Close Menu
SK Media NewsSK Media News
    What's Hot

    ಯುಪಿಎಸ್‌ಸಿ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 42ನೇ ರ‍್ಯಾಂಕ್ ಗಳಿಸಿದ ರಫೇಲ್ ಯುದ್ಧವಿಮಾನದ ಪೈಲಟ್ ಫ್ಲೈಟ್ ಲೆಫ್ಟಿನೆಂಟ್ ಪ್ರಜ್ವಲ್ ಆರ್. ಶೆಟ್ಟಿ ಅವರ ಪಯಣ

    October 28, 2026

    ಮಂಗಳೂರಿನ ಅಭಿವೃದ್ಧಿಗೆ ನಿಮ್ಮ ಕೊಡುಗೆ ಏನು? ಎಷ್ಟು ಅನುದಾನ ತಂದಿದ್ದೀರಿ? ಶ್ವೇತಪತ್ರ ಹೊರಡಿಸಿ ನೇರಾನೇರ ಚರ್ಚೆಗೆ ಸಿದ್ಧ : ಶಾಸಕ ಕಾಮತ್ ಅವರಿಗೆ ಕಾಂಗ್ರೆಸ್ ಮುಖಂಡ ಎಸಿ ವಿನಯ್ ರಾಜ್ ಸವಾಲು 

    October 28, 2026

    ಕ್ರೀಡಾಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಎಂ.ಆರ್. ಪೂವಮ್ಮ ಅವರು ಪ್ರತಿಷ್ಠಿತ ರಾಜ್ಯಮಟ್ಟದ ‘ವಂದನಾ ಪ್ರಶಸ್ತಿ’ಗೆ ಆಯ್ಕೆ

    October 28, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಪರರ ಜೀವ ಉಳಿಸುವ ಅಂಗಾಂಗ ದಾನದ ಅರಿವು ಮೂಡಿಸುವುದು ಅಗತ್ಯ  : ರೆಡ್‌ಕ್ರಾಸ್‌ನಿಂದ ನಡೆದ ವಿಶ್ವ. ಅಂಗಾಂಗ ದಾನ ದಿನಾಚರಣೆ ಉದ್ಘಾಟಿಸಿ ಡಾ.ರವಿಶಂಕರ್ ಶೆಟ್ಟಿ
    ಕರಾವಳಿ

    ಪರರ ಜೀವ ಉಳಿಸುವ ಅಂಗಾಂಗ ದಾನದ ಅರಿವು ಮೂಡಿಸುವುದು ಅಗತ್ಯ  : ರೆಡ್‌ಕ್ರಾಸ್‌ನಿಂದ ನಡೆದ ವಿಶ್ವ. ಅಂಗಾಂಗ ದಾನ ದಿನಾಚರಣೆ ಉದ್ಘಾಟಿಸಿ ಡಾ.ರವಿಶಂಕರ್ ಶೆಟ್ಟಿ

    August 13, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು : ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕ ಮತ್ತು ಯೂತ್ ರೆಡ್‌ಕ್ರಾಸ್ ಘಟಕದ ವತಿಯಿಂದ ವಿಶ್ವ ಅಂಗಾಂಗ ದಾನ ದಿನಾಚರಣೆ ಗುರುವಾರ ನಗರದ ರೆಡ್‌ಕ್ರಾಸ್ ಶತಮಾನೋತ್ಸವ ಭವನದ ಪ್ರೇರಣಾ ಸಭಾಂಗಣದಲ್ಲಿ ನಡೆಯಿತು.

    ಕಾರ್ಯಕ್ರಮ ಉದ್ಘಾಟಿಸಿದ ಜೀವ ಸಾರ್ಥಕತೆಯ ರಾಜ್ಯ ಸಂಯೋಜಕ ಡಾ.ರವಿಶಂಕರ್ ಶೆಟ್ಟಿ ಮಾತನಾಡಿ ” ಪರರ ಜೀವ ಉಳಿಸುವ ಅಂಗಾಂಗ ದಾನಕ್ಕಿಂತ ಮಿಗಿಲಾದ ದಾನವಿಲ್ಲ. ಜನತೆ ಸ್ವಯಂ ಪ್ರೇರಿತರಾಗಿ ಅಂಗಾಂಗ ದಾನಕ್ಕೆ ನೋಂದಣಿಯಾಗುವ ನಿಟ್ಟಿನಲ್ಲಿ ವ್ಯಾಪಕ ಅರಿವು ಮೂಡಿಸುವ ಅನಿವಾರ್ಯತೆ ಇದೆ. ಖಾಸಗಿ ಅಸ್ಪತ್ರೆಗಳು, ರೆಡ್‌ಕ್ರಾಸ್‌ನಂತಹ ಸೇವಾ ಸಂಸ್ಥೆಗಳು ಅಂಗಾಂಗ ದಾನದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ‘ಎಂದರು

    ಮಿದುಳು ನಿಷ್ಕ್ರಿಯ ಆದವರ ಅಂಗಾಂಗ ದಾನದಲ್ಲಿ (198) ಕರ್ನಾಟಕ ದೇಶದಲ್ಲಿ ತೃತೀಯ ಸ್ಥಾನದಲ್ಲಿದೆ. ರಾಜ್ಯದಲ್ಲಿ 5 ಸಾವಿರಕ್ಕೂ ಅಧಿಕ ಮಂದಿಗೆ ಕಿಡ್ನಿ ದಾನದ ಅಗತ್ಯವಿದೆ. ಆದರೆ ನೋಂದಣಿ ಸಂಖ್ಯೆ ತೀರಾ ಕಡಿಮೆ. ಮಂಗಳೂರು ಶಿಕ್ಷಣ ಕೇಂದ್ರವಾಗಿ ಬೆಳೆದಿದ್ದರೂ ಅಂಗಾಂಗ ದಾನದ ಬಗ್ಗೆ ಹೆಚ್ಚಿನ ಅರಿವು ಇಲ್ಲ. ಜನರಲ್ಲಿ ಇರುವ ತಪ್ಪು ತಿಳುವಳಿಕೆಗಳನ್ನು ನಿವಾರಿಸಿ ಅಂಗಾಂಗ ದಾನಕ್ಕೆ ಪ್ರೇರಣೆ ನೀಡುವ ಕೆಲಸವಾಗಬೇಕು ಎಂದು ಅವರು ಹೇಳಿದರು.

    ಮುಖ್ಯ ಅತಿಥಿಗಳಾದ ಭಾರತೀಯ ವೈದ್ಯಕೀಯ ಸಂಘದ ಮಂಗಳೂರು ಘಟಕದ ಅಧ್ಯಕ್ಷ ಡಾ.ಸದಾನಂದ ಪೂಜಾರಿ ಮತ್ತು ಎಎಂಸಿ ಮಂಗಳೂರು ಘಟಕದ ಅಧ್ಯಕ್ಷ ಡಾ.ಪ್ರಶಾಂತ್.ಬಿ. ಅವರು ಅಂಗಾಂಗ ದಾನದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

    ಅಂಗಾಂಗ ದಾನ ಪಡೆದ ಡಾ.ಸುಭಾಶ್ಚಂದ್ರ ರೈ ಮಾತನಾಡಿ ಸಕಾಲದಲ್ಲಿ ಅಂಗಾಂಗ ದಾನ ಮಾಡಿದವರು ನನಗೆ ಮರುಜನ್ಮ ನೀಡಿದರು’ ಎಂದರು.

    ರೆಡ್‌ಕ್ರಾಸ್ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಯೂತ್ ರೆಡ್‌ಕ್ರಾಸ್ ಉಪ ಸಮಿತಿ ನಿರ್ದೇಶಕಿ ಡಾ.ಸುಮನಾ.ಬಿ. ಮುಖ್ಯ ಅತಿಥಿಯನ್ನು ಪರಿಚಯಿಸಿದರು. ರೆಡ್‌ಕ್ರಾಸ್ ನಿರ್ದೇಶಕರಾದ ಯತೀಶ್ ಬೈಕಂಪಾಡಿ, ಪಿ.ಬಿ.ಹರೀಶ್ ರೈ ಯೇನೆಪೊಯ ವಿ.ವಿ.ಯ ಯೂತ್ ರೆಡ್‌ಕ್ರಾಸ್ ನೋಡಲ್ ಅಧಿಕಾರಿ ಡಾ.ನಿತ್ಯಶ್ರೀ ಬಿ.ವಿ., ಬೆಸೆಂಟ್ ಕಾಲೇಜಿನ ಯೂತ್ ರೆಡ್‌ಕ್ರಾಸ್ ಯೋಜನಾಧಿಕಾರಿ ದೀಕ್ಷಿತಾ ಉಪಸ್ಥಿತರಿದ್ದರು.

    ರೆಡ್‌ಕ್ರಾಸ್ ಉಪಾಧ್ಯಕ್ಷ ಡಾ.ಬಿ.ಸಚ್ಚಿದಾನಂದ ರೈ ಸ್ವಾಗತಿಸಿ, ಕಾರ್ಯದರ್ಶಿ ಡಾ.ಸತೀಶ್‌ಕುಮಾರ್ ಶೆಟ್ಟಿ ವಂದಿಸಿದರು. ವಿದ್ಯಾರ್ಥಿನಿ ಖೈರುನ್ನಿಸಾ ಕಾರ್ಯಕ್ರಮ ನಿರೂಪಿಸಿದರು.

    _Sathish Kapikad

    Share. Facebook Twitter Pinterest LinkedIn Email WhatsApp
    Previous Articleಆಟಿ ಅಮಾವಾಸ್ಯೆ : ವೇದಂ ವತಿಯಿಂದ ಕದ್ರಿ ಹಾಗೂ ವೆಲೆನ್ಸಿಯಾ ಶಾಖೆಗಳಲ್ಲಿ ಹಾಲೆಮರದ ಕಷಾಯ ವಿತರಣೆ
    Next Article ರಾಜ್ಯ ಮಟ್ಟದ ಅಥ್ಲೆಟಿಕ್ಸ್‌ನಲ್ಲಿ ಕಟೀಲು ಇಂಗ್ಲಿಷ್ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿನಿಯ ಸಾಧನೆ

    Related Posts

    ಕರಾವಳಿ

    ಯುಪಿಎಸ್‌ಸಿ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 42ನೇ ರ‍್ಯಾಂಕ್ ಗಳಿಸಿದ ರಫೇಲ್ ಯುದ್ಧವಿಮಾನದ ಪೈಲಟ್ ಫ್ಲೈಟ್ ಲೆಫ್ಟಿನೆಂಟ್ ಪ್ರಜ್ವಲ್ ಆರ್. ಶೆಟ್ಟಿ ಅವರ ಪಯಣ

    October 28, 2026
    ಕರಾವಳಿ

    ಮಂಗಳೂರಿನ ಅಭಿವೃದ್ಧಿಗೆ ನಿಮ್ಮ ಕೊಡುಗೆ ಏನು? ಎಷ್ಟು ಅನುದಾನ ತಂದಿದ್ದೀರಿ? ಶ್ವೇತಪತ್ರ ಹೊರಡಿಸಿ ನೇರಾನೇರ ಚರ್ಚೆಗೆ ಸಿದ್ಧ : ಶಾಸಕ ಕಾಮತ್ ಅವರಿಗೆ ಕಾಂಗ್ರೆಸ್ ಮುಖಂಡ ಎಸಿ ವಿನಯ್ ರಾಜ್ ಸವಾಲು 

    October 28, 2026
    ಕರಾವಳಿ

    ಕ್ರೀಡಾಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಎಂ.ಆರ್. ಪೂವಮ್ಮ ಅವರು ಪ್ರತಿಷ್ಠಿತ ರಾಜ್ಯಮಟ್ಟದ ‘ವಂದನಾ ಪ್ರಶಸ್ತಿ’ಗೆ ಆಯ್ಕೆ

    October 28, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.