ಮಂಗಳೂರು, ಅಗಸ್ಟ್.03 : ಕುಂದಾಪುರದ ಮೊಳಹಳ್ಳಿಯಲ್ಲಿ ಜನಿಸಿ, ಬಳಿಕ ಪುತ್ತೂರಿನಲ್ಲಿ ನೆಲೆಸಿ ವಕೀಲ ವೃತ್ತಿಯಲ್ಲಿದ್ದರೂ, ಸಹಕಾರಿ ಕ್ಷೇತ್ರದ ಅಭಿವೃದ್ಧಿಗಾಗಿ ಸಹಕಾರಿ ಕ್ಷೇತ್ರಕ್ಕೆ ಅಪಾರ ಕೊಡುಗೆಗಳನ್ನು ನೀಡುತ್ತಾ ಸಾರ್ಥಕ ಸಮಾಜಮುಖಿ ಸೇವೆಯ ಮೂಲಕ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಜನರ ಆರ್ಥಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಏಳಿಗೆಗಾಗಿ ತಮ್ಮ ಬದುಕನ್ನೇ ಮುಡಿಪಾಗಿಟ್ಟ ಮಹಾನ್ ಚೇತನ, ಸಹಕಾರ ರಂಗದ ಪಿತಾಮಹ ‘”ಮೊಳಹಳ್ಳಿ ಶಿವರಾವ್” ಅವರ ಕುರಿತ ‘ತ್ಯಾಗಮಯಿ ಮೊಳಹಳ್ಳಿ’ ಕೃತಿಯ ಲೇಖನವನ್ನು ಬರೆದು ಇಂದು ಪುಸ್ತಕ ಮೂಲಕ ಜನತೆಗೆ ತಲುಪಿಸುವ ಕೆಲಸವನ್ನು ಮಾಡಿರುವ ನಮ್ಮ ಬ್ಯಾಂಕಿನ ಕಿರಿಯ ನಿರೀಕ್ಷಕರು ಹಾಗೂ ಪತ್ರಿಕೋದ್ಯಮದಲ್ಲಿ ಕ್ರೀಡಾ ಬರಹಗಾರರಾಗಿ ಸುಮಾರು 35 ವರ್ಷಗಳಿಂದ ಗುರುತಿಸಿಕೊಂಡಿರುವ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಅಂಚನ್ ಅವರಿಗೆ ಶುಭ ಹಾರೈಸಿದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾದ ಸಹಕಾರ ರತ್ನ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರು, ಈ ಕೃತಿಯು ನಮಗೆಲ್ಲರಿಗೂ ಮಾರ್ಗದರ್ಶಿಯಾಗಿರಲಿ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.

ಅವರು ಸೋಮವಾರ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಸಹಕಾರವನ್ನು ಜೀವನದ ಧೈಯವನ್ನಾಗಿ, ಜನಸೇವೆಯನ್ನು ಜೀವನದ ಪರಮ ಗುರಿಯನ್ನಾಗಿ. ತ್ಯಾಗವನ್ನು ಬದುಕಿನ ಮಾರ್ಗವನ್ನಾಗಿ ಸ್ವೀಕರಿಸಿ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಜನರ ಆರ್ಥಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಏಳಿಗೆಗಾಗಿ ತಮ್ಮ ಬದುಕನ್ನೇ ಮುಡಿಪಾಗಿಟ್ಟು, ಸಹಕಾರದ ಮೂಲಕ ಸಮಾಜದ ಸರ್ವತೋಮುಖ ಅಭಿವೃದ್ಧಿಯ ಕನಸು ಕಂಡ ಮಹಾನ್ ಚೇತನ, ಸಹಕಾರ ರಂಗದ ಪಿತಾಮಹ ಕೀರ್ತಿಶೇಷ ಮೊಳಹಳ್ಳಿ ಶಿವರಾವ್ ಅವರ ಬದುಕು ಹಾಗೂ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿದ ಸಾರ್ಥಕ ಸಮಾಜಮುಖಿ ಸೇವೆಯು ಸದಾ ಸ್ಮರಣೀಯ.ಇಂತಹ ಅಪೂರ್ವ ವ್ಯಕ್ತಿತ್ವದ ಧ್ಯೋತಕವಾಗಿ ಎಸ್ ಸಿಡಿಸಿಸಿ ಬ್ಯಾಂಕ್ ಪ್ರಧಾನ ಕಛೇರಿಯ ಕಿರಿಯ ನಿರೀಕ್ಷಕರಾದ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಇವರು ಬರೆದಿರುವ ‘ತ್ಯಾಗಮಯಿ ಮೊಳಹಳ್ಳಿ’ ಕೃತಿಯನ್ನು ಡುಗಡೆ ಗೊಳಿಸಿ ಮತಾನಾಡಿದರು.

ಲೇಖಕ: ಎಸ್ ಜಗದೀಶ್ಚಂದ್ರ ಅಂಚನ್

ಸಮಾರಂಭದಲ್ಲಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀ ಗೋಪಾಲಕೃಷ್ಣ ಭಟ್, ಬ್ಯಾಂಕ್ ಉಪಾಧ್ಯಕ್ಷ ಶ್ರೀ ವಿನಯ ಕುಮಾರ್ ಸೂರಿಂಜೆ, ಬ್ಯಾಂಕ್ ನಿರ್ದೇಶಕ ಶ್ರೀ ಶಶಿಕುಮಾರ್ ರೈ ಬಾಳ್ಯೊಟ್ಟು, ಶ್ರೀ ರಮೇಶ್, ಶ್ರೀ ಸುಧೀರ್ ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ನಾಳೆ ಮಂಗಳೂರಿನಲ್ಲಿ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಅವರ ‘ತ್ಯಾಗಮಯಿ ಮೊಳಹಳ್ಳಿ’ ಕೃತಿ ಬಿಡುಗಡೆ

_Sathish Kapikad

Share.
Leave A Reply

Exit mobile version