Close Menu
SK Media NewsSK Media News
    What's Hot

    ಕ್ರೀಡಾಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಎಂ.ಆರ್. ಪೂವಮ್ಮ ಅವರು ಪ್ರತಿಷ್ಠಿತ ರಾಜ್ಯಮಟ್ಟದ ‘ವಂದನಾ ಪ್ರಶಸ್ತಿ’ಗೆ ಆಯ್ಕೆ

    October 28, 2026

    ನ.3ರಿಂದ 15 : ಮಾಂಡ್ ಸೊಭಾಣ್ ಸಂಘಟನೆಯ ವತಿಯಿಂದ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮ್ಮೇಳನ -ಸತತ 12 ದಿನ, 12 ಗಂಟೆ ಹಾಗೂ 12 ನಿಮಿಷಗಳ ನಿರಂತರ ಗಾಯನದ ಮೂಲಕ ಗಿನ್ನೆಸ್ ದಾಖಲೆಗೆ ಪ್ರಯತ್ನ

    October 28, 2026

    ಸತತ ಸೋಲುಗಳ ಹತಾಶೆಯಿಂದ ಪ್ರಧಾನಿಗಳ ತಂದೆಯವರನ್ನು ನಿಂದನೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಅವರ ಹಿರಿತನಕ್ಕೆ ಶೋಭೆಯಲ್ಲ: ಶಾಸಕ ಕಾಮತ್ 

    October 27, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಟ್ಯಾಲೆಂಟ್ ಹಂಟ್ ಎಕ್ಸಾಮ್’ ಪೋಸ್ಟರ್ ಬಿಡುಗಡೆ: ಆಕಾಶ್ ಎಜುಕೇಷನಲ್ ಸರ್ವೀಸಸ್ ನಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಸಾಮರ್ಥ್ಯ ಅಳೆಯಲು ಅತಿದೊಡ್ಡ ಪ್ರತಿಭಾನ್ವೇಷಣೆ ಪರೀಕ್ಷೆ
    ಕರಾವಳಿ

    ಟ್ಯಾಲೆಂಟ್ ಹಂಟ್ ಎಕ್ಸಾಮ್’ ಪೋಸ್ಟರ್ ಬಿಡುಗಡೆ: ಆಕಾಶ್ ಎಜುಕೇಷನಲ್ ಸರ್ವೀಸಸ್ ನಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಸಾಮರ್ಥ್ಯ ಅಳೆಯಲು ಅತಿದೊಡ್ಡ ಪ್ರತಿಭಾನ್ವೇಷಣೆ ಪರೀಕ್ಷೆ

    August 24, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು , ಆಗಸ್ಟ್ 24, 2026 : ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಆಕಾಶ್ ಎಜುಕೇಷನಲ್ ಸರ್ವೀಸಸ್ ಲಿಮಿಟೆಡ್ (ಎಇಎಸ್ಎಲ್), ‘ಆಕಾಶ್ ನ್ಯಾಷನಲ್ ಟ್ಯಾಲೆಂಟ್ ಹಂಟ್ ಎಕ್ಸಾಮ್’ ಅನ್ನು ಅಧಿಕೃತವಾಗಿ ಪ್ರಾರಂಭಿಸಿದೆ.

    ಕಳೆದ 16 ವರ್ಷಗಳಲ್ಲಿ 1 ಕೋಟಿಗೂ ಹೆಚ್ಚು ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಈ ಪರೀಕ್ಷೆಯು ಭಾರತದ ಅತ್ಯಂತ ದೀರ್ಘಕಾಲದ ಮತ್ತು ಅತಿದೊಡ್ಡ ಪ್ರತಿಭಾ ಗುರುತಿಸುವಿಕೆ ವೇದಿಕೆಯಾಗಿ ಹೊರಹೊಮ್ಮಿದೆ ಎಂದು ಸಂಸ್ಥೆಯ ಸ್ಟೇಟ್ ಹೆಡ್ ಡಾ. ವಿಕ್ರಮ್ ಚಕ್ರವರ್ತಿ ಯವರು ಹೇಳಿದರು.

    ಅವರು ನಗರದಲ್ಲಿಂದು “ಟ್ಯಾಲೆಂಟ್ ಹಂಟ್ ಎಕ್ಸಾಮ್’ ಪೋಸ್ಟರ್ ಬಿಡುಗಡೆಗೊಳಿಸಿದ ಬಳಿಕ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು.

    ಪರೀಕ್ಷೆಯ ಮುಖ್ಯ ವೈಶಿಷ್ಟ್ಯಗಳು ವಿಜ್ಞಾನಾಧಾರಿತ ಮೌಲ್ಯಮಾಪನ ಕೇವಲ ಅಂಕಗಳನ್ನು ನೀಡದೆ, ವಿದ್ಯಾರ್ಥಿಯ ವಿಷಯ ಜ್ಞಾನ, ವಿಶ್ಲೇಷಣಾತ್ಮಕ ಸಾಮರ್ಥ್ಯ ಮತ್ತು ಪರೀಕ್ಷಾ ನಡವಳಿಕೆಯನ್ನು ವೈಜ್ಞಾನಿಕವಾಗಿ ವಿಶ್ಲೇಷಿಸುವ ‘ನೈದಾನಿಕ ಮೌಲ್ಯಮಾಪನ’ಮಾದರಿಯಲ್ಲಿ ಪರೀಕ್ಷೆ ನಡೆಯಲಿದೆ.

    ANTHE ಇಂಟೆಲಿಜೆನ್ಸ್ ವರದಿ ಪರೀಕ್ಷೆಯ ನಂತರ ಪ್ರತಿಯೊಬ್ಬ ವಿದ್ಯಾರ್ಥಿಗೂ ವಿವರವಾದ ವರದಿ ಸಿಗಲಿದೆ. ಇದು ಸಿಇಎಸ್ಪಿ ಟಿಟಿಪಿ ಮತ್ತು ಎಐಕ್ಯು ಆಧಾರದಲ್ಲಿ ವಿದ್ಯಾರ್ಥಿಯ ಬಲ ಮತ್ತು ಸುಧಾರಿಸಬೇಕಾದ ಕ್ಷೇತ್ರಗಳನ್ನು ಗುರುತಿಸುತ್ತದೆ.ಶೇಕಡ 100% ವರೆಗೆ ವಿದ್ಯಾರ್ಥಿವೇತನ: ಅರ್ಹ ವಿದ್ಯಾರ್ಥಿಗಳಿಗೆ ಆಕಾಶ್ ಸಂಸ್ಥೆಯ ಕ್ಲಾಸ್ರೂಮ್, ಹೈಬ್ರಿಡ್ ಮತ್ತು ಡಿಜಿಟಲ್ ಕೋರ್ಸ್ಗಳಿಗೆ 100% ವರೆಗೆ ವಿದ್ಯಾರ್ಥಿವೇತನ ಸಿಗಲಿದೆ.

    ₹2.5 ಕೋಟಿ ನಗದು ಬಹುಮಾನ ಅತ್ಯುತ್ತಮ ಸಾಧನೆ ಮಾಡುವ ವಿದ್ಯಾರ್ಥಿಗಳಿಗೆ ಒಟ್ಟು ₹2.5 ಕೋಟಿ ಮೌಲ್ಯದ ನಗದು ಬಹುಮಾನ ನೀಡಲಾಗುತ್ತದೆ.ರಾಷ್ಟ್ರೀಯ ಮಟ್ಟದ ನೀಟ್ (NEET) ಮತ್ತು ಜೆಇಇ (JEE) ಪರೀಕ್ಷೆಗಳಲ್ಲಿ ಆಕಾಶ್ ವಿದ್ಯಾರ್ಥಿಗಳು ಸಾಧಿಸುತ್ತಿರುವ ಯಶಸ್ಸಿಗೆ ಈ ಪರೀಕ್ಷೆಯೇ ಅಡಿಪಾಯವಾಗಿದೆ. ನೀಟ್ ಯುಜಿ 2026ರ ಅಗ್ರ 100 ಶ್ರೇಯಾಂಕಿತರಲ್ಲಿ 31 ವಿದ್ಯಾರ್ಥಿಗಳು ಹಾಗೂ ಜೆಇಇ ಅಡ್ವಾನ್ಸ್ಡ್ 2026ರ ಅಗ್ರ 100 ರ್ಯಾಂಕ್ಗಳಲ್ಲಿ 7 ವಿದ್ಯಾರ್ಥಿಗಳು ಈ ಹಿಂದೆ ಆಂಟ್ಹೆ ಪರೀಕ್ಷೆಯ ಮೂಲಕವೇ ತಮ್ಮ ಶೈಕ್ಷಣಿಕ ಪಯಣ ಆರಂಭಿಸಿದ್ದರು ಎಂದು ಅವರು ವಿವರ ನೀಡಿದರು.

    ಮಂಗಳೂರು, ಉಡುಪಿ ಹಾಗೂ ಶಿವಮೊಗ್ಗ ಶಾಖೆಗಳ ಸಹಾಯಕ ನಿರ್ದೇಶಕರಾದ ಶ್ರೀ ಶ್ಯಾಮ್ ಪ್ರಸಾದ್ ಅವರು ಮಾತನಾಡಿ, ಎಇಎಸ್ಎಲ್ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ಚಂದ್ರ ಶೇಖರ್ ಗಾರಿಸಾ ರೆಡ್ಡಿ ಅವರು “ANTHE ಕೇವಲ ವಿದ್ಯಾರ್ಥಿವೇತನ ನೀಡುವ ಪರೀಕ್ಷೆಯಲ್ಲ. ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಸಾಮರ್ಥ್ಯವನ್ನು ಆರಂಭಿಕ ಹಂತದಲ್ಲೇ ಅರ್ಥೈಸಿಕೊಂಡು, ರಾಷ್ಟ್ರೀಯ ಮಟ್ಟದಲ್ಲಿ ತಾವು ಎಲ್ಲಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ನೆರವಾಗುವ ಅತ್ಯುತ್ತಮ ಸಾಧನವಾಗಿದೆ” ಎಂದು ಈಗಾಗಲೇ ಹೇಳಿದ್ದಾರೆ ಎಂದು ತಿಳಿಸಿದರು.

    ಮಂಗಳೂರು ಶಾಖಾ ಮುಖ್ಯಸ್ಥರಾದ ಸೂರಜ್ ಪ್ರಭು ಅವರು ಮಾತನಾಡಿ, 5 ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ಮುಕ್ತವಾಗಿದ್ದು, ಆನ್ಲೈನ್ ಮತ್ತು ಆಫ್ಲೈನ್ ಎರಡೂ ಮಾದರಿಗಳಲ್ಲಿ ನಡೆಯಲಿದೆ.

    ಅಧಿಕೃತ ANTHE ಪೋರ್ಟಲ್ ಅಥವಾ ಹತ್ತಿರದ ಆಕಾಶ್ ಕೇಂದ್ರಗಳ ಮೂಲಕ ನೋಂದಾಯಿಸಿಕೊಳ್ಳಬಹುದು. ಆನ್ಲೈನ್ ಪರೀಕ್ಷೆ ಅಕ್ಟೋಬರ್ 27 ರಿಂದ ನವೆಂಬರ್ 1, 2026 , ಆಫ್ಲೈನ್ ಪರೀಕ್ಷೆ ಅಕ್ಟೋಬರ್ 11, 25 ಮತ್ತು ನವೆಂಬರ್ 1, 2026 ನಡೆಯಲಿದೆ ಎಂದು ತಿಳಿಸಿದರು.

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleಬಂಟ್ಸ್ ಹಾಸ್ಟೆಲ್ : 20ನೇ ವರ್ಷದ ಸಾರ್ವಜನಿಕ ಶ್ರೀ  ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ – ಕಾರ್ಯಕ್ರಮದ ಸಂಪೂರ್ಣ ವಿವರ 
    Next Article ರಸ್ತೆ ವಿಭಾಜಕದಿಂದ ಮಂಗಳಾದೇವಿ ಬ್ರಹ್ಮರಥೋತ್ಸವದ ಸಂಚಾರಕ್ಕೆ ಅಡ್ಡಿ: ಪ್ರಸ್ತಾವನೆ ಕೈ  ಬಿಡುವಂತೆ ಶಾಸಕ ಕಾಮತ್ ಆಗ್ರಹ 

    Related Posts

    ಕರಾವಳಿ

    ಕ್ರೀಡಾಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಎಂ.ಆರ್. ಪೂವಮ್ಮ ಅವರು ಪ್ರತಿಷ್ಠಿತ ರಾಜ್ಯಮಟ್ಟದ ‘ವಂದನಾ ಪ್ರಶಸ್ತಿ’ಗೆ ಆಯ್ಕೆ

    October 28, 2026
    ಕರಾವಳಿ

    ನ.3ರಿಂದ 15 : ಮಾಂಡ್ ಸೊಭಾಣ್ ಸಂಘಟನೆಯ ವತಿಯಿಂದ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮ್ಮೇಳನ -ಸತತ 12 ದಿನ, 12 ಗಂಟೆ ಹಾಗೂ 12 ನಿಮಿಷಗಳ ನಿರಂತರ ಗಾಯನದ ಮೂಲಕ ಗಿನ್ನೆಸ್ ದಾಖಲೆಗೆ ಪ್ರಯತ್ನ

    October 28, 2026
    ಕರಾವಳಿ

    ಸತತ ಸೋಲುಗಳ ಹತಾಶೆಯಿಂದ ಪ್ರಧಾನಿಗಳ ತಂದೆಯವರನ್ನು ನಿಂದನೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಅವರ ಹಿರಿತನಕ್ಕೆ ಶೋಭೆಯಲ್ಲ: ಶಾಸಕ ಕಾಮತ್ 

    October 27, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.