
ಮಂಗಳೂರು, ಆಗಸ್ಟ್.11: ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ರಾಷ್ಟ್ರಭಕ್ತರ ವೇದಿಕೆ, ಮಂಗಳೂರು ದಕ್ಷಿಣ ವತಿಯಿಂದ ನಾಳೆ ಮಧ್ಯಾಹ್ನ 2.30ಕ್ಕೆ ಸರಿಯಾಗಿ ನಗರದ ಕುದ್ಮುಲ್ ರಂಗರಾವ್ ಪುರಭವನ ಬಳಿಯ ರಾಜಾಜಿ ಪಾರ್ಕ್ ನಿಂದ ಗೋವಿಂದ ಪೈ ನವಭಾರತ್ ಸರ್ಕಲ್‌ವರೆಗೆ ತಿರಂಗಾ ಯಾತ್ರೆ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ರಾಷ್ಟ್ರಧ್ವಜವು ಶತಕೋಟಿ ಭಾರತೀಯರ ಸ್ವಾಭಿಮಾನ, ತ್ಯಾಗ ಮತ್ತು ಬಲಿದಾನದ ಪ್ರತೀಕವಾಗಿದೆ. ದೇಶಭಕ್ತಿಯನ್ನು ಜಾಗೃತಗೊಳಿಸುವ ಈ ತಿರಂಗಾ ಯಾತ್ರೆಯಲ್ಲಿ ಮಂಗಳೂರಿನ ವಿದ್ಯಾರ್ಥಿಗಳು, ಮಾಜಿ ಸೈನಿಕರು, ಸಾರ್ವಜನಿಕರು ಸೇರಿದಂತೆ ಎಲ್ಲರೂ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
_Sathish Kapikad