Close Menu
SK Media NewsSK Media News
    What's Hot

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಬಂಟ್ಸ್ ಹಾಸ್ಟೆಲ್ : 20ನೇ ವರ್ಷದ ಸಾರ್ವಜನಿಕ ಶ್ರೀ  ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ – ಕಾರ್ಯಕ್ರಮದ ಸಂಪೂರ್ಣ ವಿವರ 
    ಕರಾವಳಿ

    ಬಂಟ್ಸ್ ಹಾಸ್ಟೆಲ್ : 20ನೇ ವರ್ಷದ ಸಾರ್ವಜನಿಕ ಶ್ರೀ  ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ – ಕಾರ್ಯಕ್ರಮದ ಸಂಪೂರ್ಣ ವಿವರ 

    August 23, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: ಬಂಟ್ಸ್ ಹಾಸ್ಟೆಲ್ ನಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಸೆ.14 ರಿಂದ 16ರ ವರೆಗೆ ನಡೆಯಲಿರುವ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಶ್ರೀಮತಿ ಗೀತಾ ಎಸ್.ಎಂ.ಶೆಟ್ಟಿ ಸಭಾಂಗಣದಲ್ಲಿ ಜರಗಿತು.

    ಮುಖ್ಯ ಅತಿಥಿಯಾಗಿ ಭಾಗವಹಿಸಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದ ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಜಗದೀಶ್ ಶೇಣವ ಅವರು ಮಾತನಾಡಿ, ಸನಾತನ ಧರ್ಮ ಅತ್ಯಂತ ಶೇಷ್ಟವಾದ ಧರ್ಮ. ಈ ಹೆಮ್ಮೆಯ ಜೊತೆಗೆ ನಮ್ಮಜಾತಿಯ ಬಗ್ಗೆಯೂ ಅಭಿಮಾನ ಪಡೋಣ. ಕಳೆದ ಎರಡು ದಶಕಗಳಿಂದ ವಿಭಿನ್ನ ರೀತಿಯಲ್ಲಿ ಅತ್ಯಂತ ವ್ಯವಸ್ಥಿತವಾಗಿ ಸಂಘಟಿಸುತ್ತಿರುವ ಇಲ್ಲಿನ ಗಣೇಶೋತ್ಸವದಲ್ಲಿ ಮಕ್ಕಳು ಹಾಗೂ ಯುವ ಜನಾಂಗ ಹೆಚ್ಚು ಸಂಖ್ಯೆಯಲ್ಲಿ ತೊಡಗಿಸಿಕೊಳ್ಳುವಂತಾಗಲಿ ಎಂದು ಅವರು ಆಶಿಸಿದರು.

    ಶ್ರೀ ಸಿದ್ದಿ ವಿನಾಯಕ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಅವರು ಮಾತನಾಡಿ, ಪ್ರತಿಫಲದ ಅಪೇಕ್ಷೆ ಇಲ್ಲದೆ ದುಡಿಯುವ ನೂರಾರು ಕಾರ್ಯಕರ್ತರಿಂದ ಇಲ್ಲಿನ ಗಣೇಶೋತ್ಸವ ಈವರೆಗೆ ಯಶಸ್ಸು ಗಳಿಸಿದ್ದು, ಸಮಸ್ತ ಸಮಾಜದ ಒಗ್ಗಟ್ಟಿಗೆ ಗಣೇಶೋತ್ಸವ ಪ್ರೇರಣೆ ನೀಡಲಿ ಎಂದರು.
    ಸೀಮಾ ಜಗದೀಶ್ ಶೇಣವ ಮುಖ್ಯ ಅತಿಥಿಯಾಗಿದ್ದರು.

    ಗಣೇಶೋತ್ಸವದ ಪ್ರಯುಕ್ತ ನಡೆಯುವ ಹೊರೆಕಾಣಿಕೆ, ಅನ್ನಸಂತರ್ಪಣೆ, ಕ್ರೀಡಾಕೂಟ, ಬಂಟ ಕಲಾ ಸಂಗಮ,ಭಜನಾ ತಂಡ, ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಬಗ್ಗೆ ಸಂಚಾಲಕರಾದ ಅಶ್ವತ್ತಾಮ ಹೆಗ್ಡೆ, ಸಂಭ್ರಮ ಶೆಟ್ಟಿ, ಉಲ್ಲಾಸ್ ಆರ್ ಶೆಟ್ಟಿ ಪೆರ್ಮುದೆ, ಸಂತೋಷ್ ಶೆಟ್ಟಿ ಶೆಡ್ಡೆ, ಹಾಗೂ ದಿವಾಕರ ಸಾಮಾನಿ ಚೇಳಾರ್ ಗುತ್ತು ಅವರು ಪೂರಕ ಮಾಹಿತಿ ನೀಡಿದರು.

    ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಜಯಶೀಲ ಅಡ್ಯಂತಾಯ ಅಡ್ಯಾರ್ ಗುತ್ತು, ಬಂಟರ ಯಾನೆ ನಾಡವರ ಮಾತೃ ಸಂಘದ ಉಪಾಧ್ಯಕ್ಷ ಹೇಮನಾಥ ಶೆಟ್ಟಿ ಕಾವು, ಪ್ರಧಾನ ಕಾರ್ಯದರ್ಶಿ ಎಂ. ಕರುಣಾಕರ ಶೆಟ್ಟಿ, ಜೊತೆ ಕಾರ್ಯದರ್ಶಿ ಪದ್ಮನಾಭ ಶೆಟ್ಟಿ, ಸಿದ್ಧಿ ವಿನಾಯಕ ಪ್ರತಿಷ್ಟಾನದ ಟ್ರಷ್ಠಿಗಳಾದ ಶೆಡ್ಡೆ ಮಂಜುನಾಥ ಭಂಡಾರಿ, ಕೃಷ್ಣಪ್ರಸಾದ್ ರೈ, ಡಾ. ಆಶಾ ಜ್ಯೋತಿ ರೈ, ಗಣೇಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಸದಾಶಿವ ಶೆಟ್ಟಿ ಬಿಜೈ ಹಾಗೂವಿವಿಧ ಬಂಟರ ಸಂಘಗಳ ಅಧ್ಯಕ್ಷರುಗಳಾದ ಬಾಳ ಜಗನ್ನಾಥ ಶೆಟ್ಟಿ, ಕೃಷ್ಣಮೂರ್ತಿರೈ ಬಿಜೈ , ರವೀಂದ್ರ ರೈ ಕಲ್ಲಿಮಾರ್ , ರತ್ನಾಕರ ಶೆಟ್ಟಿ ಎಕ್ಕಾರ್, ಸತ್ಯಪ್ರಸಾದ ಶೆಟ್ಟಿ ಜಪ್ಪಿನಮೊಗರು, ಆನಂದ ಶೆಟ್ಟಿ ಕಾವೂರು, ನಾಗೇಶ್ ಶೆಟ್ಟಿ ಕಂಕನಾಡಿ, ಶೇಖರ ಶೆಟ್ಟಿ, ಶೋಭಾ ಹೆಗ್ಡೆ ಮೂಡಬಿದ್ರೆ ಮತ್ತಿತರರು ಉಪಸ್ಥಿತರಿದ್ದರು.

    ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಜಯಶೀಲ ಅಡ್ಯಂತಾಯ ಸ್ವಾಗತಿಸಿದರು. ಸಮಿತಿಯ ಸಮನ್ವಯಕಾರ ಸತೀಶ್ ಶೆಟ್ಟಿ ಕೊಡಿಯಾಲಬೈಲ್ ಕಾರ್ಯಕ್ರಮ ನಿರೂಪಿಸಿದರು. ಕ್ರೀಡಾ ಸಮಿತಿಯ ಸಂಚಾಲಕ ಜಗದೀಶ್ ಶೆಟ್ಟಿ ಬಿಜೈ ವಂದಿಸಿದರು.

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleರಾಜ್ಯದಲ್ಲಿ  ‘ಅನಲಾಗ್ ಪನ್ನೀರ್’ಗೆ ನಿಷೇಧ : ಏನಿದು ಅನಲಾಗ್ ಪನ್ನೀರ್? ನಿಷೇಧಕ್ಕೆ ಕಾರಣವೇನು? ಇಲ್ಲಿದೆ ವಿವರ 
    Next Article ಟ್ಯಾಲೆಂಟ್ ಹಂಟ್ ಎಕ್ಸಾಮ್’ ಪೋಸ್ಟರ್ ಬಿಡುಗಡೆ: ಆಕಾಶ್ ಎಜುಕೇಷನಲ್ ಸರ್ವೀಸಸ್ ನಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಸಾಮರ್ಥ್ಯ ಅಳೆಯಲು ಅತಿದೊಡ್ಡ ಪ್ರತಿಭಾನ್ವೇಷಣೆ ಪರೀಕ್ಷೆ

    Related Posts

    ಕರಾವಳಿ

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026
    ಕರಾವಳಿ

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026
    ಕರಾವಳಿ

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Add A Comment
    Leave A Reply Cancel Reply

    Top Posts

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.