
ನವದೆಹಲಿ, ಆಗಸ್ಟ್ 15: ಇಂದು ಭಾರತದಾದ್ಯಂತ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸ್ವಾತಂತ್ರ್ಯೋತ್ಸವದ ಸಡಗರ ಮನೆಮಾಡಿದೆ. ದೆಹಲಿಯ ಐತಿಹಾಸಿಕ ಕೆಂಪುಕೋಟೆ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜರೋಹಣ ನೆರವೇರಿಸಿದರು.

ಪ್ರಧಾನಿ ನರೇಂದ್ರ ಮೋದಿ ಸೇನಾಪಡೆಗಳಿಂದ ಗೌರವ ವಂದನೆ ಸ್ವೀಕರಿಸಿ, ಬಳಿಕ ದೇಶವನ್ನು ಉದ್ದೇಶಿಸಿ ಮಾತನಾಡಿದ್ದರು.

ಕೆಂಪುಕೋಟೆ ಮೇಲೆ ಧ್ವಜಾರೋಹಣ ನೆರವೇರಿ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು ನನಸಾಗಿಸಲು ದೇಶದ 140 ಕೋಟಿ ಜನರು ಒಗ್ಗಟ್ಟಿನಿಂದ, ಪರಿಶ್ರಮದಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದ್ದರು.

ಈ ಶುಭ ಸಂದರ್ಭದಲ್ಲಿ ಕೆಂಪು ಕೋಟೆಯ ಅಂಗಳದಲ್ಲಿ ದೇಶದ ಗಣ್ಯಾತಿಗಣ್ಯರು ಸಂಪುಟ ಸಚಿವರು ರಾಜತಾಂತ್ರಕರು ಸೇನಾಪಡೆಗಳ ಮುಖ್ಯಸ್ಥರು ಹಾಗೂ ಸಾವಿರಾರು ಸಂಖ್ಯೆಯ ಸಾರ್ವಜನಿಕರು ಮತ್ತು ಯುವ ಸಮೂಹ ಭಾಗವಹಿಸಿ ಸ್ವಾತಂತ್ರ್ಯೋತ್ಸವದ ವೈಭವಕ್ಕೆ ಸಾಕ್ಷಿಯಾಗಿದ್ದಾರೆ.
ಈ ಬಾರಿ ಕೆಂಪುಕೋಟೆಯಲ್ಲಿ ಮೊದಲ ಬಾರಿಗೆ ವಂದೇ ಮಾತರಂ ಸಂಪೂರ್ಣ ಗೀತೆ ಹಾಡಲಾಯಿತು.


ದೇಶಾದ್ಯಂತ ಜನರು 80 ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದ್ದಾರೆ. 1947 ರಲ್ಲಿ ಬ್ರಿಟಿಷ್ ಆಳ್ವಿಕೆಯಿಂದ ವಿಮೋಚನೆಗೊಂಡ ನೆನಪಿಗಾಗಿ ಪ್ರತಿ ವರ್ಷ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತದೆ.
ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು 13ನೇ ಬಾರಿಗೆ ಕೆಂಪು ಕೋಟೆಯಿಂದ ರಾಷ್ಟ್ರಧ್ವಜವನ್ನು ಹಾರಿಸಿದರು.
_Sathish Kapikad


