
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ ಮಂಗಳೂರು, ಇದರ ಮಹಾಸಭೆಯಲ್ಲಿ 2025-26 ನೇ ಸಾಲಿನ ವ್ಯವಹಾರದಲ್ಲಿ ಸರ್ವತೋಮುಖ ಪ್ರಗತಿಯನ್ನು ಸಾಧಿಸಿದ ಹಾಗೂ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನೊಂದಿಗೆ ಉತ್ತಮ ಬಾಂಧವ್ಯ ಹೊಂದಿದ ಸಹಕಾರಿ ಸಂಸ್ಥೆ ಎಂದು ಗುರುತಿಸಿಕೂಡಿದ್ದ ದೈವಜ್ಞ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಗೆ ಸತತ ನಾಲ್ಕನೇ ಬಾರಿಗೆ “ಸಾಧನಾ ಪ್ರಶಸ್ತಿ”ಯನ್ನುನೀಡಿ ಗೌರವಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ. ಎಂ. ಎನ್. ರಾಜೇಂದ್ರ ಕುಮಾರ್ ರವರ ಉಪಸ್ಥಿತಿಯಲ್ಲಿ ದೈವಜ್ಞ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಶ್ರೀ ರಮಾನಂದ ಶೇಟ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಎಂ. ಸಂತೋಷ್ ಶೇಟ್ ರವರಿಗೆ ಈ “ಸಾಧನ ಪ್ರಶಸ್ತಿ”ಯನ್ನು ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಸೊಸೈಟಿಯ ನಿರ್ದೇಶಕರಾದ ಶ್ರೀ ಗಜೇಂದ್ರ ಶೇಟ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ನಿರ್ದೇಶಕರು ಉಪಸ್ಥಿತರಿದ್ದರು.
_Sathish Kapikad


