ಮಂಗಳೂರು, ಜುಲೈ.25 : ಅಪರಿಚಿತ ವ್ಯಕ್ತಿಯೊಬ್ಬ ರೌಡಿ ಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ಇಂದು ಮಧ್ಯಾಹ್ನ ಮಂಗಳೂರಿನ ಲಾಲ್ ಬಾಗ್ ಸಿಗ್ನಲ್ ಸಮೀಪದ ಸಾಯಿಬಿನ್ ಕಾಂಪ್ಲೆಕ್ಸ್ ಮುಂಭಾಗ ನಡೆದಿದೆ.

ಘಟನೆಯಲ್ಲಿ ಗಾಂಭೀರ ಗಾಯಗೊಂಡ ಯುವಕನನ್ನು ವಿಖ್ಯಾತ್ ಅಲಿಯಾಸ್ ವಿಕ್ಕಿ ಬಪ್ಪಾಲ್ (33) ಎಂದು ಗುರುತಿಸಲಾಗಿದೆ. ಈತ ಒಬ್ಬ ಗಾಂಜಾ ಪೆಡ್ಲರ್ ಎನ್ನಾಲಾಗಿದ್ದು, ಈತನ ಹೆಸರು ರೌಡಿ ಶೀಟರ್ ನಲ್ಲಿ ದಾಖಾಲಾಗಿದೆ ಎನ್ನಲಾಗಿದೆ.

ಇಂದು ಮಧ್ಯಾಹ್ನ 1.40ರ ಸುಮಾರಿಗೆ ವಿಕ್ಕಿ ಬೈಕ್ ನಲ್ಲಿ ತೆರಳುತ್ತಿದ್ದಾಗ ಈತನನ್ನು ಬೈಕ್ ನಲ್ಲಿ ಹಿಂಬಾಲಿಸಿಕೊಡು ಬಂದ ಅಪರಿಚಿತ ವ್ಯಕ್ತಿಯೊಬ್ಬ ವಿಕ್ಕಿ ಮೇಲೆ ಹರಿತವಾದ ಅಯುಧದಿಂದ ದಾಳಿ ಮಾಡಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ವಿಕ್ಕಿಯ ಕುತ್ತಿಗೆ ಸಮೀಪ ಗಂಭೀರ ಪ್ರಮಾಣದ ಗಾಯವಾಗಿದ್ದು, ಈತನನ್ನು ತಕ್ಷಣ ಕುಂಟಿಕಾನ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಬಗ್ಗೆ ಬರ್ಕೆ ಪೊಲೀಸರು ಪ್ರಕರಣ ದಾಖಲಿಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ಆರೋಪಿಯ ಪತ್ತೆಗಾಗಿ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

_Sathish Kapikad

Share.
Leave A Reply

Exit mobile version