Close Menu
SK Media NewsSK Media News
    What's Hot

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ಬಂಟರು ಬಿಪಿಎಲ್ ಕಾಡ್೯ನಿಂದ ಮುಕ್ತಿ ಪಡೆಯಬೇಕು : ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿಯ ಸಭೆಯಲ್ಲಿ  ಬರೋಡ ಶಶಿಧರ ಶೆಟ್ಟಿ
    ಕರಾವಳಿ

    ಬಂಟರು ಬಿಪಿಎಲ್ ಕಾಡ್೯ನಿಂದ ಮುಕ್ತಿ ಪಡೆಯಬೇಕು : ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿಯ ಸಭೆಯಲ್ಲಿ  ಬರೋಡ ಶಶಿಧರ ಶೆಟ್ಟಿ

    August 26, 20263 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು: ತಳ ಮಟ್ಟದಲ್ಲಿರುವ ಬಂಟರನ್ನು ಮೇಲಕ್ಕೆ ತರುವ ಪ್ರಯತ್ನ ನಡೆಯಬೇಕಾಗಿದೆ. ಪ್ರತಿಯೊಬ್ಬ ಬಂಟರು ಬಿಪಿಎಲ್ ಕಾಡ್೯ನಿಂದ ಮುಕ್ತಿ ಪಡೆಯ ಬೇಕು. ಬಂಟರಲ್ಲಿ ಛಲ ಇದ್ದಾಗ ಮಾತ್ರ ಇಂಥವುಗಳನ್ನು ಮಾಡಲು ಸಾಧ್ಯವಿದೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟ ಕಳೆದ ಏಳೆಂಟು ವರ್ಷಗಳಿಂದ ಬಡವರ ಕಣ್ಣೀರು ಒರೆಸುವ ಕೆಲಸ ಮಾಡುತ್ತಿದೆ. ಐಕಳ ಹರೀಶ್ ಶೆಟ್ಟಿ ಅವರು ಒಕ್ಕೂಟದ ಅಧ್ಯಕ್ಷರಾಗಿ 25 ಕೋಟಿ ರೂಪಾಯಿಗೂ ಮಿಕ್ಕಿ ಪರಿಹಾರ ಧನವನ್ನು ಬಡವರಿಗೆ ವಿತರಿಸಿದ್ದಾರೆ.

    ಪ್ರಸಕ್ತ ಮುಲ್ಕಿಯಲ್ಲಿ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣವಾಗುತ್ತಿರುವ ಸಭಾಭವನದ ಕಾಮಗಾರಿ ತ್ವರಿತಗತಿಯಲ್ಲಿ ಸಾಗುತ್ತಿದ್ದು ಅದರ ಉದ್ಘಾಟನೆಗೆ ನಾವೆಲ್ಲರೂ ಸಾಕ್ಷಿಯಾಗೋಣ ಎಂದು ಒಕ್ಕೂಟದ ವಿಶೇಷ ಮಹಾ ನಿರ್ದೇಶಕರು, ಬರೋಡ ಶಶಿ ಕ್ಯಾಟರಿಂಗ್ ನ ಮಾಲಕರಾದ ಶಶಿಧರ ಶೆಟ್ಟಿ ಬರೋಡ ತಿಳಿಸಿದರು.

    ಬಂಟ್ಸ್ ಹಾಸ್ಟೇಲ್ ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ನಡೆದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿಯ ಸಭೆಯನ್ನು ಶಶಿಧರ ಶೆಟ್ಟಿ ಬರೋಡ ಅವರು ಉದ್ಘಾಟಿಸಿ ಮಾತನಾಡಿದರು.

    ನಮ್ಮಲ್ಲಿ ಅನೇಕ ಸಾಧಕರಿದ್ದಾರೆ. ಡಾ ಕೆ ಪ್ರಕಾಶ್ ಶೆಟ್ಟಿ, ಕನ್ಯಾನ‌ ಸದಾಶಿವ ಶೆಟ್ಟಿ, ತೋನ್ಸೆ ಆನಂದ ಶೆಟ್ಟಿ, ಶಶಿಕಿರಣ್ ಶೆಟ್ಟಿ, ರಾಕ್ಷಿ ಬಿಲ್ಡಸ್೯ನ ರಾಜೇಶ್ ಶೆಟ್ಟಿ ಮೊದಲಾದವರ ಸಾಧನೆ ನಮಗೆಲ್ಲ ದಾರಿದೀಪವಾಗಿದೆ. ಇಂತಹ ಅನೇಕ ಮಂದಿ ಸಾಧಕರು ನಮ್ಮ ಸಮಾಜದಲ್ಲಿದ್ದಾರೆ. ಬಂಟ ಸಮಾಜ ಇತರ ಸಮಾಜಕ್ಕೆ ಮಾದರಿಯಾಗ ಬೇಕು. ಒಳ್ಳೆಯ ಕೆಲಸಗಳನ್ನು ಮಾಡುವಾಗ ಪರವಿರೋಧ ಚರ್ಚೆಗಳು ಬರುವುದು ಸಹಜ. ಎಲ್ಲರೂ ಸಮಾಜದ ಅಭಿವೃದ್ದಿಗಾಗಿ ಕೆಲಸ ಮಾಡ ಬೇಕೆಂದರು.

    ಒಕ್ಕೂಟದ ನಿರ್ದೇಶಕ ಮುನಿಯಾಲು ಉದಯಕುಮಾರ್ ಶೆಟ್ಟಿ ಮಾತನಾಡಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ನಿರಂತರ ಸಮಾಜಪರ ಕೆಲಸದಲ್ಲಿ ತೊಡಗಿಕೊಂಡಿದೆ‌. ಐಕಳ ಹರೀಶ್ ಶೆಟ್ಟಿಯವರ ಸಂಘಟನೆ ಮತ್ತು ಪದಾಧಿಕಾರಿಗಳ ಕೆಲಸ ಕಾರ್ಯಗಳಿಂದ ಒಕ್ಕೂಟ ಹಲವು ಕೋಟಿ ರೂ.ಗಳನ್ನು ಬಡವರ ವಿವಿಧ ಕಾರ್ಯಗಳಿಗೆ ವಿನಿಯೋಗಿಸಿದೆ ಎಂದರು.

    ಸಮಾರಂಭದಲ್ಲಿ ಉದ್ಯಮಿ ಒಕ್ಕೂಟದ ನಿರ್ದೇಶಕ ಹುಬ್ಬಳ್ಳಿ- ಧಾರಾವಾಡ ಬಂಟರ ಸಂಘದ ಅಧ್ಯಕ್ಷ ರಾಜೇಂದ್ರ ವಿ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

    ಬಡತನದಲ್ಲಿ ಹುಟ್ಟಿದ ನಾನು ಬಡತನ ಏನೆಂಬುದನ್ನು ತಿಳಿದಿದ್ದೇನೆ. ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರ ಕನಸಿನ ಯೋಜನೆ ಮುಲ್ಕಿಯಲ್ಲಿ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ಸಭಾಭವನ ನಿರ್ಮಾಣವಾಗುತ್ತಿದೆ. ಐಕಳ ಹರೀಶ್ ಶೆಟ್ಟಿ ಅವರು ಅನೇಕ ವರ್ಷಗಳಿಂದ ಸಮಾಜದ ಕೆಲಸ ಮಾಡುತ್ತಿದ್ದಾರೆ ಅವರ ಹೆಸರಿನಲ್ಲಿ ನಾನು ಕೂಡಾ ಸಭಾಭವನ ನಿರ್ಮಿಸುತ್ತೇನೆ ಎಂದರು.

    ನಮ್ಮ ಆಲೋಚನೆಗಳಿಂದ ನಮ್ಮ ಬದುಕನ್ನು ಕಟ್ಟಿ ಕೊಳ್ಳಲು ಸಾಧ್ಯವಿದೆ. ನೌಕರರನ್ನು ಪ್ರೀತಿಯಿಂದ ಕಂಡಾಗ ನಾವು ಮತ್ತಷ್ಟು ಅಭಿವೃದ್ದಿ ಹೊಂದಲು ಸಾಧ್ಯವಿದೆ ಎಂದು ರಾಜೇಂದ್ರ ಶೆಟ್ಟಿ ತಿಳಿಸಿದರು.

    ಸಭೆಯ ಅಧ್ಯಕ್ಷತೆ ವಹಿಸಿದ್ದ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರು ಮಾತನಾಡಿ, ಎಲ್ಲಾ ಬಂಟರ ಸಂಘಗಳು ಪ್ರತೀವರ್ಷದಂತೆ ನೋಂದಾವಣೆಯನ್ನು ಮಾಡಿಕೊಂಡು ಸಂಘದ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ವಿನಂತಿಸಿದರು. ಮುಲ್ಕಿಯಲ್ಲಿ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣವಾಗುತ್ತಿರುವ ಸಭಾಭವನವನ್ನು ಡಿಸೆಂಬರ್ ತಿಂಗಳ ಒಳಗೆ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲು ಎಲ್ಲರ ಸಹಕಾರ ಬೇಕು ಎಂದರು.

    ಪೋಷಕ ಸದಸ್ಯ ನವೀನ್ ಚಂದ್ರ ಶೆಟ್ಟಿ ಪಡುಬಿದ್ರೆ ಮಾತನಾಡಿ ಐಕಳ ಹರೀಶ್ ಶೆಟ್ಟಿ ಅವರು ಕಾಲೇಜು ದಿನಗಳಿಂದಲೇ ಸಮಾಜ ಸೇವೆಯನ್ನು ಮಾಡಿಕೊಂಡಿರುವುದನ್ನು ನಾನು ನೋಡಿದ್ದೇನೆ ಎಂದರು.

    ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಮಾತನಾಡಿ ನಾನು ಐಕಳ ಹರೀಶ್ ಶೆಟ್ಟಿಯವರೊಂದಿಗೆ ಅನೇಕ ವರ್ಷಗಳಿಂದ ಜೊತೆಯಾಗಿ ಕೆಲಸ ಮಾಡಿದ್ದೇನೆ. ಒಕ್ಕೂಟದಲ್ಲೂ ಅವರ ಜೊತೆಗಿದ್ದು ಕೆಲಸ ಮಾಡುವ ಅವಕಾಶ ದೊರೆತಿದೆ ಎಂದರು.

    ಸಭೆಯಲ್ಲಿ ನಿರ್ದೇಶಕರಾದ ಶಶಿಧರ ಶೆಟ್ಟಿ ಇನ್ನಂಜೆ, ಇಂಜಿನಿಯರ್ ಗೋಪಾಲ ಭಟ್, ಸುಧಾಕರ ಶೆಟ್ಟಿ ಉತ್ರಿಂಜೆ ಬೆಹರಿನ್, ಸತೀಶ್ಚಂದ್ರ ಶೆಟ್ಟಿ ಅಕ್ಕುಂಜೆ, ಒಕ್ಕೂಟದ ಕೋಶಾಧಿಕಾರಿ ಉಳ್ತೂರು ಮೋಹನ್ ದಾಸ್ ಶೆಟ್ಟಿ, ಯುವ ವಿಭಾಗದ ಸಂಚಾಲಕ ಗಿರೀಶ್ ಶೆಟ್ಟಿ ತೆಳ್ಳಾರ್, ಸಂಚಾಲಕ ಬಾಲಕೃಷ್ಣ ರೈ ಕೊಲ್ಲಾಡಿ ಮೊದಲಾದವರು ಉಪಸ್ಥಿತರಿದ್ದರು.

    ಸಭೆಯಲ್ಲಿ ಹಿರಿಯಡ್ಕ ಬಂಟರ ಸಂಘದ ನೂತನ ಅಧ್ಯಕ್ಷ ರವೀಂದ್ರನಾಥ ಹೆಗ್ಡೆ, ಹೆಬ್ರಿ ಬಂಟರ ಸಂಘದ ಅಧ್ಯಕ್ಷ ಹರ್ಷ ಶೆಟ್ಟಿ, ಕುಂದಾಪುರ ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ಡಾ ಚೇತನ್ ಶೆಟ್ಟಿ ಕೋವಾಡಿ, ಮೂಡಬಿದ್ರೆ ಯುವ ಬಂಟರ ಸಂಘದ ಅಧ್ಯಕ್ಷ ಸಂದೀಪ್ ಶೆಟ್ಟಿ, ಸುರತ್ಕಲ್ ಬಂಟರ ಸಂಘದ ಯುವ ಸಮಿತಿಯ ಸಂಚಾಲಕ ಶಿಶಿರ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ವಿವಿಧ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

    ಒಕ್ಕೂಟದ ಆಡಳಿತ ಮಂಡಳಿ ಸಭೆಯಲ್ಲಿ ತ್ರೈಮಾಸಿಕ ಲೆಕ್ಕಪತ್ರಗಳ ಮಂಡನೆ, ವರದಿ ವಾಚನ, ಲೆಕ್ಕಪತ್ರಗಳಿಗೆ ಮಂಜೂರಾತಿ, ಫಲಾನುಭವಿ ಗಳಿಗೆ ನೀಡಲ್ಪಟ್ಟ ಆರ್ಥಿಕ ಸಹಾಯಧನಕ್ಕೆ ಮಂಜೂರಾತಿ ಪಡೆಯಲಾಯಿತು. 30 ನೇ ವಾರ್ಷಿಕ ಮಹಾಸಭೆಗೆ ದಿನ ನಿಗದಿಪಡಿಸಲಾಯಿತು.

    ಐಕಳ ಹರೀಶ್ ಶೆಟ್ಟಿ ಸ್ವಾಗತಿಸಿದರು. ಗಿರೀಶ್ ಶೆಟ್ಟಿ ವಂದಿಸಿದರು. ಅನೂಪ್ ಶೆಟ್ಟಿ ಸುರತ್ಕಲ್ ಪ್ರಾರ್ಥಿಸಿದರು. ಡಾ ಪ್ರಿಯಾ ಶೆಟ್ಟಿ, ಡಾ ಮಂಜುಳಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

    _Sathish Kapikad 

    Share. Facebook Twitter Pinterest LinkedIn Email WhatsApp
    Previous Articleಕುಳಾಯಿ ಮಾಧವ ಕೀರ್ತನೋತ್ಸವ-2026 ಸಂಪನ್ನ : ವಿಜಯ ಕುಕ್ಯಾನ್ ಅವರಿಗೆ ಮಾಧವ ಕೀರ್ತನೋತ್ಸವ ಪ್ರಶಸ್ತಿ
    Next Article ಬಂಟರ ಯಾನೆ ನಾಡವರ ಮಾತೃಸಂಘ: ಮಂಗಳೂರು ತಾಲೂಕು ಸಮಿತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

    Related Posts

    ಕರಾವಳಿ

    ವಾರ್ಡ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ : ತಳಮಟ್ಟದ ಕಾರ್ಯಕರ್ತರಿಗೆ “ನಾನು ನಿಮ್ಮ ಜೊತೆ ಇದ್ದೇನೆ” ಎಂಬ ಭರವಸೆ 

    September 11, 2026
    ಕರಾವಳಿ

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ : 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ವೈಭವದ ಸಾಮೂಹಿಕ ರಂಗಪೂಜೆ

    September 11, 2026
    ಕರಾವಳಿ

    ಡಿ.ಫಾರ್ಮಾ, ಬಿ.ಫಾರ್ಮಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶ : ಸೆ.15 ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    September 11, 2026
    Add A Comment
    Leave A Reply Cancel Reply

    Top Posts

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026

    ಮಂಗಳೂರು,ಬೆಂಗಳೂರಿನಲ್ಲಿ ಉದ್ಯೋಗಾವಕಾಶ : ಜುಲೈ 14ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

    July 10, 2026

    ರಾಜ್ಯದ 35 ಜಿಲ್ಲೆಗೆ ನೂತನ ಅಧ್ಯಕ್ಷರ ನೇಮಕ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ನೇಮಕ 

    September 10, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.