಿ ಲಾವಣ್ಯ ಎಂದು ಗುರುತಿಸಲಾಗಿದೆ. ಇವರು ಕಲ್ಲಡ್ಕದ ಖಾಸಗಿ ನರ್ಸಿಂಗ್ ಹೋಂನಲ್ಲಿ ಉದ್ಯೋಗಿಯಾಗಿದ್ದರು ಎನ್ನಲಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಲಾವಣ್ಯ ಅವರು ಕಕ್ಯಪದವು ಕಡೆಗೆ ತೆರಳಲು ಕೆಎಸ್‌ಆರ್‌ಟಿಸಿ ಬಸ್ ಹತ್ತಿದ್ದರು. ಬಸ್ಸಿನೊಳಗೆ ಇದ್ದಾಗಲೇ ಈ ಯುವಕ ಪಕ್ಕದಲ್ಲೆ ಓರ್ವ ಯುವಕ ಕುಳಿತಿದ್ದ ಎಂದು ತಿಳಿದು ಬಂದಿದೆ.

ಮಾಹಿತಿ ತಿಳಿದ ತಕ್ಷಣ ಬಂಟ್ವಾಳ ಉಪವಿಭಾಗದ ಹಿರಿಯ ಪೊಲೀಸ್ ಅಧಿಕಾರಿಗಳು, ಪಟ್ಟಣ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಧಾವಿಸಿದರು. ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕೆ ಕೂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಇದೀಗ ಆರೋಪಿಯ ಬಂಧನಕ್ಕಾಗಿ ಪೊಲೀಸರ ವಿಶೇಷ ತಂಡವನ್ನು ರಚಿಸಿ ತೀವ್ರ ಶೋಧಕಾರ್ಯ ಕೈಗೊಳ್ಳಲಾಗಿದೆ.

_Sathish Kapikad

Share.
Leave A Reply

Exit mobile version