ಮಂಗಳೂರು, ಜುಲೈ 31: ಭಾರೀ ಮಳೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ (ಆಗಸ್ಟ್ 01)ರಜೆ ಘೋಷಿಸಲಾಗಿದೆ.

ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಸರ್ಕಾರಿ ಹಾಗೂ ಖಾಸಗಿ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ (2nd PU ವರೆಗೆ) ಜುಲೈ 2, ಗುರುವಾರ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ.

ಆದರೆ ಪದವಿ, ವೈದ್ಯಕೀಯ, ಡಿಪ್ಲೊಮಾ ಹಾಗೂ ಇತರ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಈ ರಜೆ ಅನ್ವಯಿಸುವುದಿಲ್ಲ ಎಂದು ತಿಳಿಸಲಾಗಿದೆ.

ಜಿಲ್ಲಾಡಳಿತವು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತವಾಗಿರಲು ಮನವಿ ಮಾಡಿದೆ.

ಮಳೆಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಆದೇಶಗಳನ್ನು ಜಿಲ್ಲಾಡಳಿತದ ವತಿಯಿಂದ ಪ್ರಕಟಿಸಲಗುವುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

_Sathish Kapikad

Share.
Leave A Reply

Exit mobile version