Close Menu
SK Media NewsSK Media News
    What's Hot

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ನಗರದ ಪ್ರತಿಷ್ಠಿತ ಸಂಸ್ಥೆ ರೋಹನ್ ಕಾರ್ಪೊರೇಷನ್ ವತಿಯಿಂದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಿಗೆ ಗೌರವ ಸಮ್ಮಾನ
    ಕರಾವಳಿ

    ನಗರದ ಪ್ರತಿಷ್ಠಿತ ಸಂಸ್ಥೆ ರೋಹನ್ ಕಾರ್ಪೊರೇಷನ್ ವತಿಯಿಂದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಿಗೆ ಗೌರವ ಸಮ್ಮಾನ

    July 25, 20261 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    All Potos From SK Media

    ಮಂಗಳೂರು, ಜುಲೈ. 25: ಮಂಗಳೂರಿನ ಪ್ರತಿಷ್ಠಿತ ಸಂಸ್ಥೆಯಾದ ರೋಹನ್ ಕಾರ್ಪೊರೇಷನ್ ವತಿಯಿಂದ ‘ದಿ ಗ್ರಾಟಿಟ್ಯೂಡ್ ಗ್ಯಾದರಿಂಗ್’ (The Gratitude Gathering) ಹೆಸರಿನ ವಿಶೇಷ ಕೃತಜ್ಞತಾ ಸಮಾರಂಭವು ನಗರದ ಬಿಜೈನಲ್ಲಿರುವ ರೋಹನ್ ಸಿಟಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರನ್ನು ಸನ್ಮಾನಿಸಿ ಗೌರವಿಸಲಾಯಿತು.

    ಈ ಸಂದರ್ಭದಲ್ಲಿ ರಾಷ್ಟ್ರೀಯ ಪ್ರಶಸ್ತಿ ವಿಜೇತರಾದ ರೂಪಶ್ರೀ ವರ್ಕಾಡಿ, ನಿರ್ದೇಶಕ ಶಿವಧ್ವಜ್ ಶೆಟ್ಟಿ, ನಿರ್ಮಾಪಕ ಪ್ರಶಾಂತ್ ರೈ, ಡಾ. ಪ್ರದೀಪ್ ಕೆಂಚನೂರು ಹಾಗೂ ಬಾಲನಟ ಆತೀಶ್ ಎಸ್. ಶೆಟ್ಟಿ ಅವರನ್ನು ರೋಹನ್ ಕಾರ್ಪೊರೇಷನ್ ವತಿಯಿಂದ ಸನ್ಮಾನಿಸಲಾಯಿತು.

    ಸನ್ಮಾನ ಸ್ವೀಕರಿಸಿ ಮಾತನಾಡಿದ ನಿರ್ದೇಶಕ ಶಿವಧ್ವಜ್ ಶೆಟ್ಟಿ, ರೋಹನ್ ಕಾರ್ಪೊರೇಷನ್ ನಿರಂತರವಾಗಿ ಸಿನಿಮಾ ಕ್ಷೇತ್ರಕ್ಕೆ ಪ್ರೋತ್ಸಾಹ ನೀಡುತ್ತಿರುವುದನ್ನು ಶ್ಲಾಘಿಸಿದರು. ಇಂತಹ ಗೌರವಗಳು ಕಲಾವಿದರಿಗೆ ಪ್ರೇರಣೆಯಾಗುತ್ತವೆ. ಕರ್ನಾಟಕ ಮತ್ತು ಕರಾವಳಿಯಲ್ಲಿ ಉತ್ತಮ ಕಥಾವಸ್ತುಗಳಿದ್ದು, ಅವುಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಅವಕಾಶಗಳಿವೆ ಎಂದು ಹೇಳಿದರು. ತಮ್ಮ ‘ಇಂಬು’ ಸಿನಿಮಾ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದರು.

    ರೂಪಶ್ರೀ ವರ್ಕಾಡಿ ಮಾತನಾಡಿ, ರೋಹನ್ ಕಾರ್ಪೊರೇಷನ್ ಕಲೆ ಮತ್ತು ಕಲಾವಿದರನ್ನು ಸದಾ ಪ್ರೋತ್ಸಾಹಿಸುತ್ತಿದೆ. ರಾಷ್ಟ್ರೀಯ ಪ್ರಶಸ್ತಿ ವಿಜೇತರನ್ನು ಗೌರವಿಸಿರುವುದು ಸಂತಸದ ಸಂಗತಿ. ತಮಗೆ ದೊರೆತಿರುವ ಈ ಗೌರವವನ್ನು ನಾಡಿನ ಜನತೆಗೆ ಅರ್ಪಿಸುವುದಾಗಿ ಹೇಳಿದರು.

    ರೋಹನ್ ಕಾರ್ಪೊರೇಷನ್‌ನ ಡಿಯೋನ್ ಮೊಂತೆರೋ ಮಾತನಾಡಿ, ರಾಷ್ಟ್ರೀಯ ಪ್ರಶಸ್ತಿ ವಿಜೇತರಿಗೆ ಅಭಿನಂದನೆ ಸಲ್ಲಿಸಿದರು. ಮಂಗಳೂರು ಹಾಗೂ ಇಲ್ಲಿನ ಸಿನಿಮಾ ರಂಗ ಇನ್ನಷ್ಟು ಬೆಳೆಯಬೇಕಿದೆ. ಕಲಾವಿದರ ಪ್ರತಿಭೆ ಮತ್ತು ಪರಿಶ್ರಮವೇ ಅವರನ್ನು ರಾಷ್ಟ್ರ ಮಟ್ಟಕ್ಕೆ ಕೊಂಡೊಯ್ದಿದೆ ಎಂದರು.ಇತ್ತೀಚೆಗೆ ನಗರದಲ್ಲಿ ವಿಜೃಂಭಣೆಯಿಂದ ನಡೆದ ‘ಆನ್ ಈವ್ನಿಂಗ್ ವಿತ್ ಶಾರುಖ್ ಖಾನ್’ ಕಾರ್ಯಕ್ರಮದ ಅಭೂತಪೂರ್ವ ಯಶಸ್ಸಿಗೆ ಕಾರಣರಾದ ಅಭಿಮಾನಿಗಳು, ಬೆಂಬಲಿಗರು, ಸಹಯೋಗಿಗಳು ಮತ್ತು ಹಿತೈಷಿಗಳಿಗೆ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ಈ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಅವರು ತಿಳಿಸಿದರು.

    ಕಾರ್ಯಕ್ರಮದಲ್ಲಿ ತುಷಾನ್ ಸ್ವಾಗತಿಸಿದರು. ಸಾಲೆಟ್ ಡಿಸೋಜಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

    _Sathish Kapikad

    Share. Facebook Twitter Pinterest LinkedIn Email WhatsApp
    Previous ArticleExcellence in Dental Education: Gulf Medical University’s College of Dentistry Sets the Clinical Benchmark with 120 Dental Chairs and a Dedicated Teaching Hospital
    Next Article ಜುಲೈ 29ರಂದು ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗುರುಪೂರ್ಣಿಮೆ ಆಚರಣೆ

    Related Posts

    ಕರಾವಳಿ

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026
    ಕರಾವಳಿ

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026
    ಕರಾವಳಿ

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Add A Comment
    Leave A Reply Cancel Reply

    Top Posts

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.