Close Menu
SK Media NewsSK Media News
    What's Hot

    ಕ್ರೀಡಾಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಎಂ.ಆರ್. ಪೂವಮ್ಮ ಅವರು ಪ್ರತಿಷ್ಠಿತ ರಾಜ್ಯಮಟ್ಟದ ‘ವಂದನಾ ಪ್ರಶಸ್ತಿ’ಗೆ ಆಯ್ಕೆ

    October 28, 2026

    ನ.3ರಿಂದ 15 : ಮಾಂಡ್ ಸೊಭಾಣ್ ಸಂಘಟನೆಯ ವತಿಯಿಂದ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮ್ಮೇಳನ -ಸತತ 12 ದಿನ, 12 ಗಂಟೆ ಹಾಗೂ 12 ನಿಮಿಷಗಳ ನಿರಂತರ ಗಾಯನದ ಮೂಲಕ ಗಿನ್ನೆಸ್ ದಾಖಲೆಗೆ ಪ್ರಯತ್ನ

    October 28, 2026

    ಸತತ ಸೋಲುಗಳ ಹತಾಶೆಯಿಂದ ಪ್ರಧಾನಿಗಳ ತಂದೆಯವರನ್ನು ನಿಂದನೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಅವರ ಹಿರಿತನಕ್ಕೆ ಶೋಭೆಯಲ್ಲ: ಶಾಸಕ ಕಾಮತ್ 

    October 27, 2026
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರ್ನಾಟಕ
    • ಕರಾವಳಿ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home » ರಾಷ್ಟ್ರೀಯ ಮಕ್ಕಳ ಉತ್ಸವ : ಸೆ. 4ರಂದು ಶ್ರೀ ಕ್ಷೇತ್ರ ಕದ್ರಿಯಲ್ಲಿ 44ನೇ ವರ್ಷದ ಶ್ರೀಕೃಷ್ಣ ವೇಷ ಸ್ಪರ್ಧೆ – 44 ವಿಭಾಗಗಳು, 12 ವೇದಿಕೆಗಳು, ಏಕಕಾಲದಲ್ಲಿ ಸ್ಪರ್ಧೆ
    ಕರಾವಳಿ

    ರಾಷ್ಟ್ರೀಯ ಮಕ್ಕಳ ಉತ್ಸವ : ಸೆ. 4ರಂದು ಶ್ರೀ ಕ್ಷೇತ್ರ ಕದ್ರಿಯಲ್ಲಿ 44ನೇ ವರ್ಷದ ಶ್ರೀಕೃಷ್ಣ ವೇಷ ಸ್ಪರ್ಧೆ – 44 ವಿಭಾಗಗಳು, 12 ವೇದಿಕೆಗಳು, ಏಕಕಾಲದಲ್ಲಿ ಸ್ಪರ್ಧೆ

    August 28, 2026Updated:August 28, 20262 Mins Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ಮಂಗಳೂರು, ಆಗಸ್ಟ್. 28  : ಕಲ್ಕೂರ ಪ್ರತಿಷ್ಠಾನ ಹಾಗೂ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಸಹಯೋಗದಲ್ಲಿ ಆಯೋಜಿಸಲಾಗುತ್ತಿರುವ ರಾಷ್ಟ್ರೀಯ ಮಕ್ಕಳ ಉತ್ಸವ ಶ್ರೀಕೃಷ್ಣ ವೇಷ ಸ್ಪರ್ಧೆ ಸೆಪ್ಟೆಂಬರ್ 4ರಂದು ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಆವರಣದಲ್ಲಿ ನಡೆಯಲಿದೆ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ ತಿಳಿಸಿದರು.

    ನಗರದಲ್ಲಿಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆ ಹಾಗೂ ಪ್ರತಿಭೆಯನ್ನು ಬೆಳೆಸುವ ಉದ್ದೇಶದಿಂದ ಕಳೆದ 44 ವರ್ಷಗಳಿಂದ ನಡೆಯುತ್ತಿರುವ ಈ ಉತ್ಸವದಲ್ಲಿ ಈ ಬಾರಿ 44 ವಿಭಾಗಗಳ ಸ್ಪರ್ಧೆಗಳು 12 ವೇದಿಕೆಗಳಲ್ಲಿ ಏಕಕಾಲದಲ್ಲಿ ನಡೆಯಲಿವೆ. ಬೆಳಿಗ್ಗೆ 9ರಿಂದ ರಾತ್ರಿ 12ರವರೆಗೆ ವಿವಿಧ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ದೇಶದ ವಿವಿಧೆಡೆಯಿಂದ 3 ಸಾವಿರಕ್ಕೂ ಅಧಿಕ ಮಕ್ಕಳು ಭಾಗವಹಿಸುವ ನಿರೀಕ್ಷೆಯಿದೆ ಎಂದರು.

    ತೊಟ್ಟಿಲ ಕೃಷ್ಣ, ಕಂದ ಕೃಷ್ಣ, ಮುದ್ದು ಕೃಷ್ಣ, ತುಂಟ ಕೃಷ್ಣ, ಬಾಲಕೃಷ್ಣ, ಕಿಶೋರ ಕೃಷ್ಣ, ಗೀತಾ ಕೃಷ್ಣ, ರಾಧಾಕೃಷ್ಣ, ಯಶೋದ ಕೃಷ್ಣ, ದೇವಕಿ ಕೃಷ್ಣ, ವಸುದೇವ ಕೃಷ್ಣ, ಯಕ್ಷ ಕೃಷ್ಣ ಹಾಗೂ ಕೃಷ್ಣ-ಕುಚೇಲ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ.

    ಇದೇ ವೇಳೆ ಆಗಸ್ಟ್ 30ರಂದು ಬೆಳಿಗ್ಗೆ 9ರಿಂದ ಶಾರದಾ ವಿದ್ಯಾಲಯ, ಕೊಡಿಯಾಲ್‌ಬೈಲ್‌ನಲ್ಲಿ ವಿದ್ಯಾರ್ಥಿಗಳಿಗಾಗಿ ಶ್ರೀ ಕೃಷ್ಣ ಗಾನ , ರಂಗೋಲಿಯಲ್ಲಿ ಕೃಷ್ಣ , ಕೃಷ್ಣ ಕಥಾ ಸ್ಪರ್ಧೆಗಳು ಪೂರ್ವಭಾವಿಯಾಗಿ ನಡೆಯಲಿದೆ . ಆನ್ಲೈನ್ ವಿಭಾಗದಲ್ಲಿ ವೃಕ್ಷ ಕೃಷ್ಣ , ಗೋಪಾಲ ಕೃಷ್ಣ , ಕೃಷ್ಣ ರೀಲ್ಸ್ ಸ್ಪರ್ಧೆಗಳು ನಡೆಯಲಿದೆ ಎಂದು ಎಸ್. ಪ್ರದೀಪ್ ಕುಮಾರ್ ಕಲ್ಕೂರ ಅವರು ವಿವರ ನೀಡಿದರು.

    ನವನೀತ್ ಕದ್ರಿಯವರು ಮತಾನಾಡಿ,  ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲ ಮಕ್ಕಳಿಗೂ ಉಡುಗೊರೆ, ಪ್ರಶಂಸನಾ ಪತ್ರ ಹಾಗೂ ಭಗವದ್ಗೀತೆಯ ಪ್ರತಿಯನ್ನು ನೀಡಲಾಗುವುದು. ಪ್ರತಿ ವಿಭಾಗದ ವಿಜೇತರಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ನೀಡಲಾಗುತ್ತಿದ್ದು, ಪ್ರವೇಶ ಶುಲ್ಕ ಇರುವುದಿಲ್ಲ. ಸ್ಪರ್ಧಾ ಸ್ಥಳದಲ್ಲೇ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ ಎಂದರು .

    ಸೆ. 4ರಂದು ಬೆಳಿಗ್ಗೆ 9ಕ್ಕೆ ಶ್ರೀಕೃಷ್ಣ ವರ್ಣ ವೈಭವ, ಬೆಳಿಗ್ಗೆ 10ಕ್ಕೆ ಮಹಿಳೆಯರಿಂದ ಸಾಂಪ್ರದಾಯಿಕ ಮೊಸರು ಕಡೆಯುವ ಕಾರ್ಯಕ್ರಮ ಹಾಗೂ ಮಧ್ಯಾಹ್ನ ಶ್ರೀಕೃಷ್ಣ ಜನ್ಮ ಮಹೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ ಎಂದರು .

    ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕಲ್ಕೂರ ಅವರು ಮನವಿ ಮಾಡಿದರು.

    ಮತ್ತೋರ್ವ ಪ್ರಮುಖರಾದ ಶಾರಾದ ಕಾಲೇಜಿನ ಪ್ರಾಂಶುಪಾಲರಾದ ದಯಾನಂದ ಕಟೀಲ್ ಅವರು ಪೂರಕ ಮಾಹಿತಿಗಳನ್ನು ನೀಡಿದರು.

    ಪತ್ರಿಕಾಗೋಷ್ಠಿಯಲ್ಲಿ ಪ್ರತಿಷ್ಠಾನದ ಪ್ರಮುಖರಾದ ಸುಧಾಕರ್ ರಾವ್ ಪೇಜಾವರ, ಪ್ರಭಾಕರ ಜೋಶಿ, ತಾರಾನಾಥ ಶೆಟ್ಟಿ, ಶಿವಪ್ರಸಾದ್, ವಿಜಯಲಕ್ಷ್ಮಿ, ಮಂಜುಳಾ ಶೆಟ್ಟಿ, ಪೂರ್ಣಿಮಾ ಹಾಗೂ ಮತ್ತಿತರರ ಪ್ರಮುಖರು ಉಪಸ್ಥಿತರಿದ್ದರು.

    _Sathish Kapikad

    Share. Facebook Twitter Pinterest LinkedIn Email WhatsApp
    Previous Article21 ವರ್ಷದೊಳಗಿನವರಿಗೆ ಸಿಗರೇಟ್ ಮಾರಾಟ ನಿಷೇಧ : ಸಿಂಗಲ್ ಮಾರಾಟಕ್ಕೂ ಬ್ರೇಕ್ – ನಿರಂತರ ತಪಾಸಣೆಗೆ ಎಡಿಸಿ ಸೂಚನೆ
    Next Article Thumbay Media launches Gulf Education, strengthening its growing five-title publishing portfolio

    Related Posts

    ಕರಾವಳಿ

    ಕ್ರೀಡಾಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಎಂ.ಆರ್. ಪೂವಮ್ಮ ಅವರು ಪ್ರತಿಷ್ಠಿತ ರಾಜ್ಯಮಟ್ಟದ ‘ವಂದನಾ ಪ್ರಶಸ್ತಿ’ಗೆ ಆಯ್ಕೆ

    October 28, 2026
    ಕರಾವಳಿ

    ನ.3ರಿಂದ 15 : ಮಾಂಡ್ ಸೊಭಾಣ್ ಸಂಘಟನೆಯ ವತಿಯಿಂದ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮ್ಮೇಳನ -ಸತತ 12 ದಿನ, 12 ಗಂಟೆ ಹಾಗೂ 12 ನಿಮಿಷಗಳ ನಿರಂತರ ಗಾಯನದ ಮೂಲಕ ಗಿನ್ನೆಸ್ ದಾಖಲೆಗೆ ಪ್ರಯತ್ನ

    October 28, 2026
    ಕರಾವಳಿ

    ಸತತ ಸೋಲುಗಳ ಹತಾಶೆಯಿಂದ ಪ್ರಧಾನಿಗಳ ತಂದೆಯವರನ್ನು ನಿಂದನೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಅವರ ಹಿರಿತನಕ್ಕೆ ಶೋಭೆಯಲ್ಲ: ಶಾಸಕ ಕಾಮತ್ 

    October 27, 2026
    Add A Comment
    Leave A Reply Cancel Reply

    Top Posts

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    About Us
    About Us

    Email : skmedianews@gmail.com
    Phone : +91 95914 89084

    Most Popular

      ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ : ಸರಕಾರಿ ಲೇಡೀಗೋಶನ್ ಆಸ್ಪತ್ರೆ ಮತ್ತು ಕೆ.ಎಂ.ಸಿ.ತಜ್ಞರ ಜಂಟಿ ಪರಿಶ್ರಮದಿಂದ ಪುನರ್ಜನ್ಮ ಪಡೆದ ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿ ಮಹಿಳೆ

    September 27, 2026

    ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಾನ್ ಅಂಗದಾನ : ಜೀವನದ ಒಂದು ಉಡುಗೊರೆ – ಪ್ರಕಾಶ್ ಆಚಾರ್ಯ ಕುಟುಂಬಕ್ಕೆ ಗೌರವ ಪೂರ್ವಕ ಕೃತಜ್ಞತೆ ಅರ್ಪಣೆ

    September 19, 2026

    ಯೂತ್ ಕಾಂಗ್ರೆಸ್ ಮುಖಂಡನ ಕೋಟ್ಯಾಂತರ ರೂ. ಹನಿಟ್ರ್ಯಾಪ್ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ “ಬಿಜೆವೈಎಂ” ಆಗ್ರಹ

    June 9, 2026
    Our Picks
    Facebook X (Twitter) Instagram Pinterest
    • ಮುಖಪುಟ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.